Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ : ವೀರ ಯೋಧರ ಸ್ಮರಣೆ ನಮ್ಮ ಜವಾಬ್ದಾರಿ : ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ* 
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ : ವೀರ ಯೋಧರ ಸ್ಮರಣೆ ನಮ್ಮ ಜವಾಬ್ದಾರಿ : ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ* 

ಸೆಪ್ಟೆಂಬರ್ 7, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಸೆ.7 : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ  ಸ್ಕ್ವಾಡ್ರನ್  ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರು) ಹಾಗೂ  ಸ್ಕ್ವಾಡ್ರನ್  ಲೀಡರ್ ಅಜ್ಜಮಾಡ ದೇವಯ್ಯ ಟ್ರಸ್ಟ್ನ ಸಹಯೋಗದಲ್ಲಿ  ಸ್ಕ್ವಾಡ್ರನ್  ಲೀ.ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ನಿವೃತ್ತ ಸೇನಾಧಿಕಾರಿಗಳು, ಯೋಧರು, ಜನಪ್ರತಿನಿಧಿಗಳು, ಕೊಡವ ಸಮಾಜದ ಪ್ರತಿನಿಧಿಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಪ್ರಮುಖರು ವೀರ ಯೋಧನಿಗೆ ಗೌರವ ಅರ್ಪಿಸಿದರು. ಸ್ಕ್ವಾಡ್ರನ್ .ಲೀ.ಅಜ್ಜಮಾಡ ಬಿ.ದೇವಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅವರು ದೇಶ ಹಾಗೂ ದೇಶದ ಪ್ರಜೆಗಳನ್ನು ರಕ್ಷಿಸುತ್ತಿರುವ ವೀರ ಯೋಧರನ್ನು ಸ್ಮರಿಸುವುದು ನಮ್ಮ ಜವಾಬ್ದಾರಿಯಾಗಿದೆ. ನಮ್ಮನ್ನು ದೇವರು ರಕ್ಷಿಸುತ್ತಾರೆ ಎಂದು ನಾವು ಸದಾ ದೇವರನ್ನು ಸ್ಮರಿಸುತ್ತೇವೆ. ನಮ್ಮನ್ನು ಸುರಕ್ಷಿತವಾಗಿಟ್ಟಿರುವ ಸೈನಿಕರು ಕೂಡ ದೇವರಿಗೆ ಸಮಾನರಾಗಿದ್ದು, ನಮಗಾಗಿ ಜೀವ ಕೊಟ್ಟ ಹುತಾತ್ಮರ ಸ್ಮರಣೆ ನಮ್ಮ ಕರ್ತವ್ಯವಾಗಿದೆ ಎಂದರು. ಸ್ಕ್ವಾಡ್ರನ್  ಲೀಡರ್ ಅಜ್ಜಮಾಡ ದೇವಯ್ಯ ಅವರು ದೇಶದ ರಕ್ಷಣೆಗಾಗಿ ಹುತಾತ್ಮರಾಗುವ ಮೂಲಕ ಯುವ ಪೀಳಿಗೆಗೆ ಸ್ಫೂರ್ತಿಯಾಗಿದ್ದಾರೆ. ಇವರ ಆದರ್ಶವನ್ನು ಯುವ ಸಮೂಹ ಮೈಗೂಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರುವ ಮೂಲಕ ದೇಶಸೇವೆಗೆ ಮುಂದಾಗಬೇಕು ಎಂದು ಕರೆ ನೀಡಿದರು. ಪ್ರತಿವರ್ಷ ವೀರ ಯೋಧರ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸುತ್ತಿರುವ ಕೊಡವ ಮಕ್ಕಡ ಕೂಟ ಸಂಘಟನೆ ಇತರರಿಗೆ ಮಾದರಿಯಾಗಿದೆ ಎಂದು ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು. ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ವೀರಮರಣವನ್ನಪ್ಪಿದ  ಸ್ಕ್ವಾಡ್ರನ್  ಲೀಡರ್ ಅಜ್ಜಮಾಡ ದೇವಯ್ಯ ಅವರು ದೇಶಪ್ರೇಮದಲ್ಲಿ ಎಲ್ಲರಿಗೂ ಮಾದರಿಯಾಗಿದ್ದಾರೆ. ತಮ್ಮ ಜೀವದ ಹಂಗನ್ನು ತೊರೆದು ಶತ್ರುಗಳೊಂದಿಗೆ ಹೋರಾಡಿ ದೇಶಪ್ರೇಮವನ್ನು ಮೆರೆದಿದ್ದಾರೆ ಎಂದು ಸ್ಮರಿಸಿದರು. ನಿವೃತ್ತ ಸೇನಾಧಿಕಾರಿ ಬಾಳೆಯಡ ಮಂದಪ್ಪ ಅವರು ಮಾತನಾಡಿ  ಸ್ಕ್ವಾಡ್ರನ್  ಲೀಡರ್ ಅಜ್ಜಮಾಡ ದೇವಯ್ಯ ಅವರು ತಮ್ಮ ಕುಟುಂಬದ ಬಗ್ಗೆ ಚಿಂತಿಸದೆ ದೇಶದ ರಕ್ಷಣೆಗಾಗಿ ಜೀವ ನೀಡಿದ್ದಾರೆ. ಮಹಾವೀರ ಚಕ್ರ ಪುರಸ್ಕೃತ ದೇವಯ್ಯ ಅವರ ತ್ಯಾಗ ಬಲಿದಾನ ಅವಿಸ್ಮರಣೀಯವಾಗಿದ್ದು, ಇವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು. ಇಂದು ಭಾರತೀಯ ವಾಯುಸೇನೆ ನಮ್ಮ ದೇಶದಲ್ಲೇ ನಿಂತು ಶತ್ರು ರಾಷ್ಟ್ರದ ಮೇಲೆ ಹೋರಾಟ ನಡೆಸುವಷ್ಟು ಸಮರ್ಥವಾಗಿದೆ. ಅಂದು ಸ್ಕ್ವಾಡ್ರನ್  ಲೀಡರ್ ಅಜ್ಜಮಾಡ ದೇವಯ್ಯ ಅವರು ಶತ್ರುರಾಷ್ಟ್ರದೊಳಗೆ ನುಗ್ಗಿ ಸಾಹಸದಿಂದ ಹೋರಾಟ ನಡೆಸುವ ಮೂಲಕ ವಾಯುಸೇನೆಯ ಗೌರವವನ್ನು ಹೆಚ್ಚಿಸಿದ್ದರು ಎಂದು ಶ್ಲಾಘಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಫೋರಂ ನ ಪ್ರಮುಖರಾದ ಉಳ್ಳಿಯಡ ಪೂವಯ್ಯ ಅವರು ಮಾತನಾಡಿ ದೇಶಕ್ಕಾಗಿ ಬಲಿದಾನಗೈದ  ಸ್ಕ್ವಾಡ್ರನ್  ಲೀಡರ್ ಅಜ್ಜಮಾಡ ದೇವಯ್ಯ ಅವರ ಪುಣ್ಯಸ್ಮರಣೆಯನ್ನು ಪ್ರತಿವರ್ಷ ಸೆ.7ರಂದು ರಾಜ್ಯವ್ಯಾಪಿ ಆಚರಿಸುವಂತಾಗಬೇಕು ಎಂದರು. ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಅವರು ಮಾತನಾಡಿ ವೀರ ಸೇನಾನಿಗಳು ತಮ್ಮ ಬಲಿದಾನದ ಮೂಲಕ ದೇಶಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ.  ಸ್ಕ್ವಾಡ್ರನ್  ಲೀಡರ್ ಅಜ್ಜಮಾಡ ದೇವಯ್ಯ ಅವರು ಸೇರಿದಂತೆ ಸಹಸ್ರ ಸಹಸ್ರ ಸೈನಿಕರು ದೇಶಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಇವರುಗಳ ಕೊಡುಗೆ ಅವಿಸ್ಮರಣೀಯವೆಂದು ತಿಳಿಸಿದರು.
*ನಿವೃತ್ತ ಯೋಧರಿಗೆ ಭದ್ರತೆ ಬೇಕು*
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಸೈನಿಕರು ತಮ್ಮ ಜೀವದ ಹಂಗು ತೊರೆದು ದೇಶಸೇವೆಯಲ್ಲಿ ತೊಡಗಿರುವುದರಿಂದ ನಾವುಗಳು ಸುರಕ್ಷಿತರಾಗಿದ್ದೇವೆ. ಆದರೆ ದೇಶವನ್ನು ರಕ್ಷಿಸಿ ನಿವೃತ್ತರಾಗಿ ಬರುವ ಯೋಧರಿಗೆ ಇಂದು ಜೀವನ ಭದ್ರತೆ ಇಲ್ಲದಾಗಿದೆ. ಸರಕಾರ ನಿವೃತ್ತ ಯೋಧರ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು, ಯಾವುದೇ ಸಮಸ್ಯೆಗಳಿದ್ದರೂ ತಕ್ಷಣ ಸ್ಪಂದಿಸಿ ಪರಿಹರಿಸಬೇಕು. ಸರಕಾರಿ ಕಚೇರಿಗಳಿಗೆ ಮಾಜಿ ಸೈನಿಕರನ್ನು ಅಲೆದಾಡಿಸಬಾರದು. ಆರೋಗ್ಯ ಸುರಕ್ಷತೆ, ಮೂಲಭೂತ ಸೌಲಭ್ಯ, ನಿವೇಶನ ಸೇರಿದಂತೆ ನಿವೃತ್ತ ಯೋಧರ ಬೇಡಿಕೆಗಳಿಗೆ ಸರಕಾರ ಮಾನ್ಯತೆ ನೀಡುವ ಮೂಲಕ ಜೀವನ ಭದ್ರತೆ ಒದಗಿಸಬೇಕು ಎಂದರು. ಭಾರತೀಯ ವಾಯುಸೇನಾ ಪಡೆಯ  ಸ್ಕ್ವಾಡ್ರನ್  ಲೀಡರ್ ಹುದ್ದೆಯನ್ನೇರಿ ತನ್ನ ಜೀವದ ಹಂಗನ್ನು ತೊರೆದು ಶತ್ರುಗಳೊಂದಿಗೆ ಹೋರಾಡಿದ ಅಜ್ಜಮಾಡ ದೇವಯ್ಯ ಅವರು ವೀರಮರಣವನ್ನಪ್ಪಿ 60 ವರ್ಷಗಳೇ ಕಳೆದು ಹೋಗಿದೆ. 