
ನಾಪೋಕ್ಲು ಸೆ.1 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ. 2024-25ನೇ ಸಾಲಿನಲ್ಲಿ ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಥಮ ಸ್ಥಾನ ದೊರೆಕಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಗಣಪತಿ ಅವರು ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷ ಪಿ.ಎಂ. ಅಶೋಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ವರದಿ : ದುಗ್ಗಳ ಸದಾನಂದ.









