
ಮಡಿಕೇರಿ ಸೆ.13 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವತಿಯಿಂದ ಸೆ.19 ರಂದು ಕಿವುಡರ ಕ್ರೀಡಾಕೂಟ “ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್” ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಗೋಣಿಕೊಪ್ಪಲಿನ ಕರುಂಬಯ್ಯ ಲರ್ನಿಂಗ್ ಅಂಡ್ ಸ್ಪೋಡ್ರ್ಸ್ ಅಕಾಡೆಮಿಯಲ್ಲಿ ನಡೆಯಲಿರುವ ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷರಾದ ಗೌರು ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಗೌರವ ಅತಿಥಿಗಳಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕೆಎಎಲ್‍ಎಸ್ ಪ್ರಾಂಶುಪಾಲರಾದ ಗೌರಮ್ಮ ನಾಚಪ್ಪ, ಬೆಂಗಳೂರು ಕೊಡವ ಸಮಾಜದ ಪ್ರಧಾನ ಕಾರ್ಯದರ್ಶಿ ಲೆಫ್ಟಿನೆಂಟ್ ಕರ್ನಲ್ ಸಿ.ವಿವೇಕ್ ಮುತ್ತಣ್ಣ, ಗೋಣಿಕೊಪ್ಪಲು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಸಿ.ಪಿ.ಬೋಪಣ್ಣ, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ ರೈ, ಮೈಸೂರು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷ ಎಸ್.ಮೂರ್ತಿ, ಬೆಂಗಳೂರು ಕಿವುಡರ ಸಂಘ ಅಧ್ಯಕ್ಷರಾದ ಜಿ.ವಿಲಿಯಂ, ನವದೆಹಲಿ ಅಖಿಲ ಭಾರತ ಕಿವುಡರ ಕ್ರೀಡಾ ಮಂಡಳಿಯ ಅಧ್ಯಕ್ಷ ವಿ.ಕುಮಾರ್, ಬೆಂಗಳೂರು ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಿ.ಎಸ್.ನವೀನ್ ಕುಮಾರ್, ಕೊಡಗು ಜಿಲ್ಲಾ ಕಿವುಡರ ಸಂಘದ ಉಪಾಧ್ಯಕ್ಷ ಕೆ.ಕೆ.ಶಂಕರ್ ನಾರಾಯಣ, ಚೆರ್‍ಮೆನ್ ಜೋಸೆಫ್ ಸಾಮ್, ಪ್ರಧಾನ ಕಾರ್ಯದರ್ಶಿ ರಂಜಿತ್ ಪುದಿಯತಂಡ, ಖಜಾಂಚಿ ಕೆ.ಎ.ಸುರೇಶ್ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ದಕ್ಷಿಣ ಕೊಡಗು ಕೆಎಎಲ್‍ಎಸ್ ವ್ಯವಸ್ಥಾಪಕ ಟ್ರಸ್ಟಿ ಅಶ್ವಿನಿ ನಾಚಪ್ಪ, ಗೌರವ ಅತಿಥಿಗಳಾಗಿ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಪಾಂಡಂಡ ಕಮಲ ಮುತ್ತಪ್ಪ, ಗೋಣಿಕೊಪ್ಪ ಲಯನ್ಸ್ ಕ್ಲಬ್‍ನ ಕಾರ್ಯದರ್ಶಿ ಎಂ.ಬಿ.ಸೌಮ್ಯ, ಮಗ್ಗುಲ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಅಧ್ಯಕ್ಷರಾದ ಪೂಜಾ ರವೀಂದ್ರ, ವಕೀಲರಾದ ಅಜ್ಜಿಕುಟ್ಟಿರ ಕವಿತಾ, ಉದ್ಯಮಿ ಸತೀಶ್ ಕೋದಂಡ, ಕೊಡಗು ಕಾಫಿ ಎಸ್ಟೇಟ್‍ನ ಮಾಲೀಕ ಕೆ.ಎಸ್. ಪಳನಾಗಪ್ಪ, ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ಅಧ್ಯಕ್ಷ ಸುನಿಲ್ ಎಂ.ಕಂಡ್ಕೂರ್, ಉಪಾಧ್ಯಕ್ಷರಾದ ಕಾಡಪ್ಪ ಬಿ ಗುಡದಿನ್ನಿ ಮತ್ತು ಶ್ರೀನಾಥ್ ಎ ಕುಲಕರ್ಣಿ ಭಾಗವಹಿಸಲಿದ್ದಾರೆ.









