Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಟೋ ಚಾಲಕರ ಕ್ಷೇಮಾಭಿವೃದ್ಧಿ ಮಂಡಳಿ ರಚಿಸಲು ಕೊಡಗು ಎಸ್‌ಡಿಟಿಯು ಒತ್ತಾಯ*
  • *ಮೇ 21 ರಂದು ಶ್ರೀಮಂಗಲ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಚೆನ್ನಯ್ಯನಕೋಟೆ ಪ್ರೀಮಿಯರ್ ಲೀಗ್ : ಟೀಂ ಸ್ಮ್ಯಾಶ್ ಚಾಂಪಿಯನ್ಸ್*
  • *ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸುಂಟಿಕೊಪ್ಪದಲ್ಲಿ ಸಿದ್ಧತೆ*
  • *ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮರುಮೌಲ್ಯಮಾಪನ ಫಲಿತಾಂಶ : ಕುಶಾಲನಗರ ಬಾಲಕಿಯರ ಪ್ರೌಢಶಾಲೆ, ಹೆಬ್ಬಾಲೆ ಪ್ರೌಢಶಾಲೆಗೆ ಶೇ.100 ಫಲಿತಾಂಶ*
  • *ಮೇ 22 ರಂದು ತೊರೆನೂರು ಗ್ರಾಮದೇವತೆ ಜಾತ್ರೋತ್ಸವ* 
  • *ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ :  ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ : ಕೆ.ಜಿ.ಬೋಪಯ್ಯ*
  • *ಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ : ಪ್ರಧಾನಿಗಳಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಕೆ* 
  • *ನಾಯಕತ್ವದ ಕೊರತೆಯಿಂದಲೇ ಆಮದು ನಾಯಕರು ಶಾಸಕರಾಗಿದ್ದಾರೆ : ಸೋಮವಾರಪೇಟೆ ಬಿಜೆಪಿ ಟೀಕೆ*
  • *ಮೇ 22 ರಂದು ಶ್ರೀ ಕೋಟೆ ಮಹಾಗಣಪತಿಗೆ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ : ಗಣಹೋಮ ಮತ್ತು ಅನ್ನ ಸಂತರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಬೆಳೆಹಾನಿ ಸಮೀಕ್ಷೆ ನಿಖರ ಮಾಹಿತಿ ಒದಗಿಸಿ : ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಬೆಳೆಹಾನಿ ಸಮೀಕ್ಷೆ ನಿಖರ ಮಾಹಿತಿ ಒದಗಿಸಿ : ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚನೆ*

