
ಸುಂಟಿಕೊಪ್ಪ ಆ.30 NEWS DESK : ಕೊಡಗರಹಳ್ಳಿ ವಿಘ್ನೇಶ್ವರ ಸೇವಾ ಸಮಿತಿಯ ವತಿಯಿಂದ 7ನೇ ಗೌರಿ ಗಣೇಶೋತ್ಸವನ್ನು ಧಾರ್ಮಿಕ ವಿಧಿ ವಿಧಾನದೊಂದಿಗೆ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದ ಉತ್ಸವ ಗೌರಿ ಗಣೇಶ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಇರಿಸಿ ವಿರ್ಜಿಸಲಾಯಿತು. 3 ದಿನಗಳ ಕಾಲ ವಿಶೇಷ ಪೂಜಾ ಕೈಂ ಕರ್ಯ ಹಾಗೂ ಗ್ರಾಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಸಂಜೆ ಉತ್ಸವ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಕುಳ್ಳಿರಿಸಿ ವಾದ್ಯಗೋಷ್ಠಿಯೊಂದಿಗೆ ಕೊಡಗರಹಳ್ಳಿ ಗ್ರಾಮ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ವಿಸರ್ಜಿಸಲಾಯಿತು.








