
ಮಡಿಕೇರಿ ಸೆ.17 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಾರ್ಮಿಕ ಸಚಿವರಾದ ಸಂತೋಷ್ ಎಸ್.ಲಾಡ್ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮೆಹರುಜ್ ಖಾನ್ ಅವರು ಭೇಟಿ ನೀಡಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಜೊತೆ ಪಕ್ಷದ ಚಟುವಟಿಕೆಗಳ ಕುರಿತು ಮಾತುಕತೆ ನಡೆಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಹಾಜರಿದ್ದರು.









