Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೈತಸ್ನೇಹಿ ಹಾವುಗಳನ್ನು ಕೊಲ್ಲಬೇಡಿ : ಕೊಡಗು ವಿವಿ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೈತಸ್ನೇಹಿ ಹಾವುಗಳನ್ನು ಕೊಲ್ಲಬೇಡಿ : ಕೊಡಗು ವಿವಿ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಕರೆ*

ಸೆಪ್ಟೆಂಬರ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.13 : ಹಾವುಗಳೆಂದ ತಕ್ಷಣ ಆತಂಕಪಡುವ ಅಗತ್ಯವಿಲ್ಲ, ಶಾಂತ ಸ್ವಭಾವದ ಏಕಾಂತ ಬಯಸುವ, ಹಗೆತನವಿಲ್ಲದ ನಾಚಿಕೆ ಸ್ವಭಾವದ ಹಾವುಗಳು ರೈತಸ್ನೇಹಿಯಾಗಿವೆ. ಇವುಗಳನ್ನು ಕೊಲ್ಲದೆ ನೈಸರ್ಗಿಕ ಜೈವಿಕ ಸಮತೋಲನ ಕಾಪಾಡಲು ನಾವು ಸಹಕಾರಿಯಾಗಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರರವರು ಕರೆ ನೀಡಿದ್ದಾರೆ. ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಅಳುವಾರದಲ್ಲಿರುವ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ‘ವಿಷಪೂರಿತ ಹಾವುಗಳು ಮತ್ತು ಗುರುತಿಸುವಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು’ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು. ಹಾವು ಕಚ್ಚಿದ ಗುರುತು ಮೈಮೇಲೆ ಕಂಡಾಗ ಶಾಂತವಾಗಿ ಪ್ರಥಮ ಚಿಕೆತ್ಸೆಯೊಂದಿಗೆ ಆಧುನಿಕ ಸೌಲಭ್ಯದ ಚಿಕಿತ್ಸೆಯನ್ನು ಸಕಾಲದಲ್ಲಿ ಪಡೆಯಿರಿ ಎಂದು ಸಲಹೆ ನೀಡಿದರು.
ವಿಷಪೂರಿತ ಹಾವುಗಳ ಬಗ್ಗೆ ಮಾಹಿತಿ, ಹಾವುಗಳನ್ನು ಹಿಡಿಯುವ ಸಲಕರಣೆಗಳು, ಹಾವುಗಳು ಬರದಂತೆ ತಡೆಯುವುದು, ಆಹಾರ, ಪ್ರಥಮ ಚಿಕಿತ್ಸೆ, ಅಪನಂಬಿಕೆಗಳು, ರೈತಸ್ನೇಹಿ ಹಾವುಗಳು, ಇತ್ಯಾದಿ ವಿಷಯದ ಬಗ್ಗೆ ತಜ್ಞರು ನೀಡುವಂತಹ ಮಾಹಿತಿಯನ್ನು ಈ ತರಬೇತಿಯಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ಪಡೆದುಕೊಂಡು ಇತರರಿಗೂ ತಿಳಿಸುವಂತೆ ಹೇಳಿದರು. ಕಾಡು ಪ್ರಾಣಿಗಳು ಕೂಡ ಮನುಷ್ಯರಂತೆ ಜೀವಿಗಳು ಎನ್ನುವುದನ್ನು ಅರಿತು ಅವುಗಳ ಜೊತೆ ಸಹಬಾಳ್ವೆ ಮತ್ತು ಪ್ರೀತಿಯಿಂದ ಇರಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಲಿಂಗರಾಜು ದೊಡ್ಡಮನಿ ಅವರು ಮಾತನಾಡಿ ಎಲ್ಲಾ ಕಡೆ ಹಾವಿನ ವಿಷಕ್ಕೆ ಔಷಧಿ ದೊರೆಯುತ್ತಿದೆ, ಸಾರ್ವಜನಿಕರು ನಿರ್ಲಕ್ಷ್ಯ ಮಾಡದೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಬೇಕು ಎಂದರು. ದಕ್ಷಿಣ ಕನ್ನಡ ಜಿಲ್ಲೆಯ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ ಉಪನಿರ್ದೇಶಕರಾದ ಡಾ.ಕೆ.ಬಿ.ಚಿದಾನಂದ ಅವರು ಮಾತನಾಡಿ, ವಿಷಪೂರಿತ ಹಾವು ಉತ್ಪಾದಿಸುವ ವಿಷವು ಕೇವಲ ಪರಿವರ್ತಿತ ಜೊಲ್ಲು ಇದು ಮನುಷ್ಯನ ದೇಹ ಸಂಪರ್ಕ ಬಂದಾಗ ಮಾತ್ರ ನರಗಳ ವ್ಯೂಹದ ಮೇಲೆ, ರಕ್ತದ ಮೇಲೆ ಸ್ನಾಯುಗಳ ಮೇಲೆ ಹಾನಿಕಾರಕ ಉಂಟುಮಾಡಿ ವಿಷಕಾರಿಯಾಗುತ್ತದೆ. ಮಂಡಲದ ಹಾವು, ಕಟ್ಟು ಹಾವು, ನಾಗರ ಹಾವು ಹೆಚ್ಚು ಜನರ ಸಾವಿಗೆ ಕಾರಣವಾಗುತ್ತಿದೆ. ಪಶುಸಂಗೋಪನೆಯಲ್ಲಿ ಹಾವುಗಳ ಬಗ್ಗೆ ಮೂಢನಂಬಿಕೆಯನ್ನು ತೆಗೆಯಬೇಕು ಎಂದು ತಿಳಿಸಿದರು.
ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಎಂ.ಸಿ. ಶಿವಕುಮಾರ್ ಅವರು ಮಾತನಾಡಿ, ಈಗಾಗಲೇ ಭಾರತ ಸರ್ಕಾರದ ರಾಷ್ಟ್ರೀಯ ಆರೋಗ್ಯ ಯೋಜನೆಯಂತೆ ಹಾವುಗಳ ಕಚ್ಚುವಿಕೆಯಿಂದ ಸಾವಿನ ಪ್ರಮಾಣವನ್ನು ಮುಂದಿನ ಕೆಲವು ವರ್ಷದೊಳಗೆ ಕಡಿಮೆ ಮಾಡುವ ಯೋಜನೆ ಹಾಕಿಕೊಂಡಿದೆ. ರೈತರು ಕಾಲಿಗೆ ಕವಚಗಳು, ಹೊಲಗದ್ದೆಗಳನ್ನು ಮನೆ ಕೊಟ್ಟಿಗೆಯ ಸುತ್ತಮುತ್ತ ಸ್ವಚ್ಚವಾಗಿಟ್ಟುಕೊಳ್ಳಬೇಕು. ಸಂಸ್ಥೆಯಿಂದ ಹಲವಾರು ವನ್ಯಜೀವಿಗಳ ಬಗ್ಗೆ ಹಾವಿನ ಬಗ್ಗೆಯೂ ಸಂಶೋಧನೆ ನಡೆಯುತ್ತಿದೆ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾದ ಹಿರಿಯ ಪಶುವೈದ್ಯಾಧಿಕಾರಿ ಡಾ. ಶ್ರೀದೇವು ಅವರು ಮಾತನಾಡಿ, ಹಾವಿನ ಬಗ್ಗೆ ಸಂಪೂರ್ಣ ಮಾಹಿತಿ ಮಾಡಿಕೊಟ್ಟರು. ಅಲ್ಲದೆ ರೈತರಲ್ಲಿದ್ದ ಅಪನಂಬಿಕೆ, ಪ್ರಥಮ ಚಿಕೆತ್ಸೆ, ಪ್ರತಿಬಂದಕಗಳು ವೈದ್ಯಕೀಯ ಸೌಲಭ್ಯ ದ ಬಗ್ಗೆ ವಿವರಿಸಿದರು ರೈತರಲ್ಲಿದ್ದ ಹಲವಾರು ಆತಂಕಗಳನ್ನು ಬಗೆಹರಿಸಿದರು ಹಾಗೂ ವಿಷಪೂರಿತ ಹಾವುಗಳನ್ನು ಗುರುತಿಸುವ ಬಗ್ಗೆ ಮಾಹಿತಿ ಮಾಡಿಕೊಟ್ಟರು. ಉರಗಪ್ರೇಮಿ ಪುಷ್ಪಾಧರ (ಸ್ನೇಕ್ ಶಾಜಿ) ಹಾವುಗಳ ಬಗ್ಗೆ ಎಚ್ಚರಿಕೆಯ ಕ್ರಮಗಳು ಅಲ್ಲದೇ ಹಾವು ಕಂಡ ತಕ್ಷಣ ಕರೆ ಮಾಡುವಂತೆ ಸೂಕ್ಷ್ಮವಾಗಿ ಅಡಗಿರುವ ಜಾಗ ಗಮನಿಸಿ ವಿಷಯ ಮುಟ್ಟಿಸಲು ತಿಳಿಸಿದರು. ಇದೇ ಸಂದರ್ಭ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳು ಎಲ್ಲಾ ಸಾರ್ವಜನಿಕರು ಈ ತಿಂಗಳ 22 ನೇ ತಾರೀಖಿನಿಂದ ಪ್ರಾರಂಭವಾಗುವ ಶೈಕ್ಷಣಿಕ ಗಣತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ವತಿಯಿಂದ ಹಮ್ಮಿಕೊಂಡಿರುವ ರೇಬೀಸ್ ಹುಚ್ಚು ರೋಗದ ವಿರುದ್ದ ತಮ್ಮ ಸಾಕು ಪ್ರಾಣಿಗಳಿಗೆ ಉಚಿತವಾಗಿ ದೊರೆಯುವ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಉಪನಿರ್ದೇಶಕರು ಮನವಿ ಮಾಡಿದರು. ತರಬೇತಿಗೆ 80 ಕ್ಕೂ ಹೆಚ್ಚು ರೈತರು, ಸಾರ್ವಜನಿಕರು ವಿದ್ಯಾರ್ಥಿಗಳು ಬಾಗವಹಿಸಿದ್ದರು. ತರಬೇತಿಯೂ ಕುಮಾರಿ ಚೈತ್ರ ಮತ್ತು ಸಂಗಡಿಗರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಶಾಂತ್ ಸ್ವಾಗತಿಸಿದರು, ಉಪನ್ಯಾಸಕ ಡಾ. ಜಮೀರ್ ಅಹಮದ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ…

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.