Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಲ್ಲುಬಾಣೆಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಲ್ಲುಬಾಣೆಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ* 

ಸೆಪ್ಟೆಂಬರ್ 9, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ ಸೆ.9 NEWS DESK : ಕಲ್ಲುಬಾಣೆಯ ಬದ್ರಿಯ ಜುಮಾ ಮಸೀದಿ ಹಾಗೂ ದಾರುಲ್ ಇಸ್ಲಾಂ ಮದ್ರಾಸದ ವತಿಯಿಂದ ಕಲ್ಲುಬಾಣೆಯಲ್ಲಿ ಪ್ರವಾದಿ ಹಜರತ್ ಮುಹಮ್ಮದ್ (ಸ.ಅ.ವ) ಅವರ 1500ನೇ ವರ್ಷದ ಜನ್ಮದಿನವಾದ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಕಲ್ಲುಬಾಣೆಯ ಬದ್ರಿಯಾ ಮಸೀದಿಯಿಂದ ಪಂಜರಪೇಟೆವರೆಗೆ ಅದ್ದೂರಿ ಸಂದೇಶ ಜಾಥಾ ನಡೆಯಿತು. ಹಸಿರು ಧ್ವಜಗಳೊಂದಿಗೆ ಮಕ್ಕಳು, ಯುವಕರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನಬಿಯವರ ಪ್ರೀತಿಯ ಘೋಷಣೆಗಳನ್ನು ಮೊಳಗಿಸಿದರು. ಊರಿನ ಬೀದಿಗಳಲ್ಲಿ ಮೆರವಣಿಗೆ ಸಾಗಿದಾಗ, ಧಾರ್ಮಿಕ ಉತ್ಸಾಹದ ಜೊತೆಗೆ ಸೌಹಾರ್ದತೆಯ ಸಂದೇಶ ಹರಡಿತು. ನಂತರ ಬದ್ರಿಯಾ ಶಾಲಾ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನ ಸೆಳೆಯುವಂತಾಗಿತ್ತು. ವಿಶೇಷ ಆಕರ್ಷಣೆಯಾಗಿ ದಫ್ ತಂಡಗಳು ತಮ್ಮ ಮನೋಹರವಾದ ಪ್ರದರ್ಶನದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು.  ಮಕ್ಕಳ ನಾತ್ ಪಠಣ, ಭಾಷಣ ಹಾಗೂ ಕಾವ್ಯ ವಾಚನಗಳು ಪ್ರವಾದಿಯವರ ಜೀವನೋಪದೇಶಗಳನ್ನು ನೆನಪಿಗೆ ತಂದುಕೊಟ್ಟವು. ಕಾರ್ಯಕ್ರಮದ ಅಂತ್ಯದಲ್ಲಿ ನಡೆದ ಬಹುಮಾನ ವಿತರಣೆ ಸಮಾರಂಭದಲ್ಲಿ ಸ್ಪರ್ಧೆಗಳಲ್ಲಿ ಜಯಗೊಂಡ ಮಕ್ಕಳಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷತೆಯನ್ನು ಪಿ.ಕೆ. ಆಪ್ಸಲ್ ವಹಿಸಿದ್ದರು. ಉಸ್ತಾದ್ ಅಲಿ ಬಕ್‍ಅವಿ ಅವರು ಘನ ಉಪಸ್ಥಿತರಾಗಿದ್ದರು. ಬದ್ರಿಯ ಜುಮಾ ಮಸೀದಿ ಹಾಗು ದಾರುಲ್ ಇಸ್ಲಾಂ ಮದ್ರಸದ ಆಡಳಿತ ಮಂಡಳಿಯ ಸದಸ್ಯರು, ಧಾರ್ಮಿಕ ಪಂಡಿತರು ಹಾಗೂ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದು, ಪ್ರವಾದಿ ಪೈಗಂಬರ್ ರವರ ಉಪದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವನ್ನು ಸಾರಿದರು. ಹೆಚ್ಚಿನ ಸಮಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು. ಜನಸಾಗರದ ಮಧ್ಯೆ ಉತ್ಸಾಹಭರಿತವಾಗಿ ನಡೆದ ಈದ್ ಮಿಲಾದ್ ಹಬ್ಬ, ಧಾರ್ಮಿಕ ಏಕತೆ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರತಿಬಿಂಬಿಸಿತು ಸಂದೇಶ ಜಾಥಾದ ಸಂದರ್ಭ ದಾರಿಯುದ್ದಕ್ಕೂ ಎಲ್ಲರಿಗೂ ಸಿಹಿ ಹಾಗೂ ಪಾನೀಯ ಹಂಚಲಾಯಿತು. ಈ ಸಂದರ್ಭ ಸ್ವಚ್ಚತೆಯನ್ನು ಕಾಪಾಡುವ ಸಲುವಾಗಿ ಮರವಣಿಗೆಯುದ್ದಕ್ಕೂ ಯಾವುದೇ ಪೇಪರ್, ಪ್ಲಾಸ್ಟಿಕ್ ಸೇರಿದಂತೆ ಇತರ ವಸ್ತುಗಳು ರಸ್ತೆಯ ಬದಿ ಹಾಕದೆ ತಾವೇ ಅದನ್ನು ಒಂದು ವಾಹನದಲ್ಲಿ ತುಂಬಿಕೊಂಡು ಸ್ವಚ್ಚತೆಗೆ ಆದಯತೆ ನೀಡಿ ಮಾದರಿಯಾದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 17: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ…

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.