Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೇಂದ್ರ ಸರಕಾರದ ಹೊಸ ಜಿ.ಎಸ್.ಟಿ ನೀತಿ ದೇಶದ ಅಭಿವೃದ್ಧಿಗೆ ಪೂರಕ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೇಂದ್ರ ಸರಕಾರದ ಹೊಸ ಜಿ.ಎಸ್.ಟಿ ನೀತಿ ದೇಶದ ಅಭಿವೃದ್ಧಿಗೆ ಪೂರಕ*

ಸೆಪ್ಟೆಂಬರ್ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.5 NEWS DESK : ಕೇಂದ್ರ ಸರಕಾರ ಇತ್ತೀಚೆಗೆ ಘೋಷಿಸಿರುವ ಹೊಸ ಜಿಎಸ್‍ಟಿ ನೀತಿ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಶೇ.12 ಮತ್ತು ಶೇ.28 ರ ತೆರಿಗೆ ಸ್ಲ್ಯಾಬ್ ಗಳನ್ನು ತೆಗೆದು ಹಾಕಿ ಶೇ.5 ಮತ್ತು ಶೇ.18 ರ ಸ್ಲ್ಯಾಬ್ ನ್ನು ಮಾತ್ರ ಉಳಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ನಾಲ್ಕು ಹಂತದ ಜಿಎಸ್‍ಟಿ ನೀತಿಯನ್ನು ಕಡಿತಗೊಳಿಸಿ ಎರಡಕ್ಕೆ ಸೀಮಿತಗೊಳಿಸುವ ಮೂಲಕ ಜನಪರ ಕಾಳಜಿ ತೋರಿದೆ. ಈ ಕ್ರಮದಿಂದ ಅನೇಕ ವಸ್ತುಗಳ ಬೆಲೆ ಕಡಿಮೆಯಾಗಲಿದ್ದು, ಬಡವರ ಹಾಗೂ ಜನಸಾಮಾನ್ಯರ ಆರ್ಥಿಕ ಬಲ ಸುಧಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆರೋಗ್ಯಕ್ಕೆ ಪೂರಕವಾದ ಅನೇಕ ಜೀವನಾವಶ್ಯಕ ಮತ್ತು ಜೀವರಕ್ಷಕ ಸಂಬಂಧಿತ 33 ಔಷಧಿಗಳು, ವೈಯುಕ್ತಿಕ ವಿಮೆ, ಕ್ಯಾನ್ಸರ್ ಚಿಕಿತ್ಸೆ ಹಾಗೂ ಸ್ಟೇಷನರಿಗಳು ಶೂನ್ಯ ತೆರಿಗೆ ವ್ಯಾಪ್ತಿಗೆ ಬರಲಿದೆ. ರಸಗೊಬ್ಬರ, ಕೃಷಿ ಯಂತ್ರೋಪಕರಣ, ಟ್ರ್ಯಾಕ್ಟರ್, ಸ್ಪಿಂಕ್ಲರ್ ಮತ್ತು ತುಂತುರು ನೀರಾವರಿಗೆ ಸಂಬಂಧಿಸಿದ ವಸ್ತುಗಳ ಮೇಲಿನ ತೆರಿಗೆಯನ್ನು ಶೇ.12ರಿಂದ ಶೇ.5ಕ್ಕೆ ರಿಂದ ಇಳಿಕೆ ಮಾಡುವ ಮೂಲಕ ಕೇಂದ್ರ ಸರಕಾರ ರೈತರ ಪ್ರಗತಿ ಹಾಗೂ ದೇಶದ ಅಭಿವೃದ್ದಿಗೆ ದೊಡ್ಡ ಕೊಡುಗೆಯನ್ನೇ ನೀಡಿದೆ. ಗೃಹ ನಿರ್ಮಾಣದ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗಿದೆ. ಸಿಮೆಂಟ್, ಕಬ್ಬಿಣ, ಇಟ್ಟಿಗೆ, ಟೈಲ್ಸ್ ಮತ್ತು ಗೃಹ ಬಣ್ಣದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲಾಗಿದ್ದು, ಇದರಿಂದ ಎಲ್ಲಾ ಬಡವರ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಮನೆ ಹೊಂದುವ ಕನಸು ನನಸಾಗಲಿದೆ. ವಿಮೆ ಹೊಂದಿದ ನಾಗರೀಕರಿಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಿದ್ದು, ಇದು ಸಾಕಷ್ಟು ಜನರಿಗೆ ದೊಡ್ಡ ಲಾಭವಾಗಲಿದೆ. ದೇಶದಲ್ಲಿ ದೊಡ್ಡ ಆರ್ಥಿಕ ಕ್ರಾಂತಿಯೇ ನಡೆಯಲಿದ್ದು, ಇತರ ರಾಷ್ಟ್ರಗಳಿಗೆ ಭಾರತ ಅಭಿವೃದ್ಧಿ ಕಾರ್ಯಗಳ ಮೂಲಕವೇ ಪ್ರತ್ಯುತ್ತರ ನೀಡಲಿದೆ ಎಂದು ಹೇಳಿದ್ದಾರೆ. ಕೇಂದ್ರ ಸರಕಾರ ಜನಪರ ಕಾಳಜಿಯಿಂದ ಅನೇಕ ತೆರಿಗೆ ಸುಧಾರಣೆಗಳನ್ನು ಮಾಡಿದ್ದರೂ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರಕಾರ ಕೇವಲ ಜಿಎಸ್‍ಟಿ ನೀತಿಯನ್ನು ಟೀಕಿಸುವುದರಲ್ಲೇ ಕಾಲಹರಣ ಮಾಡುತ್ತಿದೆ. ರಾಜ್ಯದಲ್ಲಿ ತಾನು ವಿಧಿಸಿರುವ ಹೆಚ್ಚಿನ ಸೆಸ್ ಮತ್ತು ತೆರಿಗೆಗಳನ್ನು ಇಳಿಕೆ ಮಾಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಎಂದು ನಾಪಂಡ ರವಿ ಕಾಳಪ್ಪ ಟೀಕಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.