
ಮಡಿಕೇರಿ ಸೆ.17 NEWS DESK : ಕುಶಾಲನಗರದಲ್ಲಿ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೋಜ್ ಖಾನ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ನಂದಕುಮಾರ್, ಆರ್.ಪಿ.ಚಂದ್ರಶೇಖರ್, ಪ್ರಕಾಶ್ ಆಚಾರ್ಯ, ಮುನಿರ್ ಅಹಮದ್, ಕವನ್ ಕೊತ್ತೋಳಿ ಸೇರಿದಂತೆ ಇತರ ಕಾರ್ಯಕರ್ತರು ಸಚಿವ ಸಂತೋಷ್ ಲಾಡ್ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.