ಸೆಪ್ಟೆಂಬರ್ 16, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.16 NEWS DESK : ಕಳೆದ ನಾಲ್ಕು ತಿಂಗಳು ಸುರಿದ ಮಳೆಯಿಂದ ಉಂಟಾದ ಹಾನಿ ಬಗ್ಗೆ ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸ್ಥಳೀಯ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಾಹಿತಿ ಪಡೆದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಪರಿಹಾರ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ಕಳೆದ ನಾಲ್ಕು ತಿಂಗಳು ಸುರಿದ ಧಾರಾಕಾರ ಮಳೆಯಿಂದ ರಸ್ತೆ, ಸೇತುವೆ, ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು, ಹಾಗೆಯೇ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿ ಆಗಿದ್ದು, ಈ ಬಗ್ಗೆ ನಿಖರ ಅಂಕಿ ಅಂಶ ನೀಡುವಂತೆ ಸಚಿವರು ನಿರ್ದೇಶನ ನೀಡಿದರು. ಸಭೆಯ ಆರಂಭದಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಈ ಬಾರಿ ಜೂನ್ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, 2025 ರ ಜ.1 ರಿಂದ ಸೆ.14 ರವರೆಗೆ 2,331 ಮಿ.ಮೀ. ವಾಡಿಕೆ ಮಳೆಗೆ, 2,799 ಮಿ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದರು. ಈ ಬಾರಿ ಮರ ಬಿದ್ದು ಇಬ್ಬರು, ಮನೆ ಗೂಡೆ ಕುಸಿದು ಒಬ್ಬರು ಮೃತ ಪಟ್ಟಿದ್ದಾರೆ. ಹಾಗೆಯೇ 23 ಜಾನುವಾರುಗಳು ಮೃತ ಪಟ್ಟಿದ್ದು, ಪರಿಹಾರ ವಿತರಿಸಲಾಗಿದೆ ಎಂದು ಹೇಳಿದರು. ಕಳೆದ ಬಾರಿಯಂತೆ ಈ ಬಾರಿಯೂ ಸಹ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ವಿಪತ್ತನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ ಎಂದರು. ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಭತ್ತ, ಅಡಿಕೆ, ಸಂಬಂಧಿಸಿದಂತೆ ಬೆಳೆ ಹಾನಿ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಕೃಷಿ, ತೋಟಗಾರಿಕೆ, ಕಂದಾಯ ಹಾಗೆಯೇ ಕಾಫಿ ಮಂಡಳಿಯವರು ಬೆಳೆ ಹಾನಿ ಸಂಬಂಧ ಜಂಟಿ ಸಮೀಕ್ಷೆ ಕೈಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ವಿವರಿಸಿದರು. ಪ್ರಸ್ತುತ ಪ್ರಾಕೃತಿಕ ವಿಕೋಪ ನಿಧಿಯಡಿ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ರೂ.3505.14 ಲಕ್ಷ ಹಣವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಹಾನಿ ಸಂಬಂಧ 4.52 ಕೋಟಿ ರೂ. ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. ಹಾಗೆಯೇ ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು. ಗರ್ವಾಲೆ ಗ್ರಾಮದ ಅಂಗನವಾಡಿಗೆ ಮರ ಬಿದ್ದು ಹಾನಿಯಾಗಿತ್ತು. ಉಳಿದಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಕಂಬಗಳು, ವಿದ್ಯುತ್ ಪರಿವರ್ತಕಗಳು ಹಾನಿಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಅವರು ಮಾಹಿತಿ ನೀಡಿ ಮುಂಗಾರು ಸಂದರ್ಭದಲ್ಲಿ ಮುಟ್ಲು ಗ್ರಾಮ ವ್ಯಾಪ್ತಿಯಲ್ಲಿ ಭತ್ತ ಬೆಳೆಗೆ ಹಾನಿಯಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಬೆಳೆ ಹಾನಿ ಸಂಬಂಧ ನಿಖರ ಮಾಹಿತಿ ಒದಗಿಸಬೇಕು. ರೈತರಿಗೆ ಅನ್ಯಾಯವಾಗದಂತೆ ಗಮನಹರಿಸಬೇಕು ಎಂದರು. ರೈತರಲ್ಲಿ ವಿಶ್ವಾಸ ಮೂಡಿಸಿ ಬೆಳೆ ಸಮೀಕ್ಷೆ ಕೈಗೊಳ್ಳಬೇಕು. ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಸಮೀಕ್ಷೆ ಕೈಗೊಳ್ಳಬೇಕು ಎಂದು ಹೇಳಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ ಅವರು ತೋಟಗಾರಿಕೆ ಬೆಳೆಯಲ್ಲಿ ಅಡಿಕೆ ಬರಲಿದ್ದು, ಈ ಸಂಬಂಧ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ ಅವರು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದಂತೆ ಮಳೆ ಹಾನಿ ಸಂಬಂಧ 4.52 ಕೋಟಿ ರೂ. ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಸ್ತೆ ನಿರ್ವಹಣೆಗಾಗಿ ಸರ್ಕಾರದಿಂದ 14 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು. ಪಂಚಾಯತ್ ರಾಜ್ ಕಾರ್ಯಪಾಲಕ ಎಂಜಿನಿಯರ್ ಜಿ.ಕೆ.ನಾಯಕ್ ಅವರು ಮಾಹಿತಿ ನೀಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ, ಸೇತುವೆ, ತಡೆಗೋಡೆ, ಮೋರಿ, ಕೆರೆ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, 54 ಕೋಟಿ ರೂ. ಬಿಡುಗಡೆಗೆ ಎನ್‍ಡಿಆರ್‍ಎಫ್ ನಡಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಂಚಾಯತ್ ರಾಜ್ ಎಂಜಿನಿಯರ್ ವಿಭಾಗ ಮತ್ತು ಉಪ ವಿಭಾಗದಲ್ಲಿ ಸಹಾಯಕ ಹಾಗೂ ಕಿರಿಯ ಎಂಜಿನಿಯರ್‍ಗಳ ಕೊರತೆ ಇದ್ದು, ಕೆಲಸ ನಿರ್ವಹಿಸುವುದೇ ಕಷ್ಟವಾಗಿದೆ ಎಂದು ಸಭೆಯಲ್ಲಿ ಅವಲತ್ತುಕೊಂಡರು. ಮಳೆಗಾಲ ಸಂದರ್ಭದಲ್ಲಿ ಗ್ರಾಮೀಣ ರಸ್ತೆಯ ಗುಂಡಿಯನ್ನು ಮುಚ್ಚಲಾಗಿದ್ದು, ಈ ಸಂಬಂಧ ಅಂದಾಜು ಪಟ್ಟಿ ಸಲ್ಲಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಕಳೆದ ಬಾರಿಯ ಮಳೆಹಾನಿಯ ಕಾಮಗಾರಿಯ ಮಾಹಿತಿ ನೀಡುವಂತೆ ಸೂಚಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ಹಣ ಬೇಕು ಎಂದು ಎಂಜಿನಿಯರ್‍ಗಳು ಮನವಿ ಮಾಡುತ್ತಾರೆ. ಆದರೆ ಹಣವೇ ಬೇಡವೆಂದು ಹೇಳುತ್ತಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದರು. ಸಹಾಯಕ ಹಾಗೂ ಕಿರಿಯ ಎಂಜಿನಿಯರ್‍ಗಳು ಇಲ್ಲ ಎಂದು ಅಭಿವೃದ್ಧಿ ಕೆಲಸ ನಿಲ್ಲಿಸಲು ಸಾಧ್ಯವಿಲ್ಲ. ಮಳೆ ಹಾನಿ ಸೇರಿದಂತೆ ಅಭಿವೃದ್ಧಿ ಕೆಲಸಗಳು ನಿರಂತರವಾಗಿ ನಡೆಯಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಜೊತೆ ದೂರವಾಣಿ ಮುಖಾಂತರ ಚರ್ಚಿಸಿ ಸಹಾಯಕ ಹಾಗೂ ಕಿರಿಯ ಅಗತ್ಯ ಎಂಜಿನಿಯರ್‍ಗಳನ್ನು ನಿಯೋಜಿಸುವಂತೆ ಕೋರಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆಟೋ ಚಾಲಕರ ಕ್ಷೇಮಾಭಿವೃದ್ಧಿ ಮಂಡಳಿ ರಚಿಸಲು ಕೊಡಗು ಎಸ್‌ಡಿಟಿಯು ಒತ್ತಾಯ*

