Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗಾಂಧಿ ಜಯಂತಿ : ಸೆ.9 ರಂದು ಪ್ರಬಂಧ ಸ್ಪರ್ಧೆ ಏರ್ಪಡಿಸಲು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗಾಂಧಿ ಜಯಂತಿ : ಸೆ.9 ರಂದು ಪ್ರಬಂಧ ಸ್ಪರ್ಧೆ ಏರ್ಪಡಿಸಲು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಸೂಚನೆ

ಸೆಪ್ಟೆಂಬರ್ 2, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.2 NEWS DESK : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156 ನೇ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಆಯೋಜಿಸಿದ್ದು, ಈ ಹಿನ್ನೆಲೆ ಪ್ರೌಢಶಾಲೆ, ಪದವಿ ಪೂರ್ವ, ಪದವಿ-ಸ್ನಾತಕೋತ್ತರ ಪದವಿ ಈ ಮೂರು ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಸೆ.9 ರಂದು ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸೆ.10 ರಂದು ಸಂಜೆಯೊಳಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ತಮ್ಮ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಸೆ.9 ರಂದು ಆಯಾಯ ಪ್ರೌಢಶಾಲೆ, ಕಾಲೇಜುಗಳಲ್ಲಿ ಅಥವಾ ತಾಲ್ಲೂಕು ಮಟ್ಟದಲ್ಲಿ ಪ್ರಬಂಧ ಬರೆಸಿ ಪ್ರಬಂಧವನ್ನು ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರ ಮೂಲಕ ಕಳುಹಿಸಬೇಕು ಎಂದು ತಿಳಿಸಿದರು. ತಜ್ಞರ ಸಮಿತಿಯು ಸೆ.12 ರಂದು ಮೂರು ವಿಭಾಗದಲ್ಲಿ (ಪ್ರೌಢಶಾಲೆ, ಪದವಿ ಪೂರ್ವ, ಪದವಿ-ಸ್ನಾತಕೋತ್ತರ ಪದವಿ) ಆಯಾಯ ಹಂತದಲ್ಲಿ ಮೌಲ್ಯಮಾಪನ ನಡೆಯಲಿದೆ ಎಂದು ತಿಳಿಸಿದರು. ವಾರ್ತಾಧಿಕಾರಿ ಚಿನ್ನಸ್ವಾಮಿ ಮಾಹಿತಿ ನೀಡಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಸ್ವಚ್ಛತೆಯ ಪಾಠ-ಗಾಂಧೀಜಿಯವರ ಸಂದೇಶ, ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ ಮತ್ತು ಗಾಂಧೀಜಿಯವರ ಸ್ವಾತಂತ್ರ್ಯದ ಕನಸು- ನನ್ನ ಕಲ್ಪನೆ ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂದ ಬರೆಯಬೇಕು ಎಂದು ತಿಳಿಸಿದರು. ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಅಸ್ಪøಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ, ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ ಅಥವಾ ಬದಲಾವಣೆ ನನ್ನಿಂದಲೇ ಆರಂಭ – ಗಾಂಧೀಜಿಯವರ ಪಾಠ ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 900 ರಿಂದ 1000 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು ಎಂದು ಮಾಹಿತಿ ನೀಡಿದರು. ಹಾಗೆಯೇ ಪದವಿ/ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ, ಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್-ತತ್ವಗಳ ಹೋಲಿಕೆ ಅಥವಾ ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ-ಯುವಕರಿಗೆ ಗಾಂಧೀಜಿಯವರ ಪಾಠ ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 1400 ರಿಂದ 1500 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು ಎಂದು ಹೇಳಿದರು. ಜಿಲ್ಲಾ ಮಟ್ಟದಲ್ಲಿ ವಿಭಾಗದಲ್ಲಿ ಪ್ರಥಮ ಬಹುಮಾನ ವಿಜೇತ ಪ್ರಬಂಧವನ್ನು ರಾಜ್ಯ ಮಟ್ಟದಲ್ಲಿ ಮರು ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಗಾಂಧೀಜಿ ವಿಚಾರ ತಜ್ಞರು, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ವಿಶ್ವವಿದ್ಯಾನಿಲಯದ ಶಿಕ್ಷಕರು, ಪ್ರಾಧ್ಯಾಪಕರನ್ನು ಒಳಗೊಂಡ ಸಮಿತಿಯೊಂದಿಗೆ ಪರಿಶೀಲಿಸಿ ಮೌಲ್ಯಮಾಪನ ಮಾಡಿ ಅವುಗಳಲ್ಲಿ ಅತ್ಯುತ್ತಮ ಎನಿಸಿದ ಮೂರು ಪ್ರಬಂಧಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು. ಪ್ರತೀ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು ಪ್ರಬಂಧಗಳಿಗೆ ಅಕ್ಟೋಬರ್, 02 ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಲಾಗುವುದು ಎಂದು ವಾರ್ತಾಧಿಕಾರಿ ತಿಳಿಸಿದರು. ಪ್ರೌಢಶಾಲಾ, ಪದವಿ ಪೂರ್ವ, ಪದವಿ/ ಸ್ನಾತಕೋತ್ತರ ಈ ಮೂರು ಪ್ರತ್ಯೇಕ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ 3 ಸಾವಿರ ರೂ, ದ್ವಿತೀಯ 2 ಸಾವಿರ, ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುತ್ತದೆ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 31 ಸಾವಿರ, ದ್ವಿತೀಯ ಸ್ಥಾನಕ್ಕೆ 21 ಸಾವಿರ ಹಾಗೂ ತೃತೀಯ ಸ್ಥಾನಕ್ಕೆ 11 ಸಾವಿರ ರೂ. ಬಹುಮಾನ ನೀಡಲಾಗುತ್ತದೆ ಎಂದು ಹೇಳಿದರು. :: ಪ್ರಬಂಧ ರಚಿಸಲು ಮಾರ್ಗಸೂಚಿಗಳು :: ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಆಕರವಾಗಿ ಬಳಸಿದ ಪರಾಮರ್ಶನ, ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ/ ಆಧಾರ ಗ್ರಂಥಗಳು / ಮೊಬೈಲ್‍ಗಳ ಬಳಕೆಗೆ ಅವಕಾಶ ಇರುವುದಿಲ್ಲ. ಪ್ರಬಂಧಕಾರರ ಹೆಸರು ವಿಳಾಸ ನಮೂದಿಸಿರಬೇಕು. ಪ್ರಬಂದವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದರು. ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ಕೃಷ್ಣಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರಾದ ಶ್ರೀಲತಾ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅಧ್ಯಾಪಕರಾದ ದಿವ್ಯ, ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.