Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ಉದ್ಯೋಗವನ್ನು ಭರ್ತಿ ಮಾಡಲು ಆಗ್ರಹ : ಮಡಿಕೇರಿಯಲ್ಲಿ ಡಿವೈಎಫ್‍ಐ ಪ್ರತಿಭಟನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ಉದ್ಯೋಗವನ್ನು ಭರ್ತಿ ಮಾಡಲು ಆಗ್ರಹ : ಮಡಿಕೇರಿಯಲ್ಲಿ ಡಿವೈಎಫ್‍ಐ ಪ್ರತಿಭಟನೆ

ಆಗಷ್ಟ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.29 NEWS DESK : ಕೊಡಗು ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಯುವ ಸಮೂಹವನ್ನು ನಿರುದ್ಯೋಗ ಸಮಸ್ಯೆಯಿಂದ ಮುಕ್ತಿ ಕಾಣಿಸುವಂತೆ ಒತ್ತಾಯಿಸಿ ಭಾರತ ಪ್ರಜಾಸತಾತ್ಮಕ ಯುವ ಫೆಡರೇಷನ್ ನ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಸದಸ್ಯರು ಉದ್ಯೋಗ ಬೇಕೆಂದು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಸಮಿತಿಯ ಜಿಲ್ಲಾಧ್ಯಕ್ಷ ಹೆಚ್.ಆರ್.ರಾಚಪ್ಪಾಜಿ ಮಾತನಾಡಿ, ಸುಮಾರು ಆರೂವರೆ ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಕೊಡಗು ಜಿಲ್ಲೆಯ ಕಾರ್ಮಿಕ ವರ್ಗ, ಸಣ್ಣ ರೈತರು, ಮಧ್ಯಮ ವರ್ಗದ ಜನತೆ ಹಾಗೂ ವಿದ್ಯಾರ್ಥಿಗಳು ತಮ್ಮ ಕೆಲಸ ಕಾರ್ಯಗಳಿಗಾಗಿ ನಿತ್ಯ ಸರಕಾರಿ ಕಚೇರಿಗಳಿಗೆ ಭೇಟಿ ನೀಡುತ್ತಾರೆ. ಆದರೆ ಸಿಬ್ಬಂದಿಗಳ ಕೊರತೆಯಿಂದಾಗಿ ಅರ್ಜಿಗಳು ವಿಲೇವಾರಿಯಾಗದೆ ಮತ್ತು ಅಗತ್ಯ ಕೆಲಸಗಳನ್ನು ಮಾಡಿಸಿಕೊಳ್ಳಲಾಗದೆ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶಿಕ್ಷಣ ಮುಗಿಸಿರುವ ಯುವ ಸಮೂಹ ಉದ್ಯೋಗಕ್ಕಾಗಿ ಪರಿತಪಿಸುತ್ತಿದ್ದಾರೆ. ಉದ್ಯೋಗ ವಿನಿಯಮ ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಂಡವರು ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ವರ್ಷಕ್ಕೆ ಸುಮಾರು 2 ಕೋಟಿಯಷ್ಟು ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದ ಸರಕಾರ ವರ್ಷಕ್ಕೆ ಒಂದು ಲಕ್ಷ ಉದ್ಯೋಗವನ್ನು ಕೂಡ ನೀಡುತ್ತಿಲ್ಲವೆಂದು ಟೀಕಿಸಿದರು. ಉದ್ಯೋಗ ಸೃಷ್ಟಿ ಮಾಡುವ ಯಾವುದೇ ಹೊಸ ಯೋಜನೆಗಳನ್ನು ಸರಕಾರ ಯುವ ಜನರಿಗಾಗಿ ರೂಪಿಸಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರಿ ಕಚೇರಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿ ಯುವ ನಿರುದ್ಯೋಗಿಗಳನ್ನು ವಂಚಿಸಲಾಗುತ್ತಿದೆ ಎಂದು ಆರೋಪಿಸಿದರು. ಸರಕಾರಿ ಕಚೇರಿಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಡಿವೈಎಫ್‍ಐ ಸಂಘಟನೆ ಜಿಲ್ಲೆಯಲ್ಲಿ ಅನೇಕ ಹೋರಾಟಗಳನ್ನು ನಡೆಸಿದ್ದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಇನ್ನು ಮುಂದೆಯಾದರೂ ಸರಕಾರ ಎಚ್ಚೆತ್ತುಕೊಂಡು ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ನೇಮಕಾತಿಗಳನ್ನು ನಿಲ್ಲಿಸಿ ಜಿಲ್ಲೆಯ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಖಾಯಂ ಸರಕಾರಿ ಹುದ್ದೆ ನೀಡಲು ಕ್ರಮ ಕೈಗೊಳ್ಳಲಿ ಎಂದು ಹೆಚ್.ಆರ್.ರಾಚಪ್ಪಾಜಿ ಒತ್ತಾಯಿಸಿದರು. ಯುವ ಜನರ ಉದ್ಯೋಗದ ಬೇಡಿಕೆ ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಡಿವೈಎಫ್‍ಐ ಸಂಘಟನೆ ಹೋರಾಟವನ್ನು ತೀವ್ರಗೊಳಿಸಲಿದೆ ಎಂದು ಎಚ್ಚರಿಕೆ ನೀಡಿದರು. ಡಿವೈಎಫ್‍ಐ ಕಾರ್ಯದರ್ಶಿ ವೈ.ಆರ್.ಜ್ಯೋತಿ ಕೃಷ್ಣ, ಖಜಾಂಚಿ ಎ.ಹೆಚ್.ಸಾಧಿಕ್, ಪದಾಧಿಕಾರಿಗಳಾದ ಅನುಷ್, ಮಣಿ, ರಮೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೇಡಿಕೆಯ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಸರಕಾರಕ್ಕೆ ಸಲ್ಲಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.