
ಮಡಿಕೇರಿ ಸೆ.3 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.14 ರಂದು ಸಂಘದ ಅಧ್ಯಕ್ಷ ಎಂ.ಡಿ.ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ನಗರದ ಕೋಟೆ ಮಹಿಳಾ ಸಮಾಜದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ 2023-24ನೇ ಸಾಲಿನ ಲೆಕ್ಕಪತ್ರ ಮಂಡನೆ ಮತ್ತು ಅನುಮೋದನೆ, ಷೇರು ಹಣದ ಬಗ್ಗೆ ಹಾಗೂ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದ್ದು, ಸದಸ್ಯರು ತಪ್ಪದೆ ಸಭೆಗೆ ಹಾಜರಾಗುವಂತೆ ಸಂಘದ ಅಧ್ಯಕ್ಷ ಎಂ.ಡಿ.ನಾಣಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









