
ಗೋಣಿಕೊಪ್ಪ ಸೆ.5 NEWS DESK : ಗೋಣಿಕೊಪ್ಪ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ ಕುಮಾರ್ ಉತ್ತಮ ಶಿಕ್ಷಕರ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಗೋಣಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಶಾಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿ, ಮಕ್ಕಳ ಶಿಕ್ಷಣದ ಉನ್ನತೀಕರಣಕ್ಕೆ ಶ್ರಮಿಸುತ್ತಿದ್ದಾರೆ. ಕಳೆದ ಬಾರಿ ನಡೆದ ಶತಮಾನೋತ್ಸವ ಸಂಭ್ರಮವನ್ನು ಅತ್ಯುತ್ತಮವಾಗಿ ಆಯೋಜಿಸುವ ಮೂಲಕ ರಾಜ್ಯಮಟ್ಟದಲ್ಲಿ ಗಮನ ಸೆಳೆಯಲಾಗಿತ್ತು. ಶಾಲೆಯಲ್ಲಿ, ಸಮಸ್ಯೆಯಾಗಿ ಕಾಡುತ್ತಿದ್ದ ಕುಡಿಯುವ ನೀರು ಸುಚಿತ್ವ ಕೊಟ್ಟಡಿಗಳ ನವೀಕರಣ ಸರಿದಂತೆ ಹಲವಾರು ಕಾರ್ಯೋಜನೆಗಳನ್ನ ರೂಪಿಸುವ ಮೂಲಕ ಸರ್ಕಾರಿ ಶಾಲೆಯ ಮಕ್ಕಳ ಓದಿಗೆ ಪೂರಕ ವಾತಾವರಣ ನಿರ್ಮಿಸುವಲ್ಲಿ ಕುಮಾರ್ ಬಹುಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ. ಇವರು ಕುಶಾಲನಗರದ ನಿವಾಸಿಯಾಗಿದ್ದಾರೆ.









