
ಮಡಿಕೇರಿ NEWS DESK ಆ.29 : ಕೊಡಗು ಜಿಲ್ಲೆಯಲ್ಲಿ ಮಳೆ ಗಾಳಿಯ ವಾತಾವರಣವಿದ್ದರೂ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಉತ್ತಮವಾಗಿದೆ. ಈ ಬಾರಿ ಪದವಿ ಪೂರ್ವ ಶಿಕ್ಷಣದಲ್ಲಿ ಕೊಡಗು 4ನೇ ಸ್ಥಾನ ಪಡೆದಿದ್ದು, ಮುಂದಿನ ಸಾಲಿನಲ್ಲಿ ಮೊದಲ ಸ್ಥಾನಕ್ಕೇರಬೇಕೆಂದು ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎಲ್.ಚಿದಾನAದ ಕುಮಾರ್ ಕರೆ ನೀಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರುಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು 2025-26 ನೇ ಸಾಲಿನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಉತ್ತಮ ಫಲಿತಾಂಶಕ್ಕಾಗಿ ಪ್ರತಿಯೊಬ್ಬ ಪ್ರಾಧ್ಯಾಪಕರು ಶ್ರಮಿಸುತ್ತಿದ್ದಾರೆ. ವಿದ್ಯಾರ್ಥಿಗಳ ಜೀವನದಲ್ಲಿ ಪ್ರಾಧ್ಯಾಪಕರುಗಳಲ್ಲದೆ ಪೋಷಕರ ಪ್ರಯತ್ನವು ಮುಖ್ಯ ಪಾತ್ರ ವಹಿಸಿದೆ. ಕೊಡಗಿನಲ್ಲಿ ಮಳೆಯಿಂದಾಗಿ ರಜೆ ಇದ್ದರೂ ಫಲಿತಾಂಶದಲ್ಲಿ ವ್ಯತ್ಯಾಸವಾಗಲಿಲ್ಲ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಜಿಲ್ಲಾ ಪ್ರಾಂಶುಪಾಲ ಸಂಘದ ಖಜಾಂಚಿ ಅಂತೋಣಿ ವಿಜಯನ್ ಅಲ್ವಾರೀಸ್ ಅವರು ನಮ್ಮೊಳಗಿರುವ ಪ್ರತಿಭೆಯನ್ನು ಗುರುತಿಸಲು ಶಿಕ್ಷಣ ಅತ್ಯಮೂಲ್ಯ ಅಸ್ತçವೆಂದು ಅಭಿಪ್ರಾಯಪಟ್ಟರು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಸನ್ಮಾನಿಸುವುದು ಅತ್ಯಂತ ಗೌರವಯುತ ಕಾರ್ಯ. ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತಮ್ಮ ಸಂತೋಷವನ್ನು ತ್ಯಾಗ ಮಾಡಿ ಶ್ರಮ ವಹಿಸುತ್ತಿರುವುದು ಶ್ಲಾಘನೀಯ. ಶಿಕ್ಷಣ ಇಲಾಖೆ ಹಮ್ಮಿಕೊಳ್ಳುತ್ತಿರುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು ಪ್ರಾಂಶುಪಾಲ ಸಂಘ ಕೈಜೋಡಿಸುತ್ತಿದೆ. ಇಲಾಖೆ ವತಿಯಿಂದ ಯುವ ಸಂಸತ್ತು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ, ಇದರಲ್ಲಿ ರಾಜಕೀಯ ಪ್ರವೃತ್ತಿ ಮೇಲ್ಮನೆ ಕೆಳಮನೆ ಕಾರ್ಯ ಹೇಗೆ ನಿರ್ವಹಿಸುತ್ತದೆ ಎಂದು ತಿಳಿಸಿಕೊಡಲಾಗುತ್ತದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ತಿಳಿಸಿದರು. ಅರುಣ ಪದವಿ ಪೂರ್ವ ಕಾಲೇಜಿನಲ್ಲಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ದಾಯನ ಎಸ್.