Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*
  • *ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*
  • *ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*
  • *ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*
  • *ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*
  • *KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ : ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ : ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ*

ಸೆಪ್ಟೆಂಬರ್ 11, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.11 NEWS DESK : ಕರ್ನಾಟಕ ಅರಣ್ಯ ಇಲಾಖೆ ಕೊಡಗು ವೃತ್ತ ಮಡಿಕೇರಿ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ನಗರದ ಅರಣ್ಯ ಭವನದಲ್ಲಿರುವ ಅರಣ್ಯ ಹುತಾತ್ಮಕರ ಸ್ಮಾರಕಕ್ಕೆ ಗಣ್ಯರು ಪುಷ್ಪಗುಚ್ಛ ಸಮರ್ಪಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿ.ಅಭಿಷೇಕ್, ಎನ್.ಎಚ್.ಜಗನ್ನಾಥ, ಕೆ.ಎ.ನೆಹರು, ಸಂದೀಪ್ ಪಿ.ಅಭಯಂಕರ್, ಸೈಯದ್ ಅಹಮದ್ ಷಾ ಹುಸೈನಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿ.ಸೆಂದಿಲ್ ಕುಮಾರ್, ತಹಶೀನ್ ಬಾನು ದವಡಿ, ವಿ.ಪಿ.ಕಾರ್ಯಪ್ಪ, ವಲಯ ಅರಣ್ಯ ಸಂರಕ್ಷಣಾಧಿಕಾರಿ ತ್ಯಾಗರಾಜ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಎಂ.ಸಿ.ಅರುಣ್ ಕುಮಾರ್, ಕೊಡಗು ವೃತ್ತ ಪತ್ರಾಂಕಿತ ವ್ಯವಸ್ಥಾಪಕರಾದ ಪಿ.ಪಿ.ಸರೋಜ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಉಪ ವಲಯ ಅರಣ್ಯಾಧಿಕಾರಿ ಸುಬ್ರಾಯ, ಗಸ್ತು ಅರಣ್ಯ ಪಾಲಕರಾದ ನಾಗರಾಜ ರಡಾರಟ್ಟಿ, ಅರಣ್ಯ ವೀಕ್ಷಕರಾದ ಸಚಿನ್ ತಳವಾರ, ಕಚೇರಿ ಜಮೆದಾರರಾದ ಎಚ್.ಎಸ್.ಕಣ್ಣಯ್ಯ, ಆನೆ ಮಾವುತ ಅಣ್ಣಯ್ಯ ದೊರೆಯಪ್ಪ, ಆರ್‍ಆರ್‍ಟಿ ಸಿಬ್ಬಂದಿ ಕೆ.ಯು.ಕುಮಾರೇಶ್, ಅರಣ್ಯ ಕ್ಷೇಮಾಭಿವೃದ್ಧಿ ನೌಕರರ ಪರವಾಗಿ ಪಿ.ಪಿ.ಅಮ್ಮಣ್ಣಿ, ವಾಹನ ಚಾಲಕರ ಪರವಾಗಿ ಜಗದೀಶ್, ಪಿ.ಸಿ.ಇ ನೌಕರರ ಪರವಾಗಿ ಪುನೀತ್ ಕುಮಾರ್, ಪೊಲೀಸ್ ಇಲಾಖೆ ಪರವಾಗಿ ಎಎಸ್‍ಐ ಚೆನ್ನಕೇಶವ ಅವರು ಅರಣ್ಯ ಹುತಾತ್ಮಕರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದರು. ಬಳಿಕ ಮಾತನಾಡಿದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಅರಣ್ಯ ಸಂರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು. ಅರಣ್ಯ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪರಿಸರ ಉಳಿದಲ್ಲಿ ಜೀವ ವೈವಿದ್ಯ ಉಳಿಯಲು ಸಾಧ್ಯ ಎಂದು ಆನಂದ್ ಪ್ರಕಾಶ್ ಮೀನಾ ಹೇಳಿದರು. ರಾಷ್ಟ್ರದ ಗಡಿ ಪ್ರದೇಶದಲ್ಲಿ ಸೈನಿಕರು, ರಾಷ್ಟ್ರದ ಒಳಗಡೆ ಆಂತರಿಕವಾಗಿ ಪೊಲೀಸರು ನಾಗರಿಕರ ರಕ್ಷಣೆ ಮಾಡುತ್ತಾರೆ. ಅದೇ ರೀತಿ ಅರಣ್ಯ ಮತ್ತು ಪರಿಸರ ಸಂರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು. ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಟಿ ಅವರು ಮಾತನಾಡಿ ರಾಜಸ್ಥಾನದ ಜೋದ್‍ಪುರ್‍ನ ಮಹಾರಾಜರ ಅರಮನೆಗಾಗಿ ಸೈನಿಕರು ಕೇಜರ್ಲಿ ಪ್ರಾಂತ್ಯದಲ್ಲಿ ಬೆಳೆದಿದ್ದ ಮರಗಳನ್ನು ಕಡಿಯಲು ವಿರೋದಿಸಿದ್ದ ಬೀಷ್ಣೋಯಿ ಸಮುದಾಯದ ಸುಮಾರು 363 ಜನರನ್ನು ಕೊಲ್ಲಲಾಯಿತು. ಮರಗಳ ಸಂರಕ್ಷಣೆಗಾಗಿ ಬಲಿದಾನ ಹೊಂದಿದ ಭೀಷ್ಣೋಯಿಗಳ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಲು ಭಾರತ ಸರ್ಕಾರ ಸೆಪ್ಟೆಂಬರ್, 11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ ಎಂದು ಘೋಷಿಸಿ ಅರಣ್ಯ ಹುತಾತ್ಮರನ್ನು ಸ್ಮರಿಸಲಾಗುತ್ತದೆ ಎಂದರು. ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿ ಸರ್ವೋಚ್ಛ ತ್ಯಾಗವನ್ನು ಮಾಡಿ ಸಮರ್ಪಣಾ ಮನೋಭಾವದ ಹಲವಾರು ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಹೆಸರುಗಳು ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಇಂದಿಗೂ ಹಚ್ಚ ಹಸಿರಾಗಿದೆ. ಇವರ ಅಸಾಧಾರಣ ಪ್ರಯತ್ನಗಳು, ಧೈರ್ಯಶೀಲ ಕಾರ್ಯಗಳು ಮತ್ತು ಸರ್ವೋಚ್ಛ ತ್ಯಾಗಗಳು ಅಪಾಯಕ್ಕೊಳಗಾದ ನೈಸರ್ಗಿಕ ಸಂಪನ್ಮೂಲವನ್ನು ಕಾಪಾಡಲು ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ ಎಂದು ಅವರು ನುಡಿದರು. ಸ್ವಾಭಾವಿಕ ಹಾಗೂ ನೈಸರ್ಗಿಕ ಸಂಪನ್ಮೂಲವನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಶ್ರಮಿಸುತ್ತಿದ್ದು, ಅವರಿಗೆ ಎಲ್ಲರೂ ಕೈಜೋಡಿಸಬೇಕು. ಮುಂದಿನ ಪೀಳಿಗೆಗೆ ಅರಣ್ಯ ಸಂಪತನ್ನು ಉಳಿಸಬೇಕು ಎಂದು ಹೇಳಿದರು. ಅರಣ್ಯ ಸಂರಕ್ಷಿಸುವಲ್ಲಿ ಅರಣ್ಯ ಇಲಾಖೆಯ ಪಾತ್ರ ಪ್ರಮುಖವಾಗಿದೆ. ಸ್ಥಳೀಯರ ಸಹಕಾರ ಕೂಡ ಅಗತ್ಯ. ಅರಣ್ಯ ಇಲಾಖೆಯಲ್ಲಿ ಕರ್ತವ್ಯದಲ್ಲಿರುವ ಎಲ್ಲರ ಕುಟುಂಬಗಳ, ಸಮುದಾಯ, ರಾಷ್ಟ್ರದ ಅಭಿವೃದ್ಧಿಗೆ ಅರಣ್ಯ ಸಂಪತ್ತು ಉಳಿಯಬೇಕು ಎಂದರು. ‘ಅರಣ್ಯ ಇಲಾಖೆ ವನ್ಯಜೀವಿಗಳ ಹಾವಳಿ ನಿಯಂತ್ರಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ. ಕೆಲವು ಸಂದರ್ಭಗಳಲ್ಲಿ ಯಶಸ್ಸು ಕಾಣುತ್ತೇವೆ. ಕೆಲವು ಸಂದರ್ಭದಲ್ಲಿ ವಿಫಲವೂ ಸಹ ಆಗಿದ್ದೇವೆ. ಅರಣ್ಯ ಸಂರಕ್ಷಣೆ ಜೊತೆಗೆ ಎಲ್ಲಾ ಜನರ ಜೀವ ರಕ್ಷಣೆ ಸಹ ಅತೀ ಮುಖ್ಯ. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ವಿವರಿಸಿದರು.’ ಅರಣ್ಯ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳು ಅರಣ್ಯ ಸಂರಕ್ಷಣೆ ಜೊತೆಗೆ ಕುಟುಂಬದ ಹಿತ ರಕ್ಷಣೆ ಕಡೆಗೂ ಗಮನ ಹರಿಸುವುದು ಮುಖ್ಯ ಎಂದರು. ಅರಣ್ಯ ಇಲಾಖೆ ಸಿಬ್ಬಂದಿಗಳು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಮುಂದಿನ ವಾರ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದ್ದು, ಇದರಲ್ಲಿ ಪಾಲ್ಗೊಳ್ಳುವಂತಾಗಬೇಕು. