Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸ್ಕೌಟ್ಸ್, ಗೈಡ್ಸ್ ಕುಶಾಲನಗರ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ : ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಬೇಬಿಮ್ಯಾಥ್ಯೂ ಶ್ಲಾಘನೆ*
ಇತ್ತೀಚಿನ ಸುದ್ದಿಗಳು

*ಸ್ಕೌಟ್ಸ್, ಗೈಡ್ಸ್ ಕುಶಾಲನಗರ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ : ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಬೇಬಿಮ್ಯಾಥ್ಯೂ ಶ್ಲಾಘನೆ*

September 12, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

  • ಕುಶಾಲನಗರ ಸೆ.11 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯನ್ನು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಂಸ್ಥೆಯ ವಾರ್ಷಿಕ ಲೆಕ್ಕಪತ್ರವನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ಗಣೇಶ್ ಮಂಡಿಸಿದರು. ಸ್ಥಳೀಯ ಸಂಸ್ಥೆಯ ವಾರ್ಷಿಕ ವರದಿಯನ್ನು ಸಂಸ್ಥೆಯ ಕೋಶಾಧಿಕಾರಿ ನರೇಶ್ ಮಂಡಿಸಿದರು. ಸಭೆಯಲ್ಲಿ ಮಂಡಿಸಿದ ಲೆಕ್ಕಪತ್ರ ಹಾಗೂ ವಾರ್ಷಿಕ ವರದಿಯನ್ನು ಸಭೆಯು ಒಕ್ಕೊರಲಿನಿಂದ ಅಂಗೀಕರಿಸಿತು. ಸಭೆಯಲ್ಲಿ ಭಾಗವಹಿಸಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಲು ಉತ್ತಮ ವೇದಿಕೆ ಒದಗಿಸುತ್ತದೆ. ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸೌಹಾರ್ದತೆ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಿವೆ ಎಂದರು. ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯು ವಿವಿಧ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಮೂಲಕ ಮಕ್ಕಳು ಹಾಗೂ ಸಮುದಾಯಕ್ಕೆ ಉತ್ತಮ ಸಂದೇಶ ನೀಡುತ್ತಿರುವುದು ಶ್ಲಾಘನೀಯವಾದುದು ಎಂದು ಬೇಬಿಮ್ಯಾಥ್ಯೂ ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಮಾತನಾಡಿ,ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಕಲಿಸಲಾಗುತ್ತಿದೆ.‌ಸಂಸ್ಥೆಯ ಚಟುವಟಿಕೆಗಳಿಗೆ ಶಿಕ್ಷಣ ಇಲಾಖೆಯ ವತಿಯಿಂದ ಸದಾ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು. ಅಧ್ಯಕ್ಷತೆ ವಹಿಸಿದ್ದ ಸ್ಕೌಟ್, ಗೈಡ್ ನ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಸಂಸ್ಥೆಯ ವತಿಯಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ಕೈಗೊಂಡ ವಿವಿಧ ಕಾರ್ಯಕ್ರಮಗಳು/ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಕಳೆದ ಡಿಸೆಂಬರ್ 2024 ರಲ್ಲಿ ಕುಶಾಲನಗರದಲ್ಲಿ ಯಶಸ್ವಿಯಾಗಿ ನಡೆದ ಜಿಲ್ಲಾಮಟ್ಟದ ಮಕ್ಕಳ ರ್‍ಯಾಲಿಯಲ್ಲಿ ಮಕ್ಕಳಿಗೆ ವಿವಿಧ ಅಭ್ಯಾಸಾತ್ಮಕ ಚಟುವಟಿಕೆಗಳನ್ನು ನಡೆಸಲಾಯಿತು. ಪ್ರಸಕ್ತ ವರ್ಷದಲ್ಲಿ ಕೂಡ ಸಂಸ್ಥೆಯ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದರು. ಜಿಲ್ಲಾ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಉತ್ತಮ ಶಿಸ್ತು, ನಾಯಕತ್ವ ಗುಣ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಿದೆ ಎಂದರು. ಜಿಲ್ಲಾ ಸಹಾಯಕ ಗೈಡ್ಸ್ ಆಯುಕ್ತೆ ಸಿ.ಎಂ.ಸುಲೋಚನ, ಸಂಸ್ಥೆಯ ವಿವಿಧ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಸಹಾಯಕ ಗೈಡ್ಸ್ ಆಯುಕ್ತೆ ಸಿ.ಎಂ.ಸುಲೋಚನ, ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ಎ.ಎಸ್.ತಮ್ಮಯ್ಯ, ಉಪಾಧ್ಯಕ್ಷರಾದ ರಾಜೇಗೌಡ, ಕೆ.ಪಿ. ರಾಜು, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಇಂದಿರಾ ಮುತ್ತಣ್ಣ,
    ಕೋಶಾಧಿಕಾರಿ ಎನ್.ಎಸ್.ನರೇಶ್, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಶಾಲಾ ಮುಖ್ಯ ಶಿಕ್ಷಕಿ ಭಾಗ್ಯ, ಸ್ಕೌಟ್ಸ್ ಕಮೀಷನರ್ ತರಬೇತುದಾರ ಬಿ.ಕೆ. ಗಣೇಶ್, ಸ್ಕೌಟ್ಸ್ ಮಾಸ್ಟರ್ ಡಿ.ವಿ.ಗಣೇಶ್, ಕೊಡಗು ವಿಶ್ವವಿದ್ಯಾಲಯದ ಪ್ರೊ.ಮಂಜುಳ, ಸ್ಕೌಟ್ಸ್, ಗೈಡ್ಸ್ ನ ಶಿಕ್ಷಕರು, ಶಿಕ್ಷಕಿಯರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಮೈಸೂರಿನಲ್ಲಿ ಲಾಭದಾಯಕ ಬಾಳೆ ಕೃಷಿ ಕುರಿತು ರೈತರಿಗೆ ತರಬೇತಿ : ಕ್ಷೇತ್ರೋತ್ಸವ*
Next Article *ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.