
ಮಡಿಕೇರಿ ಸೆ.17 NEWS DESK : ಕೊಡಗು ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸ್ಮಾರ್ಟ್ ಕಾರ್ಡ್ ವಿತರಣೆ ವಿತರಣೆ ಮಾಡಿದರು. ನಗರದ ಹಿಲ್ ಡೆಲ್ ರೆಸಾರ್ಟ್ (ಕ್ರಿಸ್ಟಲ್ ಕೋರ್ಟ್) ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡು ಮಾತನಾಡಿ, ಕರ್ನಾಟಕ ರಾಜ್ಯ ಸರಕಾರದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಅಸಂಘಟಿತ ಕಾರ್ಮಿಕರ ಏಳಿಗೆಗಾಗಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಅತ್ಯಂತ ಸಂತೋಷದ ವಿಷಯ. ಅದರಂತೆ ಇಂದು ಕೊಡಗಿನ ಅಸಂಘಟಿತ ಕಾರ್ಮಿಕರಿಗೆ ಬಹು ಉಪಯೋಗಿ ಸ್ಮಾರ್ಟ್ ಕಾರ್ಡ್ ಅನ್ನು ನೀಡುತ್ತಿರುವುದು ನಮ್ಮ ನಾಡಿನ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ತುಂಬಾ ಬಲವನ್ನು ನೀಡುತ್ತಿದೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಯಾವಾಗಲೂ ತಳಮಟ್ಟದ ಕಾರ್ಮಿಕರಿಗೆ ಮಹತ್ವವನ್ನು ನೀಡುತ್ತಿದ್ದು, ಎಲ್ಲರೂ ಇದರ ಬಗ್ಗೆ ಹೆಮ್ಮೆ ಪಡಬೇಕೆಂದು ಕರೆ ನೀಡಿದರು. ಈ ಸಂದರ್ಭ ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಅಪಾರ ಜಿಲ್ಲಾ ಅಧಿಕಾರಿ ಐಶ್ವರ್ಯ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಜಿ.ಪಂ.ಸಿಇಓ ಆನಂದ್ ಪ್ರಕಾಶ್ ಮೀನಾ, ಕಾರ್ಮಿಕ ಇಲಾಖೆಯ ಆಯುಕ್ತರು, ಅಧಿಕಾರಿ ವರ್ಗದವರು, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ತಾಲೂಕು ಕೆ ಡಿ ಪಿ ಸದಸ್ಯರು ಕೋಲುಮಂಡ ರಾಫಿಕ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಪೃಥ್ವಿ, ಪಕ್ಷದ ಪ್ರಮುಖರು ಜೋಕಿಮ್, ಮೈನಾ, ಕುಂಡಚೀರ ಮಂಜು ದೇವಯ್ಯ, ಶಬೀರ್, ಮಂಜುನಾಥ್, ಅಸಂಘಟಿತ ಕಾರ್ಮಿಕ ಬಂಧುಗಳು ಉಪಸ್ಥಿತರಿದ್ದರು.









