
ನಾಪೋಕ್ಲು ಸೆ.12 NEWS DESK : ಚೆರಿಯಪರಂಬು ಆಟದ ಮೈದಾನದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬೇತು ಗ್ರಾಮದ ಎಕ್ಸೆಲ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ, ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕ್ರೀಡಾಕೂಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್ ನಲ್ಲಿ ತಾನಿಕ್ ತಮ್ಮಯ್ಯ, ಈತನ್ ಪೂವಣ್ಣ, ಆರವ್ ಅಯ್ಯಪ್ಪ ಪ್ರಥಮ ಸ್ಥಾನ, ಪ್ರೌಢ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್ ನಲ್ಲಿ ಚಿನ್ಮಯ್, ನಿಶಾಂತ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದ ಫುಟ್ಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದು ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕರಾದ ಚೋಕಿರ ತಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಅಂಜಪರವಂಡ ರೋಶನ್ ಮಾದಪ್ಪ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಸಕರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರ ವೃಂದದವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಶುಭಕೋರಿ, ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ : ದುಗ್ಗಳ ಸದಾನಂದ.