ರಾಮಕೃಷ್ಣ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಕಲಾವಿಭಾಗದಿಂದ ಅಫಿಯ ಶರೀಫ್, ನವನಿದನ್ ಎಂ ಆರ್, ಎಸ್ ಸಾಜಿದ, ಮೇಘಶ್ರೀ ಕೆ, ವಾಣಿಜ್ಯ ವಿಭಾಗದಿಂದ ಡಿಂಪಲ್ ತಮ್ಮಯ್ಯ, ಶಿವಾನಿ ಕೆಎಸ್, ನಿಕ್ಷಾ ವಿ. ಎಸ್, ಸೃಜನ ಡಿ ಡಿ, ವಿಜ್ಞಾನ ವಿಭಾಗದಿಂದ ವೈಷ್ಣವಿ ಟಿ. ವಿ, ಪನ್ಯಪನ್ನಮ್ಮಎ. ಆರ್, ಚಿತ್ರ ಪಿ, ಲಿಜಾ ಜೇಮ್ಸ್, ಮಮತಾ ಎಂ. ಪಿ, ಸಾನಿಕ ಜಾಸ್ಮಿನ್ ಪಿ, ದೀಕ್ಷಾ ದೇಚಮ್ಮ ಇವರುಗಳಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ವೈಷ್ಣವಿ ಹಾಗೂ ಚಿತ್ರ ತನ್ನ ಅಭಿಪ್ರಾಯವನ್ನು ತಿಳಿಸಿ ಕಂಬನಿ ಮಿಡಿದರು. ಶೇ.100 ಫಲಿತಾಂಶವನ್ನು ಪಡೆದಿರುವ ಕೊಡಗು ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಾದ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪಲು, ಸಂತ ಅಂತೋಣಿ ಪದವಿ ಪೂರ್ವ ಕಾಲೇಜು ಪೊನ್ನಂಪೇಟೆ, ಕೂರ್ಗ್ ಇನ್ಸಿಟ್ಯೂಟ್ ಆಫ್ ಪದವಿ ಪೂರ್ವ ಕಾಲೇಜು ಹಳ್ಳಿಗಟ್ಟು, ಐಶ್ವರ್ಯ ಸಂಯುಕ್ತ ಪದವಿ ಪೂರ್ವ ಕಾಲೇಜು, ಕುಶಾಲನಗರ, ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಕೊಡ್ಲಿಪೇಟೆ, ಲಯನ್ಸ್ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪಲು, ಅಟಲ್ ಬಿಹಾರಿ ವಾಜಪೇಯಿ ವಸತಿ ಪದವಿ ಪೂರ್ವ ಕಾಲೇಜು ಭಾಗಮಂಡಲ ಕಾಲೇಜುಗಳ ಪ್ರಾಂಶುಪಾಲರಿಗೆ ಸ್ಮರಣಿಕೆ ವಿತರಿಸಲಾಯಿತು. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪಿ.ಆರ್.ವಿಜಯನ್, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲ ಸಂಘದ ಖಜಾಂಚಿ ಅಂತೋನಿ ವಿಜಯನ್ ಅಲ್ವಾರೀಸ್, ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಎನ್.ಕೆ ಜ್ಯೋತಿ, ಪ್ರಾಂಶುಪಾಲ ಸಂಘದ ಅಧ್ಯಕ್ಷರಾದ ಪಿ.ಎಂ.ದೇವಕಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಿದಾನಂದ ಕುಮಾರ್ ಎಂಎಲ್ ಮತ್ತಿತರರು ಇದ್ದರು. ದಿವ್ಯ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರಾಧ್ಯಾಪಕ ದಿವಾಕರ್ ಅವರು ನಿರೂಪಿಸಿದರು. ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಪಿ.ಎಂ.ದೇವಕಿ ಸ್ವಾಗತಿಸಿ, ಕಾರ್ಯದರ್ಶಿ ಎನ್.ಕೆ.ಜ್ಯೋತಿ ವಂದಿಸಿದರು.









