Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಅಪರಾಧ ಮುಕ್ತ ಸಮಾಜದ ನಿರ್ಮಾಣಕ್ಕೆ ಬದ್ಧರಾಗಿ : ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಅಪರಾಧ ಮುಕ್ತ ಸಮಾಜದ ನಿರ್ಮಾಣಕ್ಕೆ ಬದ್ಧರಾಗಿ : ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ*

ಸೆಪ್ಟೆಂಬರ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಸೆ.12 NEWS DESK : ಅಪರಾಧ ಮುಕ್ತ ಸಮಾಜವನ್ನು ನಿರ್ಮಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಪ್ರತಿಯೊಬ್ಬರು ಕಾನೂನಿನ ನಿಯಮಗಳನ್ನು ಪಾಲಿಸುವುದರ ಜೊತೆಗೆ ಅಪರಾಧ ಮುಕ್ತ ಸಮಾಜವನ್ನು ನಿರ್ಮಿಸಲು ಬದ್ಧರಾಗಿ ಎಂದು ವಿರಾಜಪೇಟೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ವಿರಾಜಪೇಟೆ ಪೊಲೀಸ್ ಠಾಣೆ ಹಾಗೂ ಪದವಿ ಕಾಲೇಜಿನ ಐಕ್ಯೂಎಸಿ, ಎನ್ ಎಸ್ ಎಸ್, ಯುವ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂಚಾರಿ ನಿಯಮಗಳು ಹಾಗೂ ಮಾದಕ ವಸ್ತು ಸೇವನೆಯ ಪರಿಣಾಮಗಳು, ಕಾಯಿದೆಗಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿ ಅವರು, ಮಾತನಾಡಿದರು. ಸಂಚಾರಿ ನಿಯಮಗಳು ಹಾಗೂ ರಸ್ತೆ ಸುರಕ್ಷತೆಯ ಬಗ್ಗೆ ಉದಾಹರಣೆ ಸಮೇತ ವಿವಿರಿಸಿದ ಅವರು, ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ಯಥಾವತ್ತಾಗಿ ಪಾಲಿಸಬೇಕು. ವಾಹನ ಚಾಲನೆಯ ವೇಳೆಯಲ್ಲಿ ಸಂಭಂದಿತ ದಾಖಲೆಗಳು ಕಡ್ಡಾಯವಾಗಿ ಇರಬೇಕು ಎಂದರು. ಮಾದಕ ವಸ್ತುಗಳು ಮನುಷ್ಯನ ಜೀವನವನ್ನು ಹಾಳು ಮಾಡಿಬಿಡುತ್ತವೆ. ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆಯ ದಾಸರಾಗದೇ ಭವ್ಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. ಕಾನೂನನ್ನು ನಾವು ಗೌರವಿಸಿ ಪಾಲಿಸಬೇಕು. ಅವಾಗ ಅಪರಾಧಕ್ಕೆ ಆಸ್ಪದವಿರುವುದಿಲ್ಲ ಎಂದರು. ಸಂಚಾರಿ ನಿಯಮ ಉಲ್ಲಂಘನೆಯ ಕಾಯಿದೆಗಳು ಹಾಗೂ ಮಾದಕ ವಸ್ತು ಸೇವನೆಯ ಪರಿಣಾಮ, ಶಿಕ್ಷೆಗಳ ಕುರಿತು ಸಾಕ್ಷ್ಯ ಚಿತ್ರದ ಸಮೇತ ವಿವರಿಸಿ ಜಾಗೃತಿ ಮೂಡಿಸಿದರು. ವಿರಾಜಪೇಟೆ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಾದ ಪ್ರಮೋದ್ ರವರು ಮಾತನಾಡಿ ಕಾನೂನು ಸುವ್ಯವಸ್ಥೆ ಗೆ ಎಲ್ಲರೂ ಬದ್ಧರಾಗಿರಬೇಕು. ವಿದ್ಯಾರ್ಥಿ ಹಂತದಿಂದಲೇ ಉತ್ತಮ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ರೂಪಿಸಿಕೊಳ್ಳಬೇಕು. ಜೊತೆಗೆ ಕಾನೂನಿನ ಪಾಠವನ್ನು ಸಮಾಜಕ್ಕೆ ತಿಳಿ ಹೇಳಬೇಕು. ಅಪರಾಧ ಪ್ರಕರಣಗಳು ನಡೆಯದಂತೆ ಎಚ್ಚರಿಕೆಯನ್ನು ವಹಿಸಬೇಕು. ಉತ್ತಮ ಶಿಕ್ಷಣವನ್ನು ಪಡೆಯುದರ ಜೊತೆಗೆ ಉತ್ತಮ ಉದ್ಯೋಗವನ್ನು ಪಡೆದುಕೊಂಡು ಪೋಷಕರಿಗೂ, ವಿದ್ಯಾಸಂಸ್ಥೆಗೂ ಕೀರ್ತಿಯನ್ನು ತನ್ನಿ ಎಂದರು. ಅಪರಾಧವನ್ನು ತಡೆಗಟ್ಟಲು ಪೊಲೀಸ್ ಇಲಾಖೆಯ ಜೊತೆಗೆ ಸಹಕರಿಸಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮುಖ್ಯ. ಸಂವಿಧಾನವನ್ನು ಅರಿಯಬೇಕು. ಕಾನೂನಿನ ಅರಿವಾದಲ್ಲಿ ಅಪರಾಧಗಳು ನಡೆಯಲು ಸಾಧ್ಯವಿಲ್ಲ ಎಂದರು. ವಿರಾಜಪೇಟೆ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ಈ ಜಾಗೃತಿ ಕಾರ್ಯಕ್ರಮವು ಪರಿಣಾಮಕಾರಿಯಾಗಿದ್ದು ವಿದ್ಯಾರ್ಥಿಗಳು ತಾವು ಕಲಿತದನ್ನು ಬೇರೆಯವರಿಗೂ ತಿಳಿಸಿ ಜಾಗೃತಿ ಮೂಡಿಸಿ ಎಂದರು. ವೇದಿಕೆಯಲ್ಲಿ ವಿರಾಜಪೇಟೆ ಗ್ರಾಮಾಂತರ ಠಾಣೆಯ ಠಾಣಾಧಿಕಾರಿಗಳಾದ ಲತಾ, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಎನ್.ಎಸ್.ಎಸ್ ಅಧಿಕಾರಿ ಬಿ.ಎನ್.ಶಾಂತಿಭೂಷಣ್, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್ ರವರು ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಪ್ರತಿಮಾ ರೈ ರವರು ಸ್ವಾಗತಿಸಿ, ಎನ್ ಎಸ್ ಎಸ್ ಅಧಿಕಾರಿ ಶಾಂತಿಭೂಷಣ್ ನಿರೂಪಿಸಿ, ಉಪನ್ಯಾಸಕಿ ವಿಲೀನ ರವರು ವಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು, ಪೊಲೀಸ್ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ…

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.