
ಬೆಂಗಳೂರು ಸೆ.11 NEWS DESK : ವಿಧಾನಸೌಧದಲ್ಲಿಂದು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ಕೋರ್ಟ್‌ಗಳಲ್ಲಿ ಹೆಚ್ಚುವರಿ ಭೂಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹಾಗೂ ಅಧಿಕಾರಿಗಳ ಜೊತೆಗಿನ ಭಾಗವಹಿಸಿದರು.









