
ವಿರಾಜಪೇಟೆ ಸೆ.1 NEWS DESK : ವಿರಾಜಪೇಟೆ ಕೊಡವ ಸಮಾಜದ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಕೈಲ್‍ಪೊಲ್ದ್ ನಮ್ಮೆಯನ್ನು ಸೆ.27 ರಂದು ಕೊಡವ ಸಮಾಜ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕೊಡವ ಸಮಾಜದ ಕ್ರೀಡಾ ಕಾರ್ಯದರ್ಶಿ ಅಮ್ಮಣಿಚಂಡ ರತ್ನಾ ಸುಬ್ರಮಣಿ ಹೇಳಿದರು. ವಿರಾಜಪೇಟೆ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಮಹಿಳೆಯರಿಗೆ ಮತ್ತು ಪುರುಷರಿಗೆ ತೆಂಗಿನಕಾಯಿಗೆ ಗುಂಡು ಹೊಡೆಯುವುದು, ಹಗ್ಗಜಗ್ಗಾಟ, ವಾಲಗದ ಕುಣಿತ, ಭಾರದ ಗುಂಡು ಎಸೆತ ಸೇರಿದಂತೆ ಹಲವಾರು ಪೈಪೋಟಿಗಳನ್ನು ನಡೆಸಲಾಗುವುದು. ಪೂರ್ವಹ್ನ 9.30 ನಡೆಯುವ ಕಾರ್ಯಕ್ರಮವನ್ನು ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು. ಗೋಷ್ಠಿಯಲ್ಲಿ ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ, ಉಪಾಧ್ಯಕ್ಷ ಕಾಣತಂಡ ಜಗದೀಶ್, ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ಮರಣನಿಧಿ ಕಾರ್ಯರ್ಶೀ ಮಾದೇಯಂಡ ಸಂಪಿ ಪೂಣಚ್ಚ ಉಪಸ್ಥಿತರಿದ್ದರು.








