Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರ : ಹುಣ್ಣಿಮೆ ಅಂಗವಾಗಿ ಕಾವೇರಿ ಮಾತೆಗೆ ವಿಶೇಷ ಪೂಜೆ : ಕಾವೇರಿ ಕಲುಷಿತವಾಗದಂತೆ ಎಚ್ಚರಿಕೆ ವಹಿಸಲು ರವೀಂದ್ರ ಪ್ರಸಾದ್ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ : ಹುಣ್ಣಿಮೆ ಅಂಗವಾಗಿ ಕಾವೇರಿ ಮಾತೆಗೆ ವಿಶೇಷ ಪೂಜೆ : ಕಾವೇರಿ ಕಲುಷಿತವಾಗದಂತೆ ಎಚ್ಚರಿಕೆ ವಹಿಸಲು ರವೀಂದ್ರ ಪ್ರಸಾದ್ ಕರೆ

ಸೆಪ್ಟೆಂಬರ್ 10, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಸೆ.10 NEWS DESK : ತೀರ್ಥರೂಪಿಣಿಯಾಗಿ ಹರಿದು ನಾಡಿನ ಜೀವನದಿಯಾಗಿರುವ ಕಾವೇರಿ ಕಲುಷಿತಗೊಳ್ಳದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಬಾರವಿ ಕನ್ನಡ ಅಭಿಮಾನಿ ಸಂಘದ ಸಂಚಾಲಕ ರವೀಂದ್ರ ಪ್ರಸಾದ್ ಹೇಳಿದರು. ಪಟ್ಟಣದ ಟೋಲ್ ಗೇಟ್ ನಲ್ಲಿರುವ ಕಾವೇರಿ ದೇಗುಲದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಭಾದ್ರಪದ ಶುಕ್ಲ ಹುಣ್ಣಿಮೆ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ರಾಜ್ಯದಲ್ಲಿ ಕಾವೇರಿ ನದಿ ನೀರನ್ನು ಸಹಸ್ರಾರು ಮಂದಿ ಕುಡಿಯುತ್ತಿದ್ದು ಜನರು ಕಸ ತ್ಯಾಜ್ಯ ಎಸೆಯುವುದರಿಂದ ನೀರು ಮಲಿನ ವಾಗುತ್ತದೆ. ಸ್ವಚ್ಛ ಪರಿಸರ ನಿರ್ಮಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ಕಾವೇರಿಯ ಆರಾಧನೆಯೊಂದಿಗೆ ನದಿ ನೀರು ಸ್ವಚ್ಛವಾಗಿ ಹರಿಯುವ ಸಂದರ್ಭ ಗ್ರಾಮ ಪಟ್ಟಣಗಳ ಕಲುಷಿತ ನೀರು ನೇರವಾಗಿ ಸೇರದಂತೆ ಎಚ್ಚರ ವಹಿಸಬೇಕು. ನಿರಂತರವಾಗಿ ಕಾರ್ಯಕ್ರಮಗಳ ಮೂಲಕ ನದಿ ಸ್ವಚ್ಛತೆ ಬಗ್ಗೆ ನದಿ ಪರಿಸರದ ಕಾಳಜಿ ವಹಿಸುತ್ತಿರುವ ಬಾರವಿ ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾವೇರಿ ಪ್ರತಿಮೆಗೆ ಹಾಲು, ತುಪ್ಪ, ಜೇನು, ಎಳನೀರು,ಅರಿಸಿನ, ಕುಂಕುಮಗಳಿಂದ ಅಭಿಷೇಕ ಮಾಡಲಾಯಿತು. ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಆರತಿ ಬೆಳಗಲಾಯಿತು. ಅರ್ಚಕ ಪುರುಷೋತ್ತಮ್ ಭಟ್ ಮಾತನಾಡಿ, ಕಾವೇರಿ ನದಿ ನೀರಿನ ಶುದ್ಧತೆ ಕಾಪಾಡಿಕೊಳ್ಳುವುದು ನಮ್ಮ ಕೈನಲ್ಲಿದೆ. ಎಲ್ಲರೂ ತಮ್ಮ ವ್ಯಾಪ್ತಿಯಲ್ಲಿ ಶುಚಿತ್ವ ಕಾಪಾಡಿಕೊಂಡು ತ್ಯಾಜ್ಯ ನೀರು ನದಿಗೆ ಸೇರದಂತೆ ನೋಡಿಕೊಂಡರೆ ಅದು ನಾವು ಮಾಡುವ ಪುಣ್ಯದ ಕಾರ್ಯದಲ್ಲಿ ಒಂದಾಗುತ್ತದೆ. ಪ್ರತಿಯೊಬ್ಬರೂ ನದಿಯ ಸಂರಕ್ಷಣೆಗೆ ಮುಂದಾಗಬೇಕು ಎಂದರು. ಬೆಂಗಳೂರು ಸುನಂದ ಕೌಶಿಕ್ ಅವರು ಪೂಜಾ ಸೇವಾರ್ಥ ನೆರವೇರಿಸಿದರು. ನಂತರ ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಬಾರವಿ ಕನ್ನಡ ಅಭಿಮಾನಿ ಸಂಘದ ಪ್ರಮುಖರಾದ ಬಬಿಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್, ಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸೋಮಶೇಖರ್, ತಿಲಕ್ ಪೂಜಾರಿ, ಆರ್.ಆರ್.ಚಂದ್ರು, ರುದ್ರ, ಮಂಜು, ಪ್ರಸಾದ್,ಆರೋಗ್ಯ ಇಲಾಖೆಯ ನಿವೃತ್ತಿ ಅಧಿಕಾರಿ ನಟರಾಜು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.17 : ರೋಟರಿ ಮಡಿಕೇರಿ ವತಿಯಿಂದ ರವಿ ಆರ್ಥೋಪೆಡಿಕ್ ಸೆಂಟರ್ ಸಹಯೋಗದಲ್ಲಿ ಅ.19ರಂದು ನಗರದ ಗಾಂಧಿ…

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.