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದರಿಂದ ಪ್ರತೀನಿತ್ಯದ ಜಂಜಾಟದಿಂದ ಹೊರಬರಲು ಸಹಕಾರಿಯಾಗಲಿದೆ ಎಂದು ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಭಿಪ್ರಾಯ ವ್ಯಕ್ತಪಡಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಅಭಿಷೇಕ್ ಅವರು ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಹುತಾತ್ಮರಾದ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಒಟ್ಟು 62 ಅರಣ್ಯ ಹುತಾತ್ಮರ ಹೆಸರು ಓದಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಾರತೀಯ ಅರಣ್ಯ ಸೇವೆ ಅಧಿಕಾರಿಯಾಗಿದ್ದ ಪಿ.ಶ್ರೀನಿವಾಸ್ ಅವರು ಆದರ್ಶ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಕಾಡಿಗಾಗಿ ಜನನ, ಕಾಡಿಗಾಗಿ ಜೀವನ, ಕಾಡಿಗಾಗಿ ಮರಣ ಎಂಬುದನ್ನೇ ತತ್ವವಾಗಿ ಇಟ್ಟುಕೊಂಡಿದ್ದ ಕನ್ನಡದ ಅರಣ್ಯ ಇಲಾಖೆಯ ವೀರ ಅಭಿಮನ್ಯು ಎಂದೇ ಕರೆಯುತ್ತಿದ್ದರು ಎಂದು ಸ್ಮರಿಸಿದರು. ಪಿ.ಶ್ರೀನಿವಾಸ್ ಅವರ ಕಾರ್ಯದಕ್ಷತೆ ಮೆಚ್ಚಿ ಭಾರತ ಸರ್ಕಾರವು ಇವರಿಗೆ ‘ಕೀರ್ತಿಚಕ್ರ’ ಎಂಬ ಸೌರ್ಯ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಿದೆ ಎಂದರು. ಕಾಡುಗಳ್ಳ, ದಂತಚೋರ, ವೀರಪ್ಪನ್‍ನ ನಯವಂಚನೆಗೆ ಸಿಲುಕಿ 1991 ರ ನವೆಂಬರ್, 10 ರಂದು ವಿಧಿವಶರಾದರು ಎಂದು ತಿಳಿಸಿದರು. ವೀರಪ್ಪನ್‍ನ ವಂಚನೆಯಿಂದ ಹುತಾತ್ಮರಾದ ಕೊಳ್ಳೆಗಾಲದ ಅರಣ್ಯ ರಕ್ಷಕರಾದ ಬಿ.ಸಿ.ಮೋಹನಯ್ಯ ಇವರ ತ್ಯಾಗವನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕಿದೆ. ಶಿರಸಿ ಮರಗಳ್ಳರ ದೌರ್ಜನ್ಯಕ್ಕೆ ಬಲಿಯಾದ ವಲಯ ಅರಣ್ಯಾಧಿಕಾರಿ ಅರವಿಂದ ಹೆಗಡೆ ಇವರ ಶೌರ್ಯವು ಕೂಡ ಸ್ಮರಣೀಯವಾಗಿದೆ ಎಂದರು. ಕಳೆದ ಸುಮಾರು 49 ವರ್ಷಗಳಿಂದ ಅಮೂಲ್ಯ ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ತಮ್ಮಗಳ ಬದುಕನ್ನೇ ಮುಡುಪಾಗಿಟ್ಟು, ಕಳ್ಳಸಾಗಾಣಿಕೆದಾರರ ಮರಗಳ್ಳರ ದಂತಚೋರರ ಜೊತೆಗೆ ಕೆಚ್ಚೆದೆಯಿಂದ ಹೋರಾಡಿ ನೈಸರ್ಗಿಕ ಸಂಪತನ್ನು ಉಳಿಸಲು ತಮ್ಮ ಜೀವನವನ್ನೇ ನಾಡಿಗಾಗಿ ತ್ಯಾಗ ಮಾಡಿದ ಅರಣ್ಯ ಇಲಾಖೆ ಅಧಿಕಾರಿ ಮತ್ತು ನೌಕರರ ಸ್ಮರಣೆಗಾಗಿ ಅರಣ್ಯ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತದೆ ಎಂದರು. ಉಪ ವಲಯ ಅರಣ್ಯಾಧಿಕಾರಿ ಐಶ್ವರ್ಯ ಆರ್.ಗೌಡರ ಅವರು ನಿರೂಪಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಏ.30 NEWS DESK : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ…

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 2026

*ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಏಪ್ರಿಲ್ 30, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಏಪ್ರಿಲ್ 30, 2026

*ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*

ಏಪ್ರಿಲ್ 30, 2026

*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*

ಏಪ್ರಿಲ್ 30, 2026

*KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*

ಏಪ್ರಿಲ್ 30, 2026

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.