
ಮಡಿಕೇರಿ ಸೆ.9 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಹಾಗೂ ಎಫ್5 ಜಿ.ಟಿ ರಸ್ತೆ ಫೀಡರ್‍ನಲ್ಲಿ ಸೆ.11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಸರಾ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೈನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್, ಹಳೆ ಖಾಸಗಿ ಬಸ್ ಸ್ಟಾಂಡ್, ಜಯನಗರ, ಮಂಗಳದೇವಿನಗರ, ಪುಟಾಣಿನಗರ, ಜಲಾಶಯ ಬಡಾವಣೆ, ಅರಣ್ಯಭವನ, ಚೈನ್ ಗೇಟ್, ದೇಚೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.








