Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೆ.28 ರಂದು ಮಡಿಕೇರಿಯಲ್ಲಿ ಮಹಿಳಾ ದಸರಾ ಸಂಭ್ರಮ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೆ.28 ರಂದು ಮಡಿಕೇರಿಯಲ್ಲಿ ಮಹಿಳಾ ದಸರಾ ಸಂಭ್ರಮ

ಸೆಪ್ಟೆಂಬರ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.19 NEWS DESK :  ಮಡಿಕೇರಿ ನಗರ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ 8 ನೇ ವರ್ಷದ ಮಹಿಳಾ ದಸರಾ ಆಯೋಜಿಸಲಾಗಿದ್ದು, ಸೆಪ್ಟೆಂಬರ್, 28 ರಂದು ನಡೆಯಲಿದೆ. ಈ ಸಂಬಂಧ ವೈವಿಧ್ಯಮಯ ಸ್ಪರ್ಧೆಗಳನ್ನು ಜಿಲ್ಲೆಯ ಮಹಿಳೆಯರಿಗಾಗಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ. ಮಹಿಳಾ ದಸರಾ ಅಂಗವಾಗಿ ಜಿಲ್ಲೆಯ ಮಹಿಳೆಯರಿಗಾಗಿಯೇ ವೈವಿಧ್ಯಮಯ ಸ್ಪರ್ಧೆಗಳು, ಕಾರ್ಯಕ್ರಮಗಳು ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಮಡಿಕೇರಿ ದಸರಾ ಸಮಿತಿ, ಮಡಿಕೇರಿ ನಗರಸಭೆ ಅಧ್ಯಕ್ಷರು, ಸದಸ್ಯೆಯರು,  ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದೆ. :: ವಿವಿಧ ಸ್ಪರ್ಧೆಗಳು : : ಮೆಹಂದಿ ಹಾಕುವುದು, ಭಾರತೀಯ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ, ಕೇಶವಿನ್ಯಾಸ,  ಸೀರೆಗೆ ನಿಖರ ಬೆಲೆ ಹೇಳುವುದು,  ಕಣ್ಣಿಗೆ ಬಟ್ಟೆ ಕಟ್ಟಿ ಮೇಕಪ್ ಮಾಡುವುದು, ಬಲೂನ್ ಗ್ಲಾಸ್ ಸ್ಪರ್ಧೆ, ಬಾಂಬ್ ಇನ್ ದಿ ಸಿಟಿ, ಕೆರೆ ದಡ ಆಟ, ಹಣೆಯಲ್ಲಿ ಬಿಸ್ಕೆಟ್ ಇಟ್ಟು ತಿನ್ನುವುದು, ಬಲೂನ್ ಕಾಲಲ್ಲಿ ಹಿಡಿದು ಓಡುವುದು, ಜಾನಪದ ನೃತ್ಯ, ವಾಲಗ ಕುಣಿತ(60 ವರ್ಷ ಒಳಗಿನವರಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಎರಡು ವಿಭಾಗ), ದಸರಾಗೆ ಸಂಬಂಧಿಸಿದಂತೆ ರಸಪ್ರಶ್ನೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. :: ಮೇಕಪ್ ಮಾಡುವ ಸ್ಪರ್ಧೆ :: ಕೇಶವಿನ್ಯಾಸ, ಮೆಹಂದಿ,  ಸ್ಪರ್ಧೆಗಳಿಗೆ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು.  ತಾ.28 ರಂದು ಮಹಿಳಾ ದಸರಾ ದಿನದಂದೇ ಸ್ಪರ್ಧಿಗಳು ತಮ್ಮ ಹೆಸರನ್ನು ಬೆಳಿಗ್ಗೆ ಒಂಭತ್ತು ಗಂಟೆಗೆ ಆಗಮಿಸಿ ನೋಂದಾಯಿಸಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಬಾರಿ ಹೆಚ್ಚಿಗೆ ಸೀರೆಗಳನ್ನು ಸ್ಪರ್ಧೆಗೆ ಇರಿಸಲಾಗುವದೆಂದು ಸಂತೋಷ್ ತಿಳಿಸಿದ್ದಾರೆ.  :: ಮಾರಾಟ ಮಳಿಗೆಗಳು : : ಮಹಿಳಾ ದಸರಾ ಸಂಬಂಧ ಮಹಿಳೆಯರು ತಯಾರಿಸಿದ ಉತ್ಪನ್ನಗಳು ಹಾಗೂ ಇತರ ಉತ್ಪನ್ನಗಳು, ಗಿಡಗಳ ಪ್ರದರ್ಶನ ಹಾಗೂ ಮಾರಾಟಕ್ಕಾಗಿ ಸ್ಟಾಲ್‍ಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. 15 ಸ್ಟಾಲ್‍ಗಳಿಗೆ ಅವಕಾಶವಿದ್ದು, ಆಸಕ್ತರು ಸಬಿತಾ (8660180251),  ಸವಿತಾ(9483785810) ಅವರುಗಳನ್ನು ಸಂಪರ್ಕಿಸಬಹುದಾಗಿದೆ. ಈ ಸಂಬಂಧ ನಡೆದ ಪೂರ್ವಭಾವಿ ತಯಾರಿ ಸಭೆಯಲ್ಲಿ ನಗರಸಭೆ ಹಾಗೂ ನಗರ ದಸರಾ ಸಮಿತಿ ಅಧ್ಯಕ್ಷರಾದ ಪಿ.ಕಲಾವತಿ,  ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಸಂತೋಷ್ ದಸರಾ ಸಮಿತಿ ಖಜಾಂಚಿ ಸಬಿತಾ, ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಪಿ.ಸವಿತಾ ಕೀರ್ತನ್, ನಗರಸಭೆ ಸದಸ್ಯರಾದ ಉಷಾ ಕಾವೇರಪ್ಪ, ಚಿತ್ರಾವತಿ, ಕಳೆದ ಸಾಲಿನ ಮಹಿಳಾ ದಸರಾ ಸಂಚಾಲಕಿಯಾಗಿದ್ದ ಕುಡೆಕಲ್ ಸವಿತಾ, ಸಾಂಸ್ಕೃತಿಕ ಸಮಿತಿ ಸದಸ್ಯರುಗಳಾದ ಅಂಜಲಿ ಅಶೋಕ್, ಕೇಡನ ಪ್ರಗತಿ, ಬಾಳೆಯಡ ದಿವ್ಯ ಮಂದಪ್ಪ, ಹೇಮಾ ಅಜಿತ್,   ಮಹಿಳಾ ದಸರಾ ಸದಸ್ಯೆಯರಾದ ಪವಿತ್ರ ಗಿರೀಶ್, ಪ್ರೇಮ, ಜಶ್ಮಿತಾ, ನೇತ್ರ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.