
ಸೋಮವಾರಪೇಟೆ NEWS DESK ಸೆ.21 : ಕೊಡಗು ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕಾಗಿ ಆಯ್ಕೆ ಪ್ರಕ್ರಿಯೆ ಸೋಮವಾರಪೇಟೆಯ ಸಂತ ಜೋಸೆಫರ ಪದವಿ ಕಾಲೇಜಿನಲ್ಲಿ ನಡೆಯಿತು. ಸೋಮವಾರಪೇಟೆಯ ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ಅವಿನಾಶ್ ಅವರು ಕಾರ್ಯಕ್ರಮವನ್ನು ಉದ್ಘಾಟಸಿದರು. ಜಿಲ್ಲೆಯ ವಿವಿಧ ಪದವಿ ಕಾಲೇಜುಗಳಿಂದ ಆಗಮಿಸಿದ್ದ 50 ವಿದ್ಯಾರ್ಥಿಗಳು ತಮ್ಮ ಕಬಡ್ಡಿ ಕೌಶಲ್ಯವನ್ನು ಪ್ರದರ್ಶಿಸಿದರು. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಷ್ಟ್ರೀಯ ಕಬಡ್ಡಿ ಆಟಗಾರ ಹಾಗೂ ಅಂತಾರಾಷ್ಟ್ರೀಯ ಹ್ಯಾಂಡ್ಬಾಲ್ ಆಟಗಾರ ಗ್ರೀನಿಡ್ಜ್ ಡಿ. ಕುನ್ಹಾ, ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಆಟಗಾರರಿಗೆ ಕಬಡ್ಡಿ ಆಟದ ತಂತ್ರಗಾರಿಕೆ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ಓದಿನೊಂದಿಗೆ ಕ್ರೀಡಾ ಚಟುವಟಿಕೆಯಲ್ಲೂ ಭಾಗವಹಿಸಬೇಕು. ಕ್ರೀಡೆಯಿಂದ ಮಾನಸಿಕ ಹಾಗು ದೈಹಿಕ ಅರೋಗ್ಯ ವೃದ್ದಿಸುತ್ತದೆ. ಕ್ಷೇತ್ರ ಕ್ಷೇತ್ರದಲ್ಲೂ ಉದ್ಯೋಗದ ಅವಕಾಶ ಹೆಚ್ಚಿವೆ. ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದವರು ಶಿಸ್ತು ಮತ್ತು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಕಿವಿಮಾತು ಹೇಳಿದರು. ಗ್ರೀನಿಡ್ಜ್ ಡಿ.ಕುನ್ಹಾ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಸೋಮವಾರಪೇಟೆಯ ಬಿಟಿಸಿಜಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗುರುಪ್ರಸಾದ್, ಹಾಗು ಸೇಂಟ್ ಜೋಸೆಫ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಿವಕುಮಾರ್ ಅವರನ್ನೊಳಗೊಂಡ ಸಮಿತಿಯು ಆಯ್ಕೆ ಪ್ರಕ್ರಿಯೆಯ ಮೇಲ್ವಿಚಾರಣೆ ವಹಿಸಿತು.









