
ಮಡಿಕೇರಿ ಸೆ.17 NEWS DESK : ಅಲ್ಲಾರಂಡ ರಂಗಚಾವಡಿ ಮತ್ತು ಮಡಿಕೇರಿ ಕೊಡವ ಸಮಾಜದ ವತಿಯಿಂದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 158ನೇ ಜನ್ಮ ದಿನವನ್ನು ಸೆ.21 ರಂದು ಆಚರಿಸಲಾಗುವುದು. ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೊಡವ ಸಮಾಜದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಅಪ್ಪಚ್ಚಕವಿ ಕಲಾಭವನ ನಿರ್ಮಾಣ ಸಮಿತಿ ಅಧ್ಯಕ್ಷ ಅಪ್ಪನೆರವಂಡ ಮನೋಜ್ ಮಂದಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಲ್ಲಾರಂಡ ರಂಗಚಾವಡಿ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಅಲ್ಲಾರಂಡ ವಿಠಲ ನಂಜಪ್ಪ ನಿರ್ಮಾಣ ನಿರ್ದೇಶಿಸಿದ 30 ನಿಮಿಷದ ಕವಿ ನೆಪ್ಪುರ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದ್ದು, ಕೊಡವ ಸಿನಿಮಾ ನಿರ್ಮಾಪಕಿ, ಸಹ ನಿರ್ದೇಶಕಿ ಹಾಗೂ ಬರಹಗಾರ್ತಿ ಈರಮಂಡ ಹರಿಣಿ ವಿಜಯ್ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾಹಿತಿ ನಾಗೇಶ್ ಕಾಲೂರು ಅವರನ್ನು ಸನ್ಮಾನಿಸಿ, ಗೌರವಿಸಲಾಗುವುದು.








