
ಮಡಿಕೇರಿ ಸೆ.8 NEWS DESK : ಮೂರ್ನಾಡು 33/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು, ಎಫ್2 ನಾಪೋಕ್ಲು ಹಾಗೂ ಹೊದ್ದೂರು ಫೀಡರ್‍ನಲ್ಲಿ ಸೆ.9 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು ಟೌನ್ ಮುತ್ತಾರ್‍ಮುಡಿ, ಕಿಗ್ಗಾಲು, ಕುಂಬಳದಾಳು, ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೇರೂರು, ನಾಪೋಕ್ಲು ಟೌನ್ ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲ್ಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.








