Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮತ್ತೆ ಕಸದ ಕೊಂಪೆಯಾದ ದಾಸವಾಳ ಕೆರೆ ಜಾಗ : ಉದ್ಯಾನವನದ ಯೋಜನೆಯನ್ನೇ ಮರೆತ ನಗರಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮತ್ತೆ ಕಸದ ಕೊಂಪೆಯಾದ ದಾಸವಾಳ ಕೆರೆ ಜಾಗ : ಉದ್ಯಾನವನದ ಯೋಜನೆಯನ್ನೇ ಮರೆತ ನಗರಸಭೆ*

ಸೆಪ್ಟೆಂಬರ್ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.9 NEWS DESK : ಮಡಿಕೇರಿ ನಗರದಲ್ಲಿ ಅಭಿವೃದ್ಧಿ ಕಾರ್ಯಗಳೆಂದರೆ ಅದು ಭೂಮಿಪೂಜೆಗಷ್ಟೇ ಸೀಮಿತ ಎನ್ನುವುದಕ್ಕೆ ನಗರದ ದಾಸವಾಳ ಕೆರೆಯ ಉದ್ಯಾನವನದ ಯೋಜನೆಯೇ ಅತ್ಯುತ್ತಮ ಸಾಕ್ಷಿಯಾಗಿದೆ. ಉದ್ಯಾನವನದ ಭಾಗ್ಯ ಕಾಣದ ಕೆರೆ ಜಾಗ ಇಂದು ಮತ್ತೆ ಕಸದ ಕೊಂಪೆಯಾಗಿ ಮಾರ್ಪಟ್ಟಿದೆ. ಸುಮಾರು 4 ವರ್ಷಗಳ ಹಿಂದೆ ನಗರದ ಹೃದಯ ಭಾಗದ 12ನೇ ವಾರ್ಡ್‍ನ ದಾಸವಾಳ ಕೆರೆ ಜಾಗದಲ್ಲಿ ಸುಂದರವಾದ ಉದ್ಯಾನವನ ನಿರ್ಮಿಸಲೆಂದು ಅಂದಿನ ಬಿಜೆಪಿ ಸರಕಾರ ಭೂಮಿಪೂಜೆಯನ್ನು ನೆರವೇರಿಸಿತು. ಕಳೆದ ಹಲವು ದಶಕಗಳಿಂದ ಕೆರೆಯಾಗಿದ್ದ ಈ ಜಾಗ ನೀರು ಬತ್ತಿ ಹೋದ ಮೇಲೆ ವಾಹನಗಳ ನಿಲ್ದಾಣವಾಗಿ ಮಾರ್ಪಟ್ಟಿತ್ತು. ಕ್ರಮೇಣ ತ್ಯಾಜ್ಯ ವಿಲೇವಾರಿಯ ಪ್ರದೇಶವಾಗಿಯೂ ಅನಧಿಕೃತವಾಗಿ ಗುರುತಿಸಿಕೊಂಡಿತು.
ನಗರದಲ್ಲಿ ತ್ಯಾಜ್ಯ ವಿಲೇವಾರಿ ಮಾಡಲು ಜನವಸತಿ ಇಲ್ಲದ ಸೂಕ್ತ ಜಾಗ ಗುರುತು ಮಾಡಲು ವಿಫಲವಾಗಿದ್ದ ಅಂದಿನ ಆಡಳಿತ ವ್ಯವಸ್ಥೆ ನಗರದ ಮಧ್ಯಭಾಗದ ದಾಸವಾಳ ಕೆರೆ ಪ್ರದೇಶದಲ್ಲೇ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಮುಂದಾಗಿತ್ತು. ಆದರೆ ಈ ಪ್ರದೇಶದ ಸುತ್ತಮುತ್ತ ನೂರಾರು ಮನೆಗಳು, ಶಿಶು ವಿಹಾರ, ಆಸ್ಪತ್ರೆ ಮತ್ತು ಪ್ರಾರ್ಥನಾ ಮಂದಿರ ಇರುವ ಕಾರಣ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಇದರಿಂದ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಯ ಯೋಜನೆಯನ್ನು ಕೈಬಿಟ್ಟ ನಗರಸಭೆ ಉದ್ಯಾನವನ ಸ್ಥಾಪಿಸಲು ಮುಂದಾಯಿತು. ಅಲ್ಲದೆ ಸಚಿವರಾದಿಯಾಗಿ ಶಾಸಕರುಗಳು ಕೂಡ ಭೂಮಿಪೂಜೆ ನೆರವೇರಿಸಿ ಸುಂದರವಾದ ಉದ್ಯಾನವನದ ಕನಸು ಹುಟ್ಟು ಹಾಕಿದರು. ಭೂಮಿಪೂಜೆಯಾಗಿ 4 ವರ್ಷಗಳೇ ಕಳೆದಿದ್ದರೂ ಇಲ್ಲಿಯವರೆಗೆ ಯಾವುದೇ ಉದ್ಯಾನವನ ನಿರ್ಮಾಣವಾಗಿಲ್ಲ, ದಾಸವಾಳ ಕೆರೆ ಪ್ರದೇಶ ಇಂದಿಗೂ ಖಾಲಿ ಬಿದ್ದಿದೆ. *ನಾಯಿಗಳ ಹಾವಳಿ* ಇದೀಗ ಯಾವುದೇ ಅಭಿವೃದ್ಧಿ ಕಾಣದೆ ಖಾಲಿ ಇರುವ ದಾಸವಾಳ ಕೆರೆ ಜಾಗದಲ್ಲಿ ಕಾಡು ಬೆಳೆದಿದೆ. ನಗರಸಭೆಗೆ ಸೇರಿದ ಕಸ ಮತ್ತು ಶೌಚಾಲಯದ ತ್ಯಾಜ್ಯ ವಿಲೇವಾರಿಯ ವಾಹನಗಳನ್ನು ನಿಲುಗಡೆಗೊಳಿಸಲಾಗುತ್ತಿದೆ. ಅಲ್ಲದೆ ಕಸದ ರಾಶಿಯನ್ನು ಕೂಡ ಹಾಕಲಾಗುತ್ತಿದೆ. ಇದರಿಂದ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಕಸದ ರಾಶಿಯನ್ನು ಎಳೆದಾಡುತ್ತಿರುವ ನಾಯಿಗಳಿಂದ ಅಶುಚಿತ್ವದ ವಾತಾವರಣ ಸೃಷ್ಟಿಯಾಗಿದೆ. ಪಾದಾಚಾರಿಗಳಲ್ಲಿ ಆತಂಕವನ್ನು ಸೃಷ್ಟಿಸುತ್ತಿರುವ ನಾಯಿಗಳು ದ್ವಿಚಕ್ರ ವಾಹನ ಸವಾರರ ಮೇಲೆ ದಾಳಿ ಮಾಡುತ್ತಿವೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ತಕ್ಷಣ ಉದ್ಯಾನವನ ನಿರ್ಮಾಣಕ್ಕೆ ನಗರಸಭೆ ಮುಂದಾಗಬೇಕೆಂದು ಒತ್ತಾಯಿಸಿರುವ ಸಾರ್ವಜನಿಕರು, ದಾಸವಾಳ ಕೆರೆ ಜಾಗದ ಅಶುಚಿತ್ವದ ವಾತಾವರಣ ಹೀಗೆ ಮುಂದುವರಿದರೆ ಆಸ್ಪತ್ರೆ, ಪ್ರಾರ್ಥನಾ ಮಂದಿರ, ಶಿಶು ವಿಹಾರ ಮಾತ್ರವಲ್ಲದೆ ಸ್ಥಳೀಯ ನಿವಾಸಿಗಳಿಗೂ ತೊಂದರೆಯಾಗಲಿದೆ ಎಂದು ಗಮನ ಸೆಳೆದಿದ್ದಾರೆ. *ಅನುದಾನದ ಕೊರತೆ* ದಾಸವಾಳ ಕೆರೆ ಜಾಗ ಒತ್ತುವರಿಯಾಗುತ್ತಿದ್ದ ಹಿನ್ನೆಲೆ ಮೂರು ವರ್ಷಗಳ ಹಿಂದೆ ರೂ.17 ಲಕ್ಷ ವೆಚ್ಚದಲ್ಲಿ ಸುತ್ತಲೂ ಕಾಂಪೌಂಡ್ ನಿರ್ಮಿಸಲಾಗಿದೆ. ಉದ್ಯಾನವನ ನಿರ್ಮಾಣಕ್ಕಾಗಿ 14 ಲಕ್ಷ ರೂ.ಗಳ ಯೋಜನೆಯನ್ನು ರೂಪಿಸಲಾಗಿದ್ದು, ಅನುದಾನ ಬಿಡುಗಡೆಯಾಗಬೇಕಾಗಿದೆ. ಮುಂದಿನ ನಗರಸಭೆಯ ಸಭೆಯಲ್ಲಿ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಲಾಗುವುದು. ನಂತರ ಟೆಂಡರ್ ಪ್ರಕ್ರಿಯೆ ನಡೆಸಲಾಗುವುದು, ಮುಂದಿನ ವರ್ಷ ಮಾರ್ಚ್ ತಿಂಗಳಿನಲ್ಲಿ ಕಾಮಗಾರಿ ಆರಂಭಗೊಳ್ಳಬಹುದು. (ಎಂ.ಎಂ.ಬಷೀರ್ ಅಹಮ್ಮದ್, ನಗರಸಭಾ ಸದಸ್ಯರು, 12 ನೇ ವಾರ್ಡ್)  

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.