Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆ ಪಟ್ಟಣದಲ್ಲಿ ಗೌರಿ ಗಣೇಶ ಮೂರ್ತಿಗಳ ವಿಸರ್ಜನೆ : ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಪಟ್ಟಣದಲ್ಲಿ ಗೌರಿ ಗಣೇಶ ಮೂರ್ತಿಗಳ ವಿಸರ್ಜನೆ : ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

ಸೆಪ್ಟೆಂಬರ್ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.3 NEWS DESK : ವಿರಾಜಪೇಟೆ ನಗರದಲ್ಲಿ ಈಗಾಗಲೆ ಪ್ರತಿಷ್ಟಾಪಿಸಲಾಗಿರುವ ಗಣಪತಿ ಮೂರ್ತಿಗಳ ವಿಸರ್ಜನೆ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಸೆ.6 ರ ಮಧ್ಯಾಹ್ನ 2 ಗಂಟೆಯಿಂದ ಸೆ.7 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ಪಟ್ಟಣದಲ್ಲಿ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆರಕ್ಷಕ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಪೆರುಂಬಾಡಿ ಕಡೆಯಿಂದ ವಿರಾಜಪೇಟೆ ನಗರಕ್ಕೆ ಉತ್ಸವ ವೀಕ್ಷಣೆಗೆ ಬರುವ ವಾಹನಗಳನ್ನು ಕೀರ್ತಿ ರೆಸ್ಟೋರೆಂಟ್ ಮುಂಭಾಗದಿಂದ ಆರ್ಜಿ ಕಡೆಗೆ ಹೋಗುವ ರಸ್ತೆಯ ಎಡಭಾಗದಲ್ಲಿ ಬದಿಯಲ್ಲಿ ಮಾತ್ರ ನಿಲ್ಲಿಸುವುದು. ಕೇರಳದ ಮಾಕುಟ್ಟ ಮಾರ್ಗವಾಗಿ ಗೋಣಿಕೂಪ್ಪದ ಕಡೆ ಅಥವಾ ಸಿದ್ದಾಪುರದ ಕಡೆಗಳಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ ಚೆಕ್ ಪೋಸ್ಟ್, ಬಾಳುಗೋಡು, ಬಿಟ್ಟಂಗಾಲ ಜಂಕ್ಷನ್, ಕೈಕೇರಿ ಜಂಕ್ಷನ್, ಗದ್ದೆ ಮನೆಯ ರಸ್ತೆ ಜಂಕ್ಷನ್ ಮಾರ್ಗವಾಗಿ ಪಾಲಿಬೆಟ್ಟ, ಸಿದ್ದಾಪುರಕ್ಕೆ ಹೋಗುವುದು. ಅದೇ ರೀತಿ ಸಿದ್ದಾಪುರ ಕಡೆಯಿಂದ ಕೇರಳದ ಕಡೆ ಹೋಗುವ ವಾಹನಗಳು ಕೈಕೇರಿ, ಬಿಟ್ಟಂಗಾಲ, ಬಾಳುಗೋಡ, ಪೆರುಂಬಾಡಿ ಮಾರ್ಗವಾಗಿ ಕೇರಳದ ಕಡೆ ಹೋಗುವುದು. ಮಡಿಕೇರಿಯಿಂದ ಕೇರಳದ ಕಡೆ ಹೋಗುವ ವಾಹನಗಳು ಸಿದ್ದಾಪುರ, ಪಾಲಿಬೆಟ್ಟ, ಕೈಕೇರಿ, ಬಿಟ್ಟಂಗಾಲ, ಬಾಳುಗೋಡು, ಪೆರುಂಬಾಡಿ, ಮಾಕುಟ್ಟ ಮಾರ್ಗವಾಗಿ ಹೋಗುವುದು. ಮಡಿಕೇರಿ ಕಡೆಯಿಂದ ಮೈಸೂರು,ಬೆಂಗಳೂರಿಗೆ ಹೋಗುವ ವಾಹನಗಳು ಸಿದ್ದಾಪುರ ಮಾರ್ಗವಾಗಿ ಗೋಣೆಕೊಪ್ಪ, ಮೈಸೂರು, ಬೆಂಗಳೂರಿಗೆ ಹೋಗುವುದು. ಸಿದ್ದಾಪುರ ಕಡೆಯಿಂದ ಮೆರವಣಿಗೆ ನೋಡಲು ವಿರಾಜಪೇಟೆಗೆ ಬರುವ ವಾಹನಗಳು