
ಮಡಿಕೇರಿ ಸೆ.17 NEWS DESK : ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಎಂ.ಸಿ ನಾಣಯ್ಯ ಅವರ ಮನೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ಕುಶಲೋಪರಿ ವಿಚಾರಿಸಿದರು. ಜನ್ಮದಿನ ಸಂಭ್ರಮದಲ್ಲಿದ್ದ ಎಂ.ಸಿ.ನಾಣಯ್ಯ ಅವರನ್ನು ಅಭಿನಂದಿಸಿ, ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.









