
ಮಡಿಕೇರಿ ಸೆ.13 NEWS DESK : ವಿಕಲಚೇತನರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಬಿ.ಎಂ.ತಿರುಮಲೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾ ವಿಶೇಷಚೇತನರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಘದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲು ಹಾಗೂ ಸದಸ್ಯತ್ವ ಹೆಚ್ಚಿಸಲು ತೀರ್ಮಾನಿಸಲಾಯಿತು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ವಿಶೇಷ ಚೇತನರ ಮನೆ ಬಾಗಿಲಿಗೆ ತಲುಪಿಸುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು.