ಮಗ್ಗುಲ ಜಂಕ್ಷನ್ (ಡೆಂಟಲ್ ಕಾಲೇಜ್ ಜಂಕ್ಷನ್) ಮತ್ತು ರವಿರಾಜ್ ಗ್ಯಾಸ್ ಏಜೆನ್ಸಿ ಕಚೇರಿಯಿಂದ ಐಮಂಗಲ ಕಡೆಗೆ ಹೋಗುವ ರಸ್ತೆಯ ಎಡಬದಿಯಲ್ಲಿ ನಿಲ್ಲಿಸತಕ್ಕದ್ದು. ಗೋಣಿಕೂಪ್ಪ ಕಡೆಯಿಂದ ಮೆರವಣಿಗೆ ನೋಡಲು ಬರುವಂತಹ ವಾಹನಗಳನ್ನು ಪಂಜರುಪೇಟೆಯ ಸರ್ವೋದಯ ಕಾಲೇಜಿನ ಬಳಿಯಿಂದ ಕಾವೇರಿ ಕಾಲೇಜು ಕಡೆಗೆ ಎಡಬದಿಯಲ್ಲಿ ಮಾತ್ರ ನಿಲುಗಡೆ ಮಾಡುವುದು. ಬೇಟೋಳಿ, ಗುಂಡಿಗೆರೆ, ಚಿಟ್ಟಡೆ ಕಡೆಯಿಂದ ಮಹಿಳಾ ಸಮಾಜ ಮಾರ್ಗವಾಗಿ ಮೆರವಣಿಗೆ ನೋಡಲು ಬರುವಂತಹ ವಾಹನಗಳು ಮಹಿಳಾ ಸಮಾಜ ರಸ್ತೆಯ ಎಡಬದಿಯಲ್ಲಿ ನಿಲ್ಲಿಸತಕ್ಕದು. ಮೈಸೂರು, ಬೆಂಗಳೂರು ಕಡೆಯಿಂದ ಮಡಿಕೇರಿಗೆ ಹೋಗುವ ವಾಹನಗಳು ಗೋಣಿಕೊಪ್ಪ, ಸಿದ್ದಾಪುರ ಮಾರ್ಗವಾಗಿ ಮಡಿಕೇರಿ ಹೋಗುವುದು. ಸೆ.6 ರಂದು ಮಧ್ಯಾಹ್ನ 2 ಗಂಟೆಯಿಂದ ಸೆಪ್ಟೆಂಬರ್, 07 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರದ ತೆಲುಗರ ಬೀದಿ, ದೊಡ್ಡಟ್ಟಿ ವೃತ್ತ, ಅಪ್ಪಯ್ಯ ಸ್ವಾಮಿ ರಸ್ತೆ, ದಖ್ಖನಿ ಮೊಹಲ್ಲಾ ರಸ್ತೆ, ಅರಸು ನಗರ ರಸ್ತೆ, ಎಫ್.ಎಂ.ಸಿ. ರಸ್ತೆ, ಗಡಿಯಾರ ಕಂಬ, ಮಲಬಾರ್ ರಸ್ತೆ, ಗೌರಿಕೆರೆ ರಸ್ತೆ, ಮೀನುಪೇಟೆ ರಸ್ತೆಯ ವಿರಾಜಪೇಟೆ ತಾಲೂಕು ತಹಶೀಲ್ದಾರ್‍ರವರ ಕಚೇರಿವರೆಗೆ ಹಾಗೂ ದೊಡ್ಡಟ್ಟಿ ವೃತ್ತದಿಂದ ಪಂಜರುಪೇಟೆ ಸರ್ವೋದಯ ಕಾಲೇಜಿನವರೆಗೆ ಹಾಗೂ ಮಗ್ಗುಲ ಜಂಕ್ಷನ್‍ನಿಂದ ದಖ್ಖನಿ ಮೊಹಲ್ಲಾ ಜಂಕ್ಷನ್‍ವರೆಗೆ ಯಾವುದೇ ವಾಹನಗಳು ಸಂಚರಿಸುವುದು ಮತ್ತು ವಾಹನ ನಿಲುಗಡೆಯನ್ನು ನಿಷೇಧಿಸಿದೆ. ಈ ಸಂಚಾರ ನಿಯಮಗಳಿಗೆ ಏನಾದರೂ ವ್ಯತ್ಯಾಸ ಅಥವಾ ಮಾರ್ಪಾಡು ಇದ್ದರೆ ಆಯಾಯ ಸ್ಥಳದಲ್ಲಿ ಇರುವ ಪೊಲೀಸರು ನೀಡುವ ನಿರ್ದೇಶನದಂತೆ ನಡೆದುಕೊಳ್ಳುವುದು. ಇದರೊಂದಿಗೆ ಸನ್ನಿವೇಶಕ್ಕೆ ತಕ್ಕಂತೆ ಅವಶ್ಯಕತೆ ಇದ್ದರೆ, ಸಣ್ಣ ಪುಟ್ಟ ಮಾರ್ಪಾಡುಗಳನ್ನು ಮಾಡಲು ಆರಕ್ಷಕ ಅಧಿಕಾರಿಗಳಿಗೆ ಅನುಮತಿಸಿದೆ. ಅವಶ್ಯವಿರುವ ಸಂಜ್ಞೆ ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅದೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅಧಿಕಾರ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

 

 

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.