Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪೊಲೀಸರ ಸಾಮಾಜಿಕ ಬದ್ಧತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪೊಲೀಸರ ಸಾಮಾಜಿಕ ಬದ್ಧತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಆಗಷ್ಟ್ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು, ಆ.30 NEWS DESK : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜಭವನದ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು. :: ಮುಂಜಾಗ್ರತಾ ಕ್ರಮಗಳಿಂದ ಅಪರಾಧ ತಡೆಗಟ್ಟಬಹುದು ::  ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು. ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರ ಹಾಗೂ ಪೊಲೀಸಿನವರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು. :: ಸಾಮಾನ್ಯ ಜನರಿಗೆ ನ್ಯಾಯ ಸಿಗುವಂತಾಗಬೇಕು ::  ಪೊಲೀಸರಿಗೆ ಸಾಮಾಜಿಕ ಬದ್ದತೆಯಿದ್ದರೆ, ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಸಂವಿಧಾನ ನೀಡುವ ರಕ್ಷಣೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಬಲಾಢ್ಯರ ಕೈಯ್ಯಲ್ಲಿ ಅಧಿಕಾರವಿದ್ದರೆ, ದುರ್ಬಲ ವರ್ಗದವರ ಜೀವನ ದುಸ್ತರವಾಗುತ್ತದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದ್ದರು. ದುರ್ಬಲವರ್ಗಗಳ ಮೇಲಾಗುವ ದೌಜರ್ನ್ಯಗಳನ್ನು ಪೊಲೀಸರು ತಡೆಗಟ್ಟಬೇಕಿದೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಬೇಕು. ಪೊಲೀಸರ ಸಂಖ್ಯೆಯ ಬಗ್ಗೆ ಗಮನಹರಿಸದೇ, ಅವರು ತಡೆಗಟ್ಟಿರುವ ಅಪರಾಧಗಳೆಷ್ಟು ಎಂದು ಪರಿಗಣಿಸಬೇಕಾಗಿದೆ ಎಂದರು. ಇಂದಿನ ಪ್ರಶಸ್ತಿ ವಿಜೇತರ ಸಾಧನೆ ಶ್ಲಾಘನೀಯವಾಗಿದ್ದು, ಇತರರಿಗೆ ಮಾದರಿಯಾಗಬೇಕು. ಸಮಾಜದಲ್ಲಿನ ನ್ಯೂನ್ಯತೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಆತ್ಮವಿಮರ್ಶೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು ಎಂದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.