
ಮಡಿಕೇರಿ ಆ.29 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಾರ್ಷಿಕ ಎನ್.ಎಸ್.ಎಸ್.ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಆ.30 ರಂದು ನಡೆಯಲಿದೆ. ಕಾಲೇಜಿನ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ವರದಿಗಾರರು ಹಾಗೂ ನಿರೂಪಕರಾದ ಕಿಶೋರ್ ರೈ ಕತ್ತಲೆಕಾಡು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ.









