
ಸುಂಟಿಕೊಪ್ಪ ಆ.29 NEWS DESK : ಕೊಡಗರಹಳ್ಳಿ ವಿಘ್ನೇಶ್ವರ ಸೇವಾ ಸಮಿತಿ ವತಿಯಿಂದ 7ನೇ ಗೌರಿ ಗಣೇಶೋತ್ಸವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ವಿವಿಧ ಧಾರ್ಮಿಕ ವಿಧಿ ವಿಧಾನದೊಂದಿಗೆ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು. ಸಂಜೆ ಗಂಟೆಯಿಂದ ಕೊಡಗರಹಳ್ಳಿ ಬೈತೂರಪ್ಪ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.





































