

ಮಡಿಕೇರಿ ಸೆ.6 NEWS DESK : ಮಡಿಕೇರಿ ನಗರದ ಪುಟಾಣಿ ನಗರದಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಒಂಭತ್ತು ದಿನಗಳ ಕಾಲ ಗಣಪತಿ ಹೋಮ, ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಸೇರಿದಂತೆ ರಂಗ ಪೂಜೆ, ವಿಶೇಷ ಪೂಜೆ, ಪ್ರಾರ್ಥನೆ ನೇರವೇರಿಸಿದರು. ನಂತರ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಮಂಟಪದಲ್ಲಿ ಗಣಪತಿ ಮೂರ್ತಿಯ ಮೆರವಣಿಗೆ ನಡೆಸಿ, ಗೌರಿ ಕೆರೆಯಲ್ಲ ಗಣೇಶ ಮೂರ್ತಿಯನ್ನು ವಿಸರ್ಜಿಸಿದರು. ಮೆರವಣಿಗೆಯ ಉದ್ದಕ್ಕೂ ಮಕ್ಕಳು, ಯುವಕರು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ಡಿ.ಜೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಡಿಕೇರಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.









