
ಮಡಿಕೇರಿ ಸೆ.6 NEWS DESK : ಬೆಂಗಳೂರಿನ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕ ಘಟಕದ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಹೆಸರಿನಲ್ಲಿ ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕೊಡಗಿನ ಐವರು ಶಿಕ್ಷಕರು ಸ್ವೀಕರಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೊನ್ನಂಪೇಟೆಯ ಬೆಕ್ಕೆಸೊಡ್ಲೂರಿನ ಶಾರದ ಪ್ರೌಢಶಾಲೆಯ ಸಹಶಿಕ್ಷಕರಾದ ಎನ್.ಡಿ.ತಿಮ್ಮಯ್ಯ, ಸೋಮವಾರಪೇಟೆ ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಸಿ.ಕೆ.ರಾಧ, ಕೂಡಿಗೆ ಸರ್ಕಾರಿ ಪದವಿ ಪುರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಹೆಚ್.ಜೆ., ವಿರಾಜಪೇಟೆ ತಾಲ್ಲೂಕಿನ ಬಿಳುಗುಂದ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಅರುಣ್ ಆ್ಯನಿಸ್ ಡಿಸೋಜ ಮತ್ತು ಸೋಮವಾರಪೇಟೆಯ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ ಸಹ ಶಿಕ್ಷಕರಾದ ಭವ್ಯ ಕೆ.ಕೆ. ಪ್ರಶಸ್ತಿಯನ್ನು ಸ್ವೀಕರಿಸಿದರು.





































