Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನ

ಸೆಪ್ಟೆಂಬರ್ 17, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಸೆ.17 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಗಣಿಸಿರುವ ರಾಜ್ಯಮಟ್ಟದ ಪತ್ರಿಕೆಗಳು ಹಾಗೂ ಇಲಾಖೆಯಡಿ ನೋಂದಾಯಿತ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ಶಿಫಾರಸು ಮಾಡುವ ಪತ್ರಕರ್ತರನ್ನು ತರಬೇತಿಗೆ ಪರಿಗಣಿಸಲಾಗುವುದು. ಈ ಕುರಿತು ಸಂಪಾದಕರನ್ನು ನೇರವಾಗಿ ಸಂಪರ್ಕಿಸಲಾಗುವುದು. ಆಸಕ್ತ ಪತ್ರಕರ್ತರು ಗೂಗಲ್‌ ಫಾರ್ಮ್‌ https://forms.gle/q9NUnsQ7M5xrsruj9 ನಲ್ಲಿ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವ ಮೂಲಕ ತರಬೇತಿಗೆ ನೋಂದಾಯಿಸಬಹುದಾಗಿದೆ. ಅರ್ಜಿ ನಮೂನೆಯಲ್ಲಿ ಸೂಚಿಸಿರುವಂತೆ ಪತ್ರಕರ್ತರು ಭಾವಚಿತ್ರ, ವಯಸ್ಸಿನ ದಾಖಲೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ, ಸದರಿ ಮಾಧ್ಯಮ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತ ದಾಖಲೆ ಹಾಗೂ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ಕುರಿತು ಸೇವಾನುಭವ ದಾಖಲೆಗಳನ್ನು ಸಲ್ಲಿಸಬೇಕು. ಇದು ಮೂರು ದಿನಗಳ ವಸತಿಯುತ ತರಬೇತಿಯಾಗಿದ್ದು, ಪತ್ರಕರ್ತರಿಗೆ ಪ್ರಯಾಣ ಭತ್ಯೆ ನೀಡಲಾಗುವುದು. ಇನ್‌ಫೋಸಿಸ್‌ ಸಂಸ್ಥೆಯ ನಿಗದಿತ ಕ್ಯಾಂಪಸ್‌ಗಳಲ್ಲಿ ತರಬೇತಿ ನಡೆಯಲಿದೆ. ಈ ತರಬೇತಿ ಕಾರ್ಯಕ್ರಮದಲ್ಲಿ ಡಿಜಿಟಲ್‌ ಮಾಧ್ಯಮ, ಎಐ ಬಳಕೆ ಹಾಗೂ ಸಾಫ್ಟ್‌ಸ್ಕಿಲ್‌ ಅಭಿವೃದ್ಧಿ ತರಬೇತಿ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಒಟ್ಟು ಮೂರು ತಂಡಗಳಲ್ಲಿ ತರಬೇತಿ ನಡೆಯಲಿದ್ದು, ಒಂದು ತಂಡದಲ್ಲಿ ಮಹಿಳಾ ಆಯವ್ಯಯದಡಿ ಪತ್ರಕರ್ತೆಯರಿಗಾಗಿ ತರಬೇತಿ ನಡೆಯಲಿದೆ. ಎಲ್ಲ ಮೂರು ತಂಡಗಳಿಗೂ ಈ ಒಂದು ಬಾರಿ ಮಾತ್ರ ಅರ್ಜಿ ಆಹ್ವಾನಿಸಲಾಗುತ್ತಿದೆ. ತರಬೇತಿಯ ಸ್ಥಳ ಮತ್ತು ದಿನಾಂಕವನ್ನು ನಂತರ ತಿಳಿಸಲಾಗುವುದು. ತರಬೇತಿಗೆ ಪತ್ರಕರ್ತರ ಆಯ್ಕೆ ಕುರಿತ ಅಂತಿಮ ನಿರ್ಧಾರ ಅಕಾಡೆಮಿಯದ್ದೇ ಆಗಿರುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 26,2025 ಕೊನೆಯ ದಿನವಾಗಿದೆ.

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.