Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ತರಬೇತಿ ಕಾರ್ಯಾಗಾರ : ಶೇ.100 ರಷ್ಟು ಸಮೀಕ್ಷೆ ನಡೆಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ತರಬೇತಿ ಕಾರ್ಯಾಗಾರ : ಶೇ.100 ರಷ್ಟು ಸಮೀಕ್ಷೆ ನಡೆಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಸೆಪ್ಟೆಂಬರ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.12 NEWS DESK :  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆಯಲ್ಲಿ ಯಾರೂ ಸಹ ಬಿಟ್ಟು ಹೋಗದಂತೆ ಶೇ.100 ರಷ್ಟು ಸಮೀಕ್ಷೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.  ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಜಿಲ್ಲಾ ಮಟ್ಟದ ಮಾಸ್ಟರ್ ತರಬೇತಿದಾರರಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಆದಿವಾಸಿ ಕೆಲವು ಕುಟುಂಬಗಳು ಇಂದಿಗೂ ಸಹ ಆಧಾರ ಕಾರ್ಡ್ ಪಡೆದಿರುವುದಿಲ್ಲ. ಹಾಗೆಯೇ ಕೆಲವು ಕುಟುಂಬಗಳಲ್ಲಿ ಪಡಿತರ ಚೀಟಿ ಸಹ ಇರುವುದಿಲ್ಲ. ಇಂತಹ ಕುಟುಂಬಗಳಿಗೆ ಐಟಿಡಿಪಿ ಇಲಾಖೆ ಜೊತೆಗೂಡಿ ಆಧಾರ್ ಕಾರ್ಡ್ ನೋಂದಣಿ ಮಾಡಿಸುವಂತೆ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ‘ಸಮೀಕ್ಷೆ ಸಂದರ್ಭದಲ್ಲಿ ಪ್ರಮುಖವಾಗಿ ಆಧಾರ್ ಕಾರ್ಡ್, ಪಡಿತರ ಚೀಟಿ, ವಿದ್ಯುತ್ ಸಂಪರ್ಕ ಹಾಗೂ ಮೊಬೈಲ್ ಸಂಪರ್ಕ ಇಲ್ಲದ ಕಡೆಗಳಲ್ಲಿ ಹೆಚ್ಚಿನ ಗಮನಹರಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ  ಸೂಚಿಸಿದರು.’ ದಸರಾ ರಜಾ ವೇಳೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುವುದರಿಂದ ಸೆಪ್ಟೆಂಬರ್, 22 ಆರಂಭದಲ್ಲಿಯೇ ಸಮೀಕ್ಷೆಯ ವೇಗವನ್ನು ಹೆಚ್ಚಿಸಬೇಕು. ಪ್ರತೀ ನಾಗರಿಕ ಕುಟುಂಬವನ್ನು ಸಮೀಕ್ಷೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಸಮೀಕ್ಷೆ ನಂತರ ಬೇಕಂತಲೇ ಸಮೀಕ್ಷೆಗೆ ಬಂದಿಲ್ಲ ಎಂಬ ದೂರುಗಳು ಸಹ ಬರುತ್ತವೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಶೇ.100 ರಷ್ಟು ಸಮೀಕ್ಷೆ ನಡೆಸುವುದರ ಜೊತೆಗೆ ಡೂಪ್ಲಿಕೇಟ್(ನಕಲು) ಆಗದಂತೆಯೂ ಸಹ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸಮೀಕ್ಷೆ ಸಂದರ್ಭದಲ್ಲಿ ಸುಮಾರು 60 ಪ್ರಶ್ನಾವಳಿಗಳಿದ್ದು, ಕುಟುಂಬಗಳಿಂದ ಮಾಹಿತಿ ಪಡೆದು ಆ್ಯಪ್ ಮೂಲಕವೇ ಸಮೀಕ್ಷೆ ಮಾಡಲಾಗುತ್ತದೆ ಎಂದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ಮನೆಗಳ ವಿದ್ಯುತ್ ಮೀಟರ್ ರೀಡರ್‍ಗಳಿಂದ ಕುಟುಂಬಗಳ ಪಟ್ಟಿ ಮಾಡಿ ಈ ಕುರಿತು ಮನೆಗಳ ಜಿಯೋ ಟ್ಯಾಗ್ ಸ್ಟಿಕ್ಕರ್‍ಗಳನ್ನು ಅಳವಡಿಸುವ ಕಾರ್ಯವನ್ನು ಶೀಘ್ರ ಪೂಣಗೊಳಿಸುವಂತೆ ಸೂಚಿಸಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವು ಸೆಪ್ಟೆಂಬರ್, 22 ರಿಂದ ಅಕ್ಟೋಬರ್, 07 ರವರೆಗೆ ನಡೆಯಲಿದೆ. ಸಮೀಕ್ಷೆಗಾಗಿ ವಿಶೇಷ ಆ್ಯಪ್ ನಿಗದಿಪಡಿಸಲಾಗಿದೆ ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ಜಿಲ್ಲಾ ಹಂತದಲ್ಲಿ ಆಯ್ಕೆ ಮಾಡಿದ್ದ ಮಾಸ್ಟರ್ ಟ್ರೈನರ್ ಅವರು ತರಬೇತಿ ನೀಡುತ್ತಿದ್ದು, ಸಂಶಯಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರುವಂತಾಗಬೇಕು ಎಂದು ಸಲಹೆ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್ ಅವರು ಮಾಹಿತಿ ನೀಡಿ ಸಮೀಕ್ಷೆಯಲ್ಲಿ 150 ಕುಟುಂಬಕ್ಕೆ ಒಬ್ಬ ಸಮೀಕ್ಷೆದಾರರನ್ನು ನೇಮಿಸಲಾಗುತ್ತದೆ ಎಂದು ಅವರು ಹೇಳಿದರು. ಈಗಾಗಲೇ ಪ್ರತೀ ಕುಟುಂಬಕ್ಕೂ ಸಾಮಾಜಿಕ ಮತ್ತು ಶೈಕ್ಷಣಿಕ ಸಂಬಂಧ ಮನೆಮನೆಗೆ ಸ್ಟಿಕ್ಕರ್ ಅಳವಡಿಸಿಕೊಂಡು ಬರಲಾಗುತ್ತಿದ್ದು, ಶೇ.75 ರಷ್ಟು ಪ್ರಗತಿ ಸಾಧಿಸಲಾಗಿದೆ. ಉಳಿದಂತೆ ಸ್ಟಿಕ್ಕರ್‍ಗಳನ್ನು ಅಳವಡಿಸುವ ಕಾರ್ಯ ಮುಂದುವರಿದಿದೆ ಎಂದು ಹೇಳಿದರು. ಮಾಸ್ಟರ್ ತರಬೇತಿದಾರರಾದ ಪ್ರಸನ್ನ, ಕೃಷ್ಣಮೂರ್ತಿ, ಜೀವನ್ ಕುಮಾರ್, ನಾರಾಯಣ, ಗುರುಸ್ವಾಮಿ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಆ್ಯಪ್ ಮೂಲಕ ಸಮೀಕ್ಷೆ ನಡೆಸುವ ಬಗ್ಗೆ ವಿವರಿಸಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ತಹಶೀಲ್ದಾರ್ ಪ್ರವೀಣ್ ಕುಮಾರ್, ಶ್ರೀಧರ, ಕಿರಣ್ ಗೌರಯ್ಯ, ಕೃಷ್ಣಮೂರ್ತಿ, ಮೋಹನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹೇಶ್, ಆನಂದ, ಕೃಷ್ಣಪ್ಪ, 30 ಮಂದಿ ಮಾಸ್ಟರ್ ತರಬೇತಿದಾರರು, ತಾ.ಪಂ.ಇಒಗಳು, ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.