
ಬೆಂಗಳೂರು ಸೆ.13 NEWS DESK : ರಾಜ್ಯದಲ್ಲಿನ ಪೌರಕಾರ್ಮಿಕರ ಸಮಸ್ಯೆಗಳ ಹಾಗೂ ವಿವಿಧ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಅಂಜುಂ ಪರ್ವೇಜ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ.ಬಿ.ಕಾವೇರಿ ಸೇರಿದಂತೆ ಹಿರಿಯ ಅಧಿಕಾರಿಗಳು, ಪೌರ ಕಾರ್ಮಿಕರ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.









