
ಮಡಿಕೇರಿ ಸೆ.3 NEWS DESK : ಗಾಳಿ ಮಳೆಯಿಂದಾಗಿ ಕರಿಕೆ ಗ್ರಾಮದ ತೋಟಂ ಕೊಚ್ಚಿ ಕಾಲೋನಿ ನಿವಾಸಿ ಬೆಳ್ಳಚ್ಚಿ ಎಂಬುವವರ ಮನೆ ಮೇಲ್ಚಾವಣಿ ಬಿದ್ದು ಅಡಿಗೆ ಕೋಣೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿ ಮಕ್ಕಳು ಸೇರಿದಂತೆ ಏಳು ಮಂದಿ ವಾಸವಿದ್ದು, ಎಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ಮನೆ ದುರಸ್ತಿಪಡಿಸುವಂತೆ ಆಗ್ರಹಿಸಿ ಹಲವು ಬಾರಿ ಪಂಚಾಯಿತಿಗೆ ಅರ್ಜಿ ಸಲ್ಲಿಸಿದರು ಮನೆ ಮಂಜೂರು ಮಾಡಲಿಲ್ಲ ಎಂದು ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಕರಿಕೆ ಹೆಲ್ಪ್ ಲೈನ್ ಸಂಸ್ಥಾಪಕ ಶಿವ ಗಿರಿ ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ತನ್ನ ಸ್ವಂತ ಖರ್ಚಿನಲ್ಲಿ ಅರಮನೆಯವರಿಗೆ ಊಟದ ವ್ಯವಸ್ಥೆ ಕಲ್ಪಿಸಿದರು.









