Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ : ಶಿಸ್ತುಬದ್ಧ ಜೀವನಕ್ಕೆ ಜಯಂತಿ ಶೆಟ್ಟಿ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ : ಶಿಸ್ತುಬದ್ಧ ಜೀವನಕ್ಕೆ ಜಯಂತಿ ಶೆಟ್ಟಿ ಕರೆ

ಸೆಪ್ಟೆಂಬರ್ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಸೆ.7 : ವಿದ್ಯಾರ್ಥಿಗಳು ಶಿಸ್ತುಬದ್ಧ ಜೀವನ ನಡೆಸುವ ಮೂಲಕ ಶೈಕ್ಷಣಿಕ ಗುರಿ ಸಾಧಿಸಬೇಕು ಎಂದು ಸಮಾಜ ಸೇವಕಿ ಜಯಂತಿ ಶೆಟ್ಟಿ ಕರೆ ನೀಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿ ವಿಭಾಗದ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ಮಡಿಕೇರಿ ಸ್ಥಳೀಯ ಸಂಸ್ಥೆ ಮಟ್ಟದ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು. ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ಎನ್‌ಸಿಸಿ, ಕ್ರೀಡೆ ಮತ್ತಿತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಬೆಳೆಸುತ್ತದೆ. ಇಲ್ಲಿ ರೂಢಿಸಿಕೊಂಡ ಶಿಸ್ತು ಮುಂದೆ ಉತ್ತಮ ಜೀವನಕ್ಕೆ ಸಹಕಾರಿಯಾಗಲಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಲವು ಸರಕಾರಿ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಶಿಸ್ತಿನಿಂದ ತೊಡಗಿಸಿಕೊಂಡು ಗಮನ ಸೆಳೆದಿದ್ದಾರೆ. ನಾನು ಕೂಡ ಸ್ಕೌಟ್ಸ್ ಮತ್ತು ಗೈಡ್ಸ್ ನ ಭಾಗವಾಗಿರಲು ಇಚ್ಛಿಸುತ್ತೇನೆ ಎಂದರು. ತಮ್ಮ ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕಿದ ಜಯಂತಿ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಈ ರೀತಿಯ ಕಾರ್ಯಕ್ರಮಗಳಿಗೆ ಸದಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ದೇಶಭಕ್ತಿ ಗಾಯನದ ಮೂಲಕ ಅವರು ವಿದ್ಯಾರ್ಥಿಗಳ ಗಮನ ಸೆಳೆದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಅವರು ಮಾತನಾಡಿ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು ಮತ್ತು ಶಿಸ್ತನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ದೇಶಭಕ್ತಿ, ಶಿಸ್ತು ಮತ್ತು ಜಾತಿ ಮತ ಭೇದವಿಲ್ಲದ ಒಗ್ಗಟ್ಟಿನ ಜೀವನದ ಪಾಠವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಹೇಳಿಕೊಡುತ್ತದೆ. ಈ ಸಂಸ್ಥೆಯ ಭಾಗವಾಗಿರುವ ಎಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ನಿಸ್ವಾರ್ಥದಿಂದ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವೆಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿಯ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅವರು ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ದೇಶದ ಉಜ್ವಲ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ದೇಶಾಭಿನದೊಂದಿಗೆ ಗುರಿ ಸಾಧಿಸಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಇದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಇಂದು ದೇಶಭಕ್ತಿ ಗಾಯನದ ಮೂಲಕ ವಿದ್ಯಾರ್ಥಿಗಳು ತಮ್ಮ ದೇಶಾಭಿಮಾನವನ್ನು ಮೆರೆದಿದ್ದಾರೆ. ಈ ರೀತಿಯ ದೇಶಭಕ್ತಿಯ ಮತ್ತು ಪ್ರತಿಭಾನ್ವೇಷಣೆಯ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
*ಗಾಯನ ಸ್ಪರ್ಧಾ ವಿಜೇತರು*  
ಸ್ಕೌಟ್ಸ್ ವಿಭಾಗದಲ್ಲಿ ಸಂತ ಮೈಕಲರ ಶಾಲೆ ಪ್ರಥಮ, ಸಂತ ಜೋಸೆಫರ ಶಾಲೆ ದ್ವಿತೀಯ, ಗೈಡ್ಸ್ ವಿಭಾಗದಲ್ಲಿ ಸಂತ ಜೋಸೆಫರ ಶಾಲೆಯ ‘ಬಿ’  ತಂಡ ಪ್ರಥಮ, ಸಂತ ಮೈಕಲರ ಶಾಲೆಯ ಇಂಗ್ಲೀಷ್ ಮಾಧ್ಯಮ ವಿಭಾಗ ದ್ವಿತೀಯ, ಬುಲ್ ಬುಲ್ ವಿಭಾಗದಲ್ಲಿ ಸಂತ ಜೋಸೆಫರ ಶಾಲೆ ಪ್ರಥಮ ಬಹುಮಾನ ಗಳಿಸಿತು. ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿಯ ಉಪಾಧ್ಯಕ್ಷೆ ನೀಲಮ್ಮ ಎನ್.ಯು. ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್ ನಿರೂಪಿಸಿ ವಂದಿಸಿದರು. ತೀರ್ಪುಗಾರರಾಗಿ ಹಿರಿಯ ಕಲಾವಿದೆ ಹಾಗೂ ಸಾಹಿತಿ ಶೋಭಾ ಸುಬ್ಬಯ್ಯ, ನಿವೃತ್ತ ಮುಖ್ಯ ಶಿಕ್ಷಕಿ ಹಾಗೂ ಗಾಯಕಿ ಪ್ರೇಮ ಕೃಷ್ಣಪ್ಪ ಕಾರ್ಯ ನಿರ್ವಹಿಸಿದರು. ಸಂಸ್ಥೆಯ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ, ಜಿಲ್ಲಾ ತರಬೇತಿ ಆಯುಕ್ತರಾದ ರಂಜಿತ್ ಕೆ.ಯು, ಮೈಥಿಲಿ ರಾವ್, ಸಹಾಯಕ ಆಯುಕ್ತರಾದ ಸುಲೋಚನ, ಖಜಾಂಚಿ ಎಂ.ಎಸ್.ಶಾಂತಿ, ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಕಾರ್ಯದರ್ಶಿಗಳಾದ ವಸಂತಿ, ನಳಿನಿ ಸುವರ್ಣ, ಸಹ ಕಾರ್ಯದರ್ಶಿಗಳಾದ ಬೊಳ್ಳಜಿರ ಬಿ.ಅಯ್ಯಪ್ಪ, ಸುಚಿತ ಕಾವೇರಪ್ಪ, ಸದಸ್ಯರುಗಳಾದ ಗುಲ್ ಷನ್, ಸೂರಜ್ ತಿಮ್ಮಯ್ಯ, ಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಭಕ್ತರ ಹರ್ಷೋದ್ಘಾರದ ನಡುವೆ ತಲಕಾವೇರಿಯಲ್ಲಿ ತೀರ್ಥೋದ್ಭವ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 17: ಮಡಿಕೇರಿ ದಸರಾ ಅಂಗವಾಗಿ ಮಡಿಕೇರಿ ನಗರ ದಸರಾ ಸಮಿತಿ ಹಾಗೂ ಮಡಿಕೇರಿ ದಸರಾ…

ಭಕ್ತರ ಹರ್ಷೋದ್ಘಾರದ ನಡುವೆ ತಲಕಾವೇರಿಯಲ್ಲಿ ತೀರ್ಥೋದ್ಭವ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.