Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಪ್ರಾಣಿ ದಯಾಸಂಘದ ಮಹಾಸಭೆ : ಕೆ.ನಿಡುಗಣೆ ಗೋಶಾಲೆಯ 8 ಎಕರೆ ಜಾಗದಲ್ಲಿ ತಂತಿ ಬೇಲಿ ನಿರ್ಮಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಪ್ರಾಣಿ ದಯಾಸಂಘದ ಮಹಾಸಭೆ : ಕೆ.ನಿಡುಗಣೆ ಗೋಶಾಲೆಯ 8 ಎಕರೆ ಜಾಗದಲ್ಲಿ ತಂತಿ ಬೇಲಿ ನಿರ್ಮಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ

ಸೆಪ್ಟೆಂಬರ್ 4, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.4 NEWS DESK : ತಾಲ್ಲೂಕಿನ ಕೆ.ನಿಡುಗಣೆ ಬಳಿ ಸರ್ಕಾರಿ ಗೋಶಾಲೆಯಲ್ಲಿ 37 ಜಾನುವಾರುಗಳ ಸಂರಕ್ಷಣೆಗೆ ಮಾತ್ರ ಅವಕಾಶವಿದ್ದು, ಇನ್ನೂ ಹೆಚ್ಚಿನ ಜಾನುವಾರುಗಳ ಸಂರಕ್ಷಣೆಗೆ ಒತ್ತು ನೀಡುವಲ್ಲಿ ಸರ್ಕಾರಕ್ಕೆ ಪತ್ರ ಬರೆಯಲು ಪ್ರಾಣಿ ದಯಾಸಂಘ ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಣಿ ದಯಾಸಂಘ ಮಹಾಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಈ ಕುರಿತು ವಿಷಯ ಪ್ರಸ್ತಾಪಿಸಿದ ಪ್ರಾಣಿ ದಯಾ ಸಂಘದ ಸಮಿತಿ ಸದಸ್ಯರಾದ ಹರೀಶ್ ಆಚಾರ್ಯ ಅವರು ಕೆ.ನಿಡುಗಣೆ ಬಳಿಯ ಸರ್ಕಾರಿ ಗೋಶಾಲೆಯಲ್ಲಿ 37 ಜಾನುವಾರುಗಳ ಸಂರಕ್ಷಣೆಗೆ ಅವಕಾಶವಿದ್ದು, ಈಗಾಗಲೇ 2 ಎಕರೆಯಲ್ಲಿ ಮಾತ್ರ ಗೋಶಾಲೆ ಮಾಡಲಾಗಿದೆ. ಉಳಿದ 6 ಎಕರೆಯಲ್ಲಿಯೂ ಸಹ ತಂತಿ ಬೇಲಿ ನಿರ್ಮಾಣ ಮಾಡಿ ಹೆಚ್ಚಿನ ಗೋ ಸಾಕಾಣಿಕೆಗೆ ಅವಕಾಶ ಮಾಡಬೇಕು ಎಂದು ಅವರು ಮನವಿ ಮಾಡಿದರು. ರಾಷ್ಟ್ರೀಯ ಹೆದ್ದಾರಿಯ ಜೋಡುಪಾಲ, ದೇವರಕೊಲ್ಲಿ, ಕೊಯನಾಡು ಕಡೆಗಳಲ್ಲಿ ಬಿಡಾಡಿ ಜಾನುವಾರುಗಳು ಇದ್ದು, ಅವುಗಳನ್ನು ಗೋಶಾಲೆಗೆ ಸ್ಥಳಾಂತರಿಸಬೇಕಿದೆ. ಹೀಗೆ ಜಿಲ್ಲೆಯಾದ್ಯಂತ ಬಿಡಾಡಿ ಜಾನುವಾರುಗಳನ್ನು ಗೋಶಾಲೆಗೆ ಸ್ಥಳಾಂತರಿಸಿ ಮೇವು, ನೀರು ಒದಗಿಸಬೇಕಿದೆ ಎಂದು ಹರೀಶ್ ಆಚಾರ್ಯ ಅವರು ಕೋರಿದರು. ಜೊತೆಗೆ 37 ಜಾನುವಾರುಗಳಿಗೆ ಮಾತ್ರ ಶೆಡ್ ನಿರ್ಮಾಣ ಮಾಡಲಾಗಿದ್ದು, ಇನ್ನೂ ಹೆಚ್ಚಿನ ಜಾನುವಾರುಗಳ ಸಾಕಾಣಿಕೆಗೆ ಶೆಡ್ ನಿರ್ಮಾಣ ಮಾಡಬೇಕು ಎಂದು ಹರೀಶ್ ಆಚಾರ್ಯ ಅವರು ಕೋರಿದರು. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೆ.ನಿಡುಗಣೆಯ ಸರ್ಕಾರಿ ಗೋಶಾಲೆಯಲ್ಲಿ 8 ಎಕರೆ ಜಾಗ ನಿಗಧಿಯಾಗಿದ್ದು, ಈ ಎಲ್ಲಾ ಜಾಗವನ್ನು ಬಳಸಿಕೊಳ್ಳಲು ತಂತಿ ಬೇಲಿ ನಿರ್ಮಾಣ ಹಾಗೂ ಶೆಡ್ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ನಿರ್ದೇಶನ ನೀಡಿದರು. 8 ಎಕರೆ ಜಾಗದಲ್ಲಿ ತಂತಿ ಬೇಲಿ ಅಳವಡಿಸುವ ಕಾರ್ಯವು ಒಂದು ತಿಂಗಳಲ್ಲಿ ಆಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಅವರು ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಬಿಡಾಡಿ ಜಾನುವಾರುಗಳು ಇದ್ದು, ಎಲ್ಲೆಂದರಲ್ಲಿ ಓಡಾಡುವುದರಿಂದ ಅಪಘಾತಗಳು ಸಂಭವಿಸುತ್ತವೆ. ಆದ್ದರಿಂದ ಜಾನುವಾರುಗಳ ಸಂರಕ್ಷಣೆ ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕಾಳಜಿ ವಹಿಸಬೇಕು ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದ್ದು, ಇವುಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸುವಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು. ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರಿಗೆ ಓಡಾಡುವುದು ಕಷ್ಟಸಾಧ್ಯವಾಗಿದೆ. ಇವುಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಬೇಕು. ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಬೀದಿನಾಯಿಗಳಿಗೆ ರೇಬಿಸ್ ಲಸಿಕೆ ಹಾಕಿಸಲು ಕ್ರಮವಹಿಸುವಂತೆ ಪಶುಪಾಲನಾ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ಬೀದಿನಾಯಿಗಳ ಹಾವಳಿ ನಿಯಂತ್ರಣ ಸಂಬಂಧ ಸ್ಥಳೀಯ ಸಂಸ್ಥೆಗಳಲ್ಲೂ ಸಹ ಅವಕಾಶವಿದ್ದು, ಈ ಸಂಬಂಧ ಸ್ಥಳೀಯ ಸಂಸ್ಥೆಗಳು ಮತ್ತು ಇಲಾಖೆ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ಲಿಂಗರಾಜ ದೊಡ್ಡಮನಿ ಅವರು ಜಿಲ್ಲೆಯಾದ್ಯಂತ ಸೆಪ್ಟೆಂಬರ್, 28 ರಿಂದ ಅಕ್ಟೋಬರ್, 28 ರವರೆಗೆ ಒಂದು ತಿಂಗಳ ಕಾಲ ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಲಾಗುತ್ತದೆ. ಈ ಸಂಬಂಧ ಜಿಲ್ಲೆಗೆ 21 ಸಾವಿರ ರೇಬಿಸ್ ಲಸಿಕೆ ಪೂರೈಕೆಯಾಗಿದೆ ಎಂದು ತಿಳಿಸಿದರು. ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಒಳಪಡಿಸುವ ಸಂಬಂಧ 5 ಬಾರಿ ಟೆಂಡರ್ ಕರೆಯಲಾಗಿದ್ದು, ಯಾರೂ ಸಹ ಭಾಗವಹಿಸುತ್ತಿಲ್ಲ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಸಭೆಯ ಗಮನಕ್ಕೆ ತಂದರು. ಸ್ಥಳೀಯ ಸಂಸ್ಥೆಗಳಲ್ಲೂ ಸಹ ಮ್ಯಾಚಿಂಗ್ ಫಂಡ್ ಇದ್ದು, ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಮುಂದಾಗುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ಕೃಷ್ಣಪ್ಪ ಅವರು ಮಾತನಾಡಿ ಕಾಲೇಜು ರಸ್ತೆ ಬಳಿ ಜಾನುವಾರುಗಳು ಉಪಯೋಗಿಸುವ ಬಾಳೆಕಾಯಿಗೆ ಸೊಳ್ಳೆ ಉತ್ಪತ್ತಿ ಆಗುತ್ತಿದೆ ಎಂದು ಬಾಳೆಕಾಯಿಗೆ ಮಣ್ಣು ಹಾಕುತ್ತಾರೆ. ಈ ಬಗ್ಗೆ ಗಮನಹರಿಸಬೇಕು ಎಂದು ಸಭೆಯ ಗಮನಕ್ಕೆ ತಂದರು. ಸಮಿತಿ ಸದಸ್ಯರಾದ ರೇಗನ್ ಅವರು ಮಾತನಾಡಿ ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೀದಿನಾಯಿಗಳನ್ನು ಹಿಡಿದು ನಾಗರಹೊಳೆ ವ್ಯಾಪ್ತಿಗೆ ಬಿಡುವುದು ಎಷ್ಟು ಸರಿ ಎಂದು ಗಮನ ಸೆಳೆದರು. ಪ್ರಾಣಿ ದಯಾಸಂಘದ ಸದಸ್ಯರಾದ ಶಿವಶಂಕರ ಅವರು ಜಾನುವಾರುಗಳಿಗೆ ಸ್ಥಳೀಯವಾಗಿಯೇ ಮೇವು ಖರೀದಿಸಲು ಮುಂದಾಗಬೇಕು ಎಂದು ಸಲಹೆ ಮಾಡಿದರು. ಸಮಿತಿ ಸದಸ್ಯರಾದ ಗಿರೀಶ್ ತಾಳತ್ತ್‍ಮನೆ, ಡಾ.ಕೆ.ಪಿ.ಅಯ್ಯಪ್ಪ ಅವರು ಬೀದಿನಾಯಿಗಳ ಹಾವಳಿ ನಿಯಂತ್ರಣ ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆ ಮತ್ತಿತರ ಬಗ್ಗೆ ಹಲವು ಸಲಹೆ ನೀಡಿದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಪ್ರಸನ್ನ, ಡಾ.ನವೀನ್, ಡಾ.ಗಿರೀಶ್, ಡಾ.ಸಂಜೀವ್ ಕುಮಾರ್ ಸಿಂಧೆ, ಡಾ.ರಾಜಾಶೇಖರ್, ಇತರರು ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.