Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡುಮಂಗಳೂರು : ವಿದ್ಯಾರ್ಥಿಗಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ : ಉತ್ತಮ ಶಿಕ್ಷಣದಿಂದ ಮಕ್ಕಳಿಗೆ ಉತ್ತಮ ಭವಿಷ್ಯ : ಸೂದನ ರತ್ನಾವತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡುಮಂಗಳೂರು : ವಿದ್ಯಾರ್ಥಿಗಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ : ಉತ್ತಮ ಶಿಕ್ಷಣದಿಂದ ಮಕ್ಕಳಿಗೆ ಉತ್ತಮ ಭವಿಷ್ಯ : ಸೂದನ ರತ್ನಾವತಿ*

ಸೆಪ್ಟೆಂಬರ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಸೆ.20 NEWS DESK : ಮಕ್ಕಳು ಉತ್ತಮ ಶಿಕ್ಷಣ ಪಡೆದು ವಿದ್ಯಾವಂತರಾದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಪ್ರತಿನಿತ್ಯ ವಿದ್ಯಾರ್ಥಿಗಳು ಶಿಕ್ಷಕರು ನೀಡುವ ಪಾಠ ಪ್ರವಚನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಉತ್ತಮ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು
ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ನಿವೃತ್ತ ಹಿರಿಯ ಅಧಿಕಾರಿಯೂ ಆದ ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯೆ ಸೂದನ ರತ್ನಾವತಿ ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಡಿ ಎಂ ಸಿ ಸಹಯೋಗದೊಂದಿಗೆ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ನೋಟ್‌ಬುಕ್‌, ಲೇಖನ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸ್ವತಃ ಲೇಖನ ಸಾಮಾಗ್ರಿಗಳನ್ನು ಉಚಿತವಾಗಿ ವಿತರಿಸಿ
ಮಾತನಾಡಿದರು. ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದಾಗಬೇಕು. ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಉತ್ತಮ ಗುಣಮಟ್ಟದ ಶಿಕ್ಷಣದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹೆಚ್ಚಾಗಿದೆ. ಸಾರ್ವಜನಿಕವಾಗಿಯೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಕೊಡುಗೆ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು. ಈ ಶಾಲೆಯಲ್ಲಿ ಮಕ್ಕಳಿಗೆ ತಂತ್ರಜ್ಞಾನದ ಸ್ಮಾರ್ಟ್ ಕ್ಲಾಸ್ ಮೂಲಕ ಕಲಿಕೆಗಾಗಿ ವಿಶೇಷ ಒತ್ತು ನೀಡಲಾಗಿದ್ದು, ಇದು ಮಕ್ಕಳ ಕಲಿಕೆಗೆ ಸಹಕಾರಿಯಾಗಿದೆ. ಶಿಕ್ಷಕರು ಮಕ್ಕಳ ಕಲಿಕೆಗೆ ಪೂರಕವಾಗುವಂತೆ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವ ಕೆಲಸ ಮಾಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸೂದನ ರತ್ನಾವತಿ ಸಲಹೆ ನೀಡಿದರು. ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ ಮಾತನಾಡಿ,
ಬಡ ಮಕ್ಕಳ ಬಾಳಿಗೆ ಸಹಾಯಹಸ್ತ ನೀಡುವ ಸಹಾಯ ದಾರಿದೀಪವಾಗುತ್ತದೆ’. ಇದಕ್ಕೆ ಪೂರಕವಾಗಿ ದಾನಿಗಳಾದ ಸೂದನ ರತ್ನಾವತಿ ಅವರು ಕಳೆದ ಕೆಲವು ವರ್ಷಗಳಿಂದ ಬಡ ಮಕ್ಕಳಿಗೆ ಲೇಖನ ಸಾಮಾಗ್ರಿಗಳನ್ನು ನೀಡುತ್ತಾ ಬಂದಿರುವುದು ಸ್ತುತ್ಯಾರ್ಹವಾದುದು ಎಂದು ಶ್ಲಾಘಿಸಿದರು. ಸರ್ಕಾರಿ ಶಾಲೆಗಳಲ್ಲಿ ಅಭ್ಯಾಸ ಮಾಡಿದವರು ಸಮಾಜದ ಉನ್ನತ ಹುದ್ದೆ ಹಾಗೂ ವಿವಿಧ ಸ್ತರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ತಮ್ಮನ್ನು ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.  ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಕಳೆದ ಹಲವು ವರ್ಷಗಳಿಂದ ಉಚಿತ ನೋಟ್ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ನೀಡುತ್ತಿರುವ ದಾನಿಗಳಾದ ಸೂದನ ರತ್ನಾವತಿ ಅವರ ಸೇವಾ ಕಾರ್ಯ ಪ್ರಶಂಸನೀಯವಾದುದು. ದಾನಿಗಳು ಸರ್ಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಕಲಿಕೆಗೆ ಪ್ರೋತ್ಸಾಹ ನೀಡಿದರೆ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೂಡ ಸಾಧ್ಯ ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ‌ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಶಾಲೆಯ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಎನ್.ಸುಜಾತ, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ , ವಿದ್ಯಾರ್ಥಿಗಳು ಇದ್ದರು. ಇದೇ ವೇಳೆ ದಾನಿ ಸೂದನ ರತ್ನಾವತಿ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಯಿಂದ ಕೂಡಿಗೆ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿಯಾಗಿ ಮುಂಬಡ್ತಿ ಹೊಂದಿರುವ ಬಿ.ಎನ್.ಪುಷ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.