
ಮಡಿಕೇರಿ ಸೆ.18 NEWS DESK : ನೆಲ್ಲಿಹುದಿಕೇರಿಯ ಶ್ರೀ ವಿಘ್ನೇಶ್ವರ ಮಿತ್ರ ಮಂಡಳಿ ವತಿಯಿಂದ ಗೌರಿ ಗಣೇಶೋತ್ಸವ ಅಂಗವಾಗಿ ಬರಡಿ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ-ಗಣೇಶ ಮೂರ್ತಿ ಯನ್ನು ಶ್ರದ್ಧಾಭಕ್ತಿಯಿಂದ ವಿಸರ್ಜಿಸಲಾಯಿತು. ಮುಂಜಾನೆಯಿಂದ ಅರ್ಚಕರಾದ ಯೋಗೇಶ್ ಭಟ್ ಅವರ ನೇತೃತ್ವದಲ್ಲಿ ಗಣಪತಿಗೆ ಹೋಮ, ಮಂಗಳಾರತಿ, ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಸಿದ್ದಾಪುರ, ಅಮ್ಮತ್ತಿ ಸೇರಿದಂತೆ ಸುತ್ತಮುತ್ತಲ ಗ್ರಾಮ ವ್ಯಾಪ್ತಿಯ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ಬಳಿಕ ಪುಷ್ಪಾಲಂಕಾರ ಭವ್ಯ ಮಂಟಪದಲ್ಲಿ ಮೂರ್ತಿಗಳನ್ನು ಕುಳ್ಳಿರಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ಗಣೇಶ ಮೂರ್ತಿಯನ್ನು ಕೊಂಡೊಯ್ದು ಬರಡಿ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ಗಣಪತಿ ಬಪ್ಪ ಮೋರಿಯ ಎಂಬ ಘೋಷ ಮೊಳಗಿತು. ಮಹಿಳೆಯರು ಮಕ್ಕಳು ಯುವಕರು ಡಿಜೆಗೆ ಹೆಜ್ಜೆ ಹಾಕಿ ಸಂಭ್ರಮದಿಂದ ಕುಣಿದು ಕುಪ್ಪಳಿಸಿದರು. ಶ್ರೀ ವಿಘ್ನೇಶ್ವರ ಮಿತ್ರ ಮಂಡಳಿಯ ಅಧ್ಯಕ್ಷರಾದ ಅನಿಲ್ ಕುಮಾರ್, ಪದಾಧಿಕಾರಿಗಳು, ಸದಸ್ಯರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ : ಸುರೇಶ್ ಗುಹ್ಯ