ಮೇ 21, 2026

*ಮೇ 21 ರಂದು ಶ್ರೀಮಂಗಲ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 20, 2026

*ಚೆನ್ನಯ್ಯನಕೋಟೆ ಪ್ರೀಮಿಯರ್ ಲೀಗ್ : ಟೀಂ ಸ್ಮ್ಯಾಶ್ ಚಾಂಪಿಯನ್ಸ್*

ಮೇ 20, 2026

*ಮೇ 21 ರಂದು ಶ್ರೀಮಂಗಲ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 20 NEWS DESK : ಶ್ರೀಮಂಗಲ 66/11ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಬಿರುನಾಣಿ…

*ಚೆನ್ನಯ್ಯನಕೋಟೆ ಪ್ರೀಮಿಯರ್ ಲೀಗ್ : ಟೀಂ ಸ್ಮ್ಯಾಶ್ ಚಾಂಪಿಯನ್ಸ್*

ಮೇ 20, 2026

*ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸುಂಟಿಕೊಪ್ಪದಲ್ಲಿ ಸಿದ್ಧತೆ*

ಮೇ 20, 2026

*ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮರುಮೌಲ್ಯಮಾಪನ ಫಲಿತಾಂಶ : ಕುಶಾಲನಗರ ಬಾಲಕಿಯರ ಪ್ರೌಢಶಾಲೆ, ಹೆಬ್ಬಾಲೆ ಪ್ರೌಢಶಾಲೆಗೆ ಶೇ.100 ಫಲಿತಾಂಶ*

ಮೇ 20, 2026

*ಮೇ 22 ರಂದು ತೊರೆನೂರು ಗ್ರಾಮದೇವತೆ ಜಾತ್ರೋತ್ಸವ* 

ಮೇ 20, 2026

*ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ :  ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ : ಕೆ.ಜಿ.ಬೋಪಯ್ಯ*

ಮೇ 20, 2026

*ಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ : ಪ್ರಧಾನಿಗಳಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಕೆ* 

ಮೇ 20, 2026

*ನಾಯಕತ್ವದ ಕೊರತೆಯಿಂದಲೇ ಆಮದು ನಾಯಕರು ಶಾಸಕರಾಗಿದ್ದಾರೆ : ಸೋಮವಾರಪೇಟೆ ಬಿಜೆಪಿ ಟೀಕೆ*

ಮೇ 20, 2026

*ಮೇ 22 ರಂದು ಶ್ರೀ ಕೋಟೆ ಮಹಾಗಣಪತಿಗೆ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ : ಗಣಹೋಮ ಮತ್ತು ಅನ್ನ ಸಂತರ್ಪಣೆ*

ಮೇ 20, 2026

*ವಿರಾಜಪೇಟೆ ತಾ.ಪಂ ಕಾರ್ಯಪಡೆ ಸಮಿತಿ ಸಭೆ*

ಮೇ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.