Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೆ.22 ರಂದು ಕೊಡಗು ಜಿಲ್ಲೆಗೆ ಬಸವ ಸಂಸ್ಕೃತಿ ಯಾತ್ರೆ ಆಗಮನ : ಕೊಡ್ಲಿಪೇಟೆಯಲ್ಲಿ ಪೂರ್ವಭಾವಿ ಸಭೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೆ.22 ರಂದು ಕೊಡಗು ಜಿಲ್ಲೆಗೆ ಬಸವ ಸಂಸ್ಕೃತಿ ಯಾತ್ರೆ ಆಗಮನ : ಕೊಡ್ಲಿಪೇಟೆಯಲ್ಲಿ ಪೂರ್ವಭಾವಿ ಸಭೆ

ಸೆಪ್ಟೆಂಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಶನಿವಾರಸಂತೆ ಸೆ.10 NEWS DESK : ಕೊಡಗು ಜಿಲ್ಲೆಗೆ ಸೆ.22 ರಂದು ಆಗಮಿಸಲಿರುವ ಬಸವ ಸಂಸ್ಕೃತಿ ಅಭಿಯಾನ ಯಾತ್ರೆಯನ್ನು ಕೊಡಗು ಜಿಲ್ಲೆಯ ಕೊಡ್ಲಿಪೇಟೆಯಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳು ಒಗ್ಗೂಡಿ ಸ್ವಾಗತಿಸಿಕೊಳ್ಳುವ ವಿಚಾರವಾಗಿ ಕೊಡಗು ಮಠಾಧಿಪತಿಗಳ ಸಮ್ಮುಖದಲ್ಲಿ  ಶನಿವಾರಸಂತೆಯ ಮನೆಹಳ್ಳಿ ಮಠದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸೆ.3 ರಿಂದ ಬಸವೇಶ್ವರರ ಕಲ್ಯಾಣದ ನಾಡು ಬೀದರ್ ನಿಂದ ಆರಂಭಗೊಂಡ ಅಭಿಯಾನ ರಾಜ್ಯದ 31 ಜಲ್ಲೆಗಳಲ್ಲಿ ಸಂಚರಿಸುತ್ತದೆ.  ಸೆ.21 ರಂದು ಹಾಸನ ಜಿಲ್ಲೆಗೆ ಬಂದು ಸೆ.22 ರಂದು ಕೊಡ್ಲಿಪೇಟೆಗೆ ಧಾವಿಸಲಿದೆ. ಅಂದು ಕೊಡಗು ಜಿಲ್ಲೆಯ ಎಲ್ಲಾ ಬಸವಪರ ಚಿಂತನೆಗಳ ಒಕ್ಕೂಟಗಳು, ಸಂಘ ಸಂಸ್ಥೆಗಳು, ಅಖಿಲ ಭಾರತ ವೀರಶೈವ ಮಹಾಸಭಾ, ಶರಣ ಸಾಹಿತ್ಯ ಪರಿಷತ್ತು ಸೇರಿದಂತೆ ಎಲ್ಲಾ ಸಮುದಾಯಗಳ ಮಂದಿ ಬಸವ ಸಂಸ್ಕೃತಿ ಅಭಿಯಾನವನ್ನು ಕೊಡ್ಲಿಪೇಟೆಯ ಬಸವೇಶ್ವರ ದೇವಾಲಯದ ಬಳಿ ಸ್ವಾಗತಿಸಿಕೊಂಡು ಮೆರವಣಿಗೆ ಮೂಲಕ ಕಿರಿಕೊಡ್ಲಿ ಮಠದ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯುವ ಧಾರ್ಮಿಕ ಸಭಾ ವೇದಿಕೆಗೆ ಆಗಮಿಸಲಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಹಾಗೂ ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಶಾಂಬಶಿವಮೂರ್ತಿ ಹೇಳಿದರು. ಧಾರ್ಮಿಕ ಸಭೆಯಲ್ಲಿ ಉತ್ತರ ಕರ್ನಾಟಕದ ಹೆಸರಾಂತ ಮಠಗಳ ಪೀಠಾಧಿಪತಿಗಳು, ಕೊಡಗು ಜಿಲ್ಲೆಯ ಎಲ್ಲಾ ಮಠಾಧಿಪತಿಗಳು ಭಾಗವಹಿಸಲಿದ್ದಾರೆ. ಬಸವಪರವಾದ ಶ್ರೇಷ್ಠ ಚಿಂತನೆಗಳನ್ನು ಹೊಂದಿರುವ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ, ರಾಜ್ಯ ಉಚ್ಚನ್ಯಾಯಾಲಯದ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಮೊದಲಾದ ಗಣ್ಯರು ಉಪಸ್ಥಿತರಿರುವರು ಎಂದು ಅವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಹನ್ನೆರಡನೆ ಶತಮಾನದ ಕ್ರಾಂತಿ ಪುರುಷ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿರುವುದರಿಂದ ಬಸವಣ್ಣನ ವಿಚಾರಧಾರೆ ಗಳು ಜನಸಮುದಾಯಕ್ಕೆ ತಲುಪಬೇಕು.  ಬಸವಣ್ಣ ಕೇವಲ ಸಮುದಾಯ ಒಂದರ ನಾಯಕನಲ್ಲ. ಮಾನವ ಕುಲದ ನಾಯಕನಾಗಿ ಸರ್ವ ಸಮ್ಮತವಾಗಿ ಎಲ್ಲಾ ಜನರು ವಚನಗಳ ಅಧ್ಯಯನದ ಮೂಲಕ ಬಸವೇಶ್ವರರ ವಿಚಾರಧಾರೆಗಳನ್ನು ಅರಿತು ಆತ್ಮಕಲ್ಯಾಣ ಮಾಡಿಕೊಂಡಲ್ಲಿ ತನ್ನಿಂದ ತಾನೇ ಸಮಾಜ ಕಲ್ಯಾಣ ವಾಗುತ್ತದೆ ಎಂಬ ದೃಷ್ಟಿಕೋನದಿಂದ ರಾಜ್ಯದ ಜನಮಾನಸದಲ್ಲಿ ಬಸವಣ್ಣನನ್ನು ನೆಲೆಸುವಂತೆ ಮಾಡಲು ಈ ಯಾತ್ರೆ ಹಾಗೂ ಅಭಿಯಾನ ಆಯೋಜಿತವಾಗಿದೆ ಎಂದು ಪೂರ್ವಸಭೆಯಲ್ಲಿ ಉಪಸ್ಥಿತರಿದ್ದ ವಿರಾಜಪೇಟೆ ತಾಲ್ಲೂಕಿನ ಅರಮೇರಿಯ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಕೊಡ್ಲಿಪೇಟೆ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ ಆಶಿಸಿದರು. ಪೂರ್ವಭಾವಿ ಸಭೆಯಲ್ಲಿ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧಿಕಾರಿ ಕೆ.ಪಿ.ಪರಮೇಶ್, ಮುದ್ದಿನ ಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮನೆಹಳ್ಳಿ ತಪೋವನ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲಳ್ಳಿ ಮಠದ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಸಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ವೀರಶೈವ ಮಹಾಸಭಾದ ಪದಾಧಿಕಾರಿಗಳಾದ ನಿಲುವಾಗಿಲು ಮದನ್, ಚಂದ್ರಶೇಖರ್, ಗಣಗೂರು ಚಂದ್ರಶೇಖರ್, ಯಶೋಧಮ್ಮ, ಮರೂರು ಹೆಚ್.ಎಸ್. ನಾಗರಾಜ್, ಹೆಬ್ಬಾಲೆ ಬಸವಣ್ಣ, ಕುಮಾರ್ ಇದ್ದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.17 : ರೋಟರಿ ಮಡಿಕೇರಿ ವತಿಯಿಂದ ರವಿ ಆರ್ಥೋಪೆಡಿಕ್ ಸೆಂಟರ್ ಸಹಯೋಗದಲ್ಲಿ ಅ.19ರಂದು ನಗರದ ಗಾಂಧಿ…

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.