Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ಮಿಲಾದ್  ಬೃಹತ್ ಸಮಾವೇಶ : ಒಗ್ಗಟ್ಟಿನಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ಮಿಲಾದ್  ಬೃಹತ್ ಸಮಾವೇಶ : ಒಗ್ಗಟ್ಟಿನಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ : ಶಾಸಕ ಎ.ಎಸ್.ಪೊನ್ನಣ್ಣ*

ಸೆಪ್ಟೆಂಬರ್ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಸೆ.16 NEWS DESK : ಎಲ್ಲಾ ಜಾತಿ ಧರ್ಮದವರು ಒಗ್ಗೂಡಿದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮುಖ್ಯಮಂತ್ರಿಗಳ ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಸುನ್ನೀ ಮುಹಿಯದ್ದೀನ್ ಜುಮಾ ಮಸೀದಿ ವತಿಯಿಂದ  ಆಯೋಜಿಸಲಾಗಿದ್ದ  ಮದದೇ ಮದೀನ ಮಿಲಾದ್  ಬೃಹತ್ ಸಮಾವೇಶ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸರ್ವಧರ್ಮ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿ ಎಲ್ಲಾ ವರ್ಗದ ಜನರು ಶಾಂತಿಯುತ ಬದುಕನ್ನು ನಡೆಸುತ್ತಾ ಬಂದಿದ್ದಾರೆ. ಆಚರಣೆಗಳಲ್ಲಿ ಭಿನ್ನತೆ ಇದ್ದರೂ ಎಲ್ಲ ಧರ್ಮದವರು ಶಾಂತಿಯನ್ನು ಕಾಪಾಡಬೇಕಾದದ್ದು ಅತ್ಯಗತ್ಯ. ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಶ್ರಮವಹಿಸಿ ಇಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ತಾವು ಬಾಹ್ಯವನ್ನು ಉದ್ದರಿಸುವುದಕ್ಕಿಂತ ನಮ್ಮನ್ನು ನಾವು ಉದ್ದರಿಸಿಕೊಂಡು ಜೀವನ ಸಾಗಿಸಬೇಕು. ಸಾಮಾಜಿಕವಾಗಿರುವ ಎಲ್ಲ ಚೌಕಟ್ಟುಗಳನ್ನು ಕಳಿಸಿಕೊಂಡು ಇಡೀ ಮನುಕುಲವನ್ನು ಪ್ರೀತಿಸುವುದು ಸಹಜವಾದ ಧರ್ಮ ಎಂದರು. ನಾಪೆÇೀಕ್ಲುವಿನ  ಸಂತಮೇರಿ ಚರ್ಚ್ ನ ಜ್ಞಾನಪ್ರಕಾಶ್ ಮಾತನಾಡಿ, ಈ ಭೂಮಿಯ ಮೇಲೆ ನೂರಾರು ಧರ್ಮಗಳಿವೆ ಈ ಎಲ್ಲ ಧರ್ಮಗಳಿಗಿಂತ ಬಹಳ ಮುಖ್ಯವಾದದ್ದು ಮನುಷ್ಯ ಧರ್ಮ. ತಂದೆ ತಾಯಿಗಳನ್ನು ಗೌರವಿಸುವುದು, ಕಳ್ಳತನ ಮಾಡದಿರುವುದು, ಮೋಸ, ಬೂಟಾಟಿಕೆ, ವಂಚನೆ ತ್ಯಜಿಸುವುದು, ಬೇರೆಯವರ ಭಾವನೆಗಳನ್ನು ಅರ್ಥೈಸಿಕೊಳ್ಳುವುದು ಮುಂತಾದ ಉತ್ತಮ ಗುಣಗಳನ್ನು ರೂಡಿಸಿಕೊಂಡು ಮನುಷ್ಯನಾಗಿ ಮಾಡಬೇಕು ಎಂದರು. ಜಮಾಯತ್ ಅಧ್ಯಕ್ಷ ಎಂ.ಹೆಚ್ ಅಬ್ದುಲ್ ರಹಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಸಕರು ಸಮಾಜಮುಖಿ  ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು ಸರಕಾರದಿಂದ  ಹೆಚ್ಚಿನ ಅನುದಾನವನ್ನು ತರುವಲ್ಲಿ ಯಶಸ್ವಿಯಾಗಿದ್ದಾರೆ.  ನಾಲ್ಕುನಾಡು ವ್ಯಾಪ್ತಿಯಲ್ಲಿ ನಾವು ಮದುವೆ ಸಮಾರಂಭಗಳನ್ನು ಮಾಡಲು ಸೂಕ್ತ ವ್ಯವಸ್ಥೆ ಇಲ್ಲ. ಇದನ್ನು ನಿವಾರಿಸಲು ಇದಾಗಲೇ 3.80 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಶಾದಿ ಮಾಲ್ ನಿರ್ಮಾಣ ಮಾಡಲು ಮುಂದಾಗಿದ್ದೇವೆ ಎಂದ ಅವರು  ತಾವು ಮುಖ್ಯಮಂತ್ರಿಗಳ ನಿಕಟ ಸಂಪರ್ಕದಲ್ಲಿ ಇದ್ದು, ಈ ಕಾರ್ಯಕ್ಕೆ ಸಹಕರಿಸುವಂತೆ  ಮನವಿ ಮಾಡಿಕೊಂಡರು. ಕಾರ್ಯಕ್ರಮವನ್ನು ಸಮಸ್ತ ಕೇಂದ್ರ ಮುಶಾವರ ಸದಸ್ಯ  ಶೈಖುನಾ ಅಬ್ದುಲ್ ಫೈಝಿ  ಉದ್ಘಾಟಿಸಿದರು. ಇದಕ್ಕೂ ಮೊದಲು ಹಳೆ ತಾಲೂಕಿನಿಂದ ನಾಪೆÇೀಕ್ಲು ಮಾರ್ಕೆಟ್ ವರೆಗೆ ಮೀಲಾದ್ ಜಾಥಾ ನಡೆಯಿತು. ಜಾಥಾದಲ್ಲಿ ಮಸೀದಿಯ ಸ್ತಬ್ಧ ಚಿತ್ರ, ಮಕ್ಕಳ ದಫ್ ಪ್ರದರ್ಶನ ಗಮನ ಸೆಳೆಯಿತು. ಈ ಸಂದರ್ಭ ಬಸ್ಸು ನಿಲ್ದಾಣದ ಸಮೀಪ ವಿವೇಕಾನಂದ ಯುವಕ ಸಂಘದಿಂದ ಜಾತವನ್ನು ಸ್ವಾಗತಿಸಿ ತಂಪು ಪಾನೀಯವನ್ನು ವಿತರಿಸುವುದರೊಂದಿಗೆ ಸರ್ವಧರ್ಮ ಸಮನ್ವಯ ಸಾರಿ ಸಮಾಜಕ್ಕೆ  ಮಾದರಿಯಾದರು. ಸಂಜೆ ಜರುಗಿದ ಕಾರ್ಯಕ್ರಮದ ವೇದಿಕೆಯಲ್ಲಿ  ಸಮಾಜದ ಪ್ರಮುಖರಾದ ಮನ್ಸೂರ್ ಆಲಿ, ಕೆ.ಎ.ಇಸ್ಮಾಯಿಲ್, ಖುರೇಶಿ ಎಂ.ಐ, ಅಶ್ರಫ್ ಕೆ.ವೈ, ಮೊಹಮ್ಮದ್, ಹಂಸ ಕೊಟ್ಟಮುಡಿ,  ಕೆ.ಕೆ.ಉಸ್ಮಾನ್, ಅಜಿಜ್, ರಶೀದ್, ಅಬ್ದುಲ್, ಸಲೀಂ ಹ್ಯಾರಿಸ್,  ಶೌಕತ್ ಅಲಿ, ಅರಫತ್, ಅಹಮದ್ ಸಿ.ಹೆಚ್, ಮಹಮ್ಮದ್ ಹಾಜಿ ಕುಂಜಿಲ, ಬದ್ರುದ್ದೀನ್ ಸಿ.ಎಂ., ನೌಫಲ್, ಆಸಿಫ್ ಆಲಿ, ತೆರುವತ್ ಹುಸೈನಾರ್, ನಾಲ್ಕು ನಾಡಿನ ಎಲ್ಲಾ ಜಮಾಯತ್ ಅಧ್ಯಕ್ಷರು, ಸದಸ್ಯರು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು  ಸೇರಿದಂತೆ  ಜನಾಂಗಬಾಂಧವರು  ಉಪಸ್ಥಿತರಿದ್ದರು. ಈ ಸಂದರ್ಭ  ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ತಂಡಗಳಿಗೆ ವೇದಿಕೆಯಲ್ಲಿದ್ದ ಗಣ್ಯರು ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು. ಜಮಾಯತ್  ಕಾರ್ಯದರ್ಶಿ ಪಿ.ಎಂ.ಯೂನಸ್ ಸ್ವಾಗತಿಸಿದರು. ಅಹಮದ್ ಸಿ.ಹೆಚ್.ನಿರೂಪಿಸಿ, ತಿರುವತ್ ಹ್ಯಾರಿಸ್ ವಂದಿಸಿದರು.

 ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.