
ಮಡಿಕೇರಿ ಸೆ.15 NEWS DESK : ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸರಾಜು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡಗು ಜಿಲ್ಲೆಯಲ್ಲಿನ ಮಳೆಹಾನಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಳೆಗಾಲದಲ್ಲಿ ಉಂಟಾದ ಹಾನಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಪರಿಹಾರ ಕ್ರಮಗಳ ಬಗ್ಗೆ ಚರ್ಸಿಸಲಾಯಿತು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ರಾಮರಾಜನ್, ಜಿ.ಪಂ ಸಿಇಓಆನಂದ್ ಪ್ರಕಾಶ್ ಮೀನಾ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.