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣವನ್ನಪ್ಪಿದ  ಸ್ಕ್ವಾಡ್ರನ್  ಲೀಡರ್ ಅಜ್ಜಮಾಡ ದೇವಯ್ಯ ಅವರು ದೇಶ ರಕ್ಷಣೆಯ ಮೂಲಕ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಅಜ್ಜಮಾಡ ಬಿ.ದೇವಯ್ಯ ಹಾಗೂ ಕರ್ನಲ್ ಪುಟ್ಟಿಚಂಡ ಎಸ್.ಗಣಪತಿ ಅವರಿಗೆ ಮಹಾವೀರ ಚಕ್ರ ಪ್ರಶಸ್ತಿ ದೊರೆತ್ತಿದೆ. ಆ ಮೂಲಕ ಕೊಡಗು ಜಿಲ್ಲೆಗೆ ಎರಡು ಮಹಾವೀರ ಚಕ್ರ ಪ್ರಶಸ್ತಿ ದೊರೆತಂತ್ತಾಗಿದೆ. ಇಬ್ಬರು ಯೋಧರು ದಕ್ಷತೆ ಮತ್ತು ಶೌರ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ವೀರಯೋಧರ ಸ್ಮರಣೆಗೆ ಪ್ರತಿಯೊಬ್ಬರು ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.  ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ, ನಿರ್ದೇಶಕಿ ತೆನ್ನಿರ ಟೀನಾ, ಸಲಹೆಗಾರರಾದ ಐಚಂಡ ರಶ್ಮಿ ಮೇದಪ್ಪ, ಅಜ್ಜಮಾಡ ಒಕ್ಕದ ಅಧ್ಯಕ್ಷ ಲವ ಕುಶಾಲಪ್ಪ, ಪ್ರಮುಖರಾದ ಅಜ್ಜಮಾಡ ಬೋಪಯ್ಯ, ಅಜ್ಜಮಾಡ ಚಂಗಪ್ಪ, ಅಜ್ಜಮಾಡ ಬೆಳ್ಯಪ್ಪ, ಅಜ್ಜಮಾಡ ರಮೇಶ್, ಅಜ್ಜಮಾಡ ಅಯ್ಯಣ್ಣ, ಅಜ್ಜಮಾಡ ಮಂಜುನಾಥ್, ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಜಿಲ್ಲಾ ತರಬೇತಿ ಆಯುಕ್ತ ಕೆ.ಯು.ರಂಜಿತ್, ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷ ಕೇಕಡ ವಿಜು ದೇವಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ಮಾಜಿ ಉಪಾಧ್ಯಕ್ಷ ಮಣವಟ್ಟಿರ ಚಿಣ್ಣಪ್ಪ ಸೇರಿದಂತೆ ಕೊಡವ ಮಕ್ಕಡ ಕೂಟದ ಸದಸ್ಯರು, ನಿವೃತ್ತ ಯೋಧರು, ಸೇನಾಭಿಮಾನಿಗಳು ಹಾಗೂ ಅಜ್ಜಮಾಡ ಕುಟುಂಬಸ್ಥರು ಹಾಜರಿದ್ದು  ಸ್ಕ್ವಾಡ್ರನ್  ಲೀಡರ್ ಅಜ್ಜಮಾಡ ದೇವಯ್ಯ ಅವರಿಗೆ ಪುಷ್ಪನಮನ ಸಲ್ಲಿಸಿದರು. ಇದೇ ಸಂದರ್ಭ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಫೋರಂ ನ ಮಾಜಿ ಅಧ್ಯಕ್ಷ ಕರ್ನಲ್ ಕಂಡ್ರತಂಡ ಸುಬ್ಬಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮೌನಾಚರಣೆ ಮಾಡಲಾಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಭಕ್ತರ ಹರ್ಷೋದ್ಘಾರದ ನಡುವೆ ತಲಕಾವೇರಿಯಲ್ಲಿ ತೀರ್ಥೋದ್ಭವ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 17: ಮಡಿಕೇರಿ ದಸರಾ ಅಂಗವಾಗಿ ಮಡಿಕೇರಿ ನಗರ ದಸರಾ ಸಮಿತಿ ಹಾಗೂ ಮಡಿಕೇರಿ ದಸರಾ…

ಭಕ್ತರ ಹರ್ಷೋದ್ಘಾರದ ನಡುವೆ ತಲಕಾವೇರಿಯಲ್ಲಿ ತೀರ್ಥೋದ್ಭವ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.