
ಕುಶಾಲನಗರ ಆ.29 NEWS DESK : ಗಣೇಶೋತ್ಸವ ಅಂಗವಾಗಿ ಕುಶಾಲನಗರ ರಥ ಬೀದಿಯ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ 101 ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸಲಾಯಿತು. ಕುಶಾಲನಗರ ವಾಸವಿ ಯುವಕ ಸಂಘ ವತಿಯಿಂದ ಆರ್ಯವೈಶ್ಯ ಮಂಡಳಿ ಸಹಯೋಗದೊಂದಿಗೆ ದೇವಾಲಯದಲ್ಲಿ ಗಣಪತಿ ಮೂರ್ತಿಗಳಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್, ವಾಸವಿ ಯುವಕ ಸಂಘದ ಅಧ್ಯಕ್ಷರಾದ ಪ್ರವೀಣ್ ಮತ್ತು ಪದಾಧಿಕಾರಿಗಳು ಇದ್ದರು.








