
ಮಡಿಕೇರಿ ಸೆ.15 NEWS DESK : ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯುವ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಹಳೆಮುಡಿ ಕಟ್ಟಡದಲ್ಲಿ ನಡೆದ ಸಭೆಯಲ್ಲಿ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಂಘ ಸಂಸ್ಥೆಗಳ ಅಧ್ಯಕ್ಷರು, ಎಲ್ಲಾ ಸಮುದಾಯಗಳ ಮುಖಂಡರು, ಊರಿನ ಹಿರಿಯರು, ನಾಡಿನ ಎಲ್ಲಾ ದೇವಾಲಯಗಳ ತಕ್ಕಮುಖ್ಯಸ್ಥರುಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.